← Psalms (26/150) → |
1. | ಓ ಕರ್ತನೇ, ನನಗೆ ನ್ಯಾಯತೀರಿಸು; ಯಾಕಂದರೆ ನಾನು ನನ್ನ ಯಥಾರ್ಥತ್ವ ದಲ್ಲಿ ನಡೆದುಕೊಂಡಿದ್ದೇನೆ. ನಾನು ಕರ್ತನಲ್ಲಿ ಭರ ವಸವಿಟ್ಟಿದ್ದೇನೆ; ನಾನು ಕದಲುವದಿಲ್ಲ. |
2. | ಓ ಕರ್ತನೇ ನನ್ನನ್ನು ಶೋಧಿಸಿ ಪರೀಕ್ಷಿಸು; ನನ್ನ ಅಂತರಿಂದ್ರಿ ಯಗಳನ್ನೂ ಹೃದಯವನ್ನೂ ಶೋಧಿಸು. |
3. | ನಿನ್ನ ಪ್ರೀತಿಯೂ ಕೃಪೆಯೂ ನನ್ನ ಕಣ್ಣುಗಳ ಮುಂದೆ ಅವೆ; ನಾನು ನಿನ್ನ ಸತ್ಯದಲ್ಲಿ ನಡೆದುಕೊಂಡಿದ್ದೇನೆ. |
4. | ನಿಷ್ಪ್ರಯೋಜಕರೊಂದಿಗೆ ನಾನು ಕೂತುಕೊಳ್ಳ ಲಿಲ್ಲ; ವಂಚಕರ ಸಂಗಡ ನಾನು ಹೋಗುವದಿಲ್ಲ. |
5. | ದುರ್ಮಾರ್ಗಿಗಳ ಸಭೆಯನ್ನು ಹಗೆಮಾಡಿದ್ದೇನೆ; ದುಷ್ಟರ ಸಂಗಡ ಕೂತುಕೊಳ್ಳುವದಿಲ್ಲ. |
6. | ಓ ಕರ್ತನೇ, ಸ್ತೋತ್ರದ ಶಬ್ದದಿಂದ ಪ್ರಕಟಿಸಿ ನಿನ್ನ ಅದ್ಭುತಗಳ ನ್ನೆಲ್ಲಾ ತಿಳಿಸುವ ಹಾಗೆ |
7. | ನನ್ನ ಕೈಗಳನ್ನು ನಿರ್ಮಲ ತ್ವದಲ್ಲಿ ತೊಳೆದು, ನಿನ್ನ ಬಲಿಪೀಠವನ್ನು ಸುತ್ತುವೆನು. |
8. | ಕರ್ತನೇ, ನಿನ್ನ ವಾಸಸ್ಥಾನವನ್ನೂ ಗೌರವದ ನಿವಾಸವನ್ನೂ ನಾನು ಪ್ರೀತಿಸಿದ್ದೇನೆ. |
9. | ಪಾಪಾತ್ಮರ ಸಂಗಡ ನನ್ನ ಪ್ರಾಣವನ್ನೂ ರಕ್ತ ಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡ. |
10. | ಅವರ ಕೈಗಳಲ್ಲಿ ಕೇಡು ಅದೆ; ಅವರ ಬಲಗೈ ಲಂಚಗಳಿಂದ ತುಂಬಿದೆ. |
11. | ನಾನಾದರೋ ನನ್ನ ಯಥಾರ್ಥತ್ವದಲ್ಲಿ ನಡೆಯು ತ್ತೇನೆ: ನನ್ನನ್ನು ವಿಮೋಚಿಸು; ನನಗೆ ಕರುಣೆಯುಳ್ಳ ವನಾಗಿರು. |
12. | ನನ್ನ ಪಾದವು ಸಮಸ್ಥಳದಲ್ಲಿ ನಿಲ್ಲುತ್ತದೆ; ಸಭೆಗಳಲ್ಲಿ ನಾನು ಕರ್ತನನ್ನು ಸ್ತುತಿಸುವೆನು. |
← Psalms (26/150) → |