← Psalms (34/150) → |
1. | ನಾನು ಎಲ್ಲಾ ಕಾಲಗಳಲ್ಲಿ ಕರ್ತನನ್ನು ಸ್ತುತಿಸುವೆನು; ಆತನ ಸ್ತೋತ್ರವು ಯಾವಾ ಗಲೂ ನನ್ನ ಬಾಯಲ್ಲಿ ಇರುವದು. |
2. | ನನ್ನ ಪ್ರಾಣವು ಕರ್ತನಲ್ಲಿ ಹೊಗಳಿಕೊಳ್ಳುವದು; ಇದನ್ನು ದೀನರು ಕೇಳಿ ಸಂತೋಷಪಡುವರು. |
3. | ನನ್ನ ಸಂಗಡ ಕರ್ತ ನನ್ನು ಘನಪಡಿಸಿರಿ. ನಾವು ಒಟ್ಟಾಗಿ ಆತನ ಹೆಸ ರನ್ನು ಘನಪಡಿಸೋಣ. |
4. | ನಾನು ಕರ್ತನನ್ನು ಹುಡು ಕಿದೆನು; ಆಗ ಆತನು ನನಗೆ ಉತ್ತರಕೊಟ್ಟು ನನ್ನ ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದನು. |
5. | ಅವರು ಆತನನ್ನು ದೃಷ್ಟಿಸಿ ಪ್ರಕಾಶ ಹೊಂದಿದರು. ಅವರ ಮುಖಗಳು ನಾಚಿಕೆಪಡಲಿಲ್ಲ. |
6. | ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು. |
7. | ಆತನಿಗೆ ಭಯಪಡುವವರ ಸುತ್ತಲೂ ಕರ್ತನ ದೂತನು ಇಳು ಕೊಂಡು ಅವರನ್ನು ಕಾಪಾಡುತ್ತಾನೆ. |
8. | ಕರ್ತನು ಒಳ್ಳೆಯವನೆಂದು ರುಚಿಸಿ ನೋಡಿರಿ; ಆತನಲ್ಲಿ ಆಶ್ರ ಯಿಸಿಕೊಳ್ಳುವ ಮನುಷ್ಯನು ಧನ್ಯನು. |
9. | ಆತನ ಪರಿ ಶುದ್ಧರೇ, ನೀವು ಕರ್ತನಿಗೆ ಭಯಪಡಿರಿ; ಆತನಿಗೆ ಭಯಪಡುವವರಿಗೆ ಏನೂ ಕೊರತೆ ಇಲ್ಲ. |
10. | ಪ್ರಾಯದ ಸಿಂಹಗಳು ಕೊರತೆಯಾಗಿ ಹಸಿಯುತ್ತವೆ; ಆದರೆ ಕರ್ತನನ್ನು ಹುಡುಕುವವರು ಯಾವ ಒಳ್ಳೆಯ ದಕ್ಕಾದರೂ ಕೊರತೆ ಪಡುವದಿಲ್ಲ. |
11. | ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು. |
12. | ಒಳ್ಳೆಯದನ್ನು ನೋಡುವಂತೆ ದಿವಸಗಳನ್ನು ಪ್ರೀತಿ ಮಾಡಿ, ಜೀವವನ್ನು ಕೋರುವ ಮನುಷ್ಯನು ಯಾರು? |
13. | ಕೇಡಿನಿಂದ ನಿನ್ನ ನಾಲಿಗೆಯನ್ನೂ ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ಕಾಯಿ. |
14. | ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾ ಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು. |
15. | ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ. |
16. | ಕೇಡನ್ನು ಮಾಡುವವರ ಜ್ಞಾಪಕವನ್ನು ಭೂಮಿ ಯೊಳಗಿಂದ ಕಡಿದುಹಾಕುವದಕ್ಕೆ ಕರ್ತನ ಮುಖವು ಅವರಿಗೆ ವಿರೋಧವಾಗಿದೆ. |
17. | ನೀತಿವಂತರು ಕೂಗು ತ್ತಾರೆ; ಆಗ ಕರ್ತನು ಕೇಳಿ ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವರನ್ನು ಬಿಡಿಸುತ್ತಾನೆ. |
18. | ಮುರಿದ ಹೃದಯದವರಿಗೆ ಕರ್ತನು ಸವಿಾಪವಾಗಿದ್ದಾನೆ; ಜಜ್ಜಿದ ಆತ್ಮವನ್ನು ರಕ್ಷಿಸುತ್ತಾನೆ. |
19. | ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ. |
20. | ಆತನ ಎಲುಬು ಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿಯಲ್ಪಡುವದಿಲ್ಲ. |
21. | ಕೇಡು ದುಷ್ಟನನ್ನು ಕೊಲ್ಲು ವದು; ನೀತಿವಂತನನ್ನು ಹಗೆಮಾಡುವವರು ಹಾಳಾ ಗುವರು. |
22. | ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ. |
← Psalms (34/150) → |