← Psalms (41/150) → |
1. | ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು. |
2. | ಕರ್ತನು ಅವನನ್ನು ಕಾಪಾಡಿ ಜೀವದಲ್ಲಿಡುವನು; ಅವನು ಭೂಮಿಯಲ್ಲಿ ಧನ್ಯನಾಗಿ ರುವನು; ನೀನು ಅವನ ಶತ್ರುಗಳ ಇಷ್ಟಕ್ಕೆ ಅವನನ್ನು ಒಪ್ಪಿಸದೆ ಇರುವಿ. |
3. | ಹಾಸಿಗೆಯ ಮೇಲೆ ಕ್ಷೀಣಿಸುವ ವನನ್ನು ಕರ್ತನು ಬಲಪಡಿಸುವನು. ನೀನು ಅವನ ರೋಗದಲ್ಲಿ ಹಾಸಿಗೆಯನ್ನು ಸರಿಮಾಡುವಿ. |
4. | ಕರ್ತನೇ, ನನಗೆ ಕರುಣೆ ತೋರಿಸಿ ನನ್ನ ಪ್ರಾಣವನ್ನು ಸ್ವಸ್ಥಮಾಡು; ನಿನಗೆ ವಿರೋಧವಾಗಿ ಪಾಪಮಾಡಿದೆ ನೆಂದು ನಾನು ಹೇಳಿದೆನು. |
5. | ಅವನು ಸತ್ತು ಅವನ ಹೆಸರು ನಾಶವಾಗುವದು ಯಾವಾಗ ಎಂದು ನನ್ನ ಶತ್ರುಗಳು ನನ್ನನ್ನು ಕುರಿತು ಕೇಡನ್ನು ಮಾತನಾಡುತ್ತಾರೆ. |
6. | ನನ್ನನ್ನು ನೋಡುವದಕ್ಕೆ ಅವನು ಬಂದರೆ ವ್ಯರ್ಥ ಮಾತು ಆಡುತ್ತಾನೆ; ಅವನ ಹೃದಯವು ಅವನಿಗೆ ಅಕ್ರಮವನ್ನು ಕೂಡಿಸುತ್ತದೆ; ಅವನು ಹೊರಗೆ ಹೋದಾಗ ಅದನ್ನು ಹೇಳುತ್ತಾನೆ. |
7. | ನನ್ನನ್ನು ಹಗೆ ಮಾಡುವವರೆಲ್ಲರು ಕೂಡಿ ನನ್ನ ಮೇಲೆ ಪಿಸುಗುಟ್ಟು ತ್ತಾರೆ; ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತಾರೆ; |
8. | ಕೆಟ್ಟ ರೋಗವು ಅವನನ್ನು ಹಿಡಿದದೆ, ಈಗ ಅವನು ಮಲಗಿಕೊಂಡವನಾಗಿ ಎಂದಿಗೂ ಏಳನು ಎಂದು ಅವರು ಅನ್ನುತ್ತಾರೆ. |
9. | ಹೌದು, ನನ್ನ ರೊಟ್ಟಿಯನ್ನು ತಿಂದಂಥ, ನಾನು ಭರವಸವಿಟ್ಟಂಥ, ನನ್ನ ಆಪ್ತ ಸ್ನೇಹಿತನು ನನಗೆ ವಿರೋಧವಾಗಿ ತನ್ನ ಕಾಲನ್ನು ಅಡ್ಡಗೊಟ್ಟಿದ್ದಾನೆ. |
10. | ಆದರೆ ನೀನು, ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸಿ ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಪ್ರತೀಕಾರವನ್ನು ಮಾಡುವೆನು. |
11. | ನನ್ನ ಶತ್ರು ನನ್ನ ಮೇಲೆ ಜಯಧ್ವನಿ ಮಾಡದೆ ಇರುವದ ರಿಂದಲೇ ನಿನ್ನ ಒಲುಮೆಯು ನನಗಿರುವ ದೆಂದು ನಾನು ಬಲ್ಲೆನು. |
12. | ನನ್ನನ್ನಾದರೋ ನನ್ನ ಯಥಾರ್ಥ ತ್ವದಲ್ಲಿ ನೀನು ಉದ್ಧರಿಸಿ ನಿನ್ನ ಸಮ್ಮುಖದಲ್ಲಿ ಎಂದೆಂದಿಗೂ ನನ್ನನ್ನು ನಿಲ್ಲಿಸಿದ್ದೀ. |
13. | ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್. ಆಮೆನ್. |
← Psalms (41/150) → |