← Psalms (44/150) → |
1. | ಓ ದೇವರೇ, ನೀನು ಹಿಂದಿನ ಕಾಲದಲ್ಲಿ, ಅಂದರೆ ನಮ್ಮ ತಂದೆಗಳ ದಿವಸದಲ್ಲಿ ಮಾಡಿದ ಕಾರ್ಯವನ್ನು ಅವರು ನಮಗೆ ವಿವರಿಸಿದ್ದಾರೆ; ಅದನ್ನು ನಾವು ನಮ್ಮ ಕಿವಿಗಳಿಂದ ಕೇಳಿದ್ದೇವೆ. |
2. | ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ. |
3. | ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ. |
4. | ಓ ದೇವರೇ, ನೀನೇ ನನ್ನ ಅರಸನು; ಯಾಕೋಬ ನಿಗೆ ಬಿಡುಗಡೆಗಳನ್ನು ಆಜ್ಞಾಪಿಸು. |
5. | ನಿನ್ನಿಂದ ನಮ್ಮ ವೈರಿಗಳನ್ನು ದೊಬ್ಬುವೆವು; ನಿನ್ನ ಹೆಸರಿನಲ್ಲಿ ನಮ್ಮ ಎದುರಾಳಿಗಳನ್ನು ತುಳಿಯುವೆವು. |
6. | ನಾನು ನನ್ನ ಬಿಲ್ಲಿ ನಲ್ಲಿ ಭರವಸವಿಡುವದಿಲ್ಲ. ನನ್ನ ಕತ್ತಿಯು ನನ್ನನ್ನು ರಕ್ಷಿಸುವದಿಲ್ಲ. |
7. | ನೀನು ನಮ್ಮ ವೈರಿಗಳಿಂದ ನಮ್ಮನ್ನು ರಕ್ಷಿಸಿದಿ; ನಮ್ಮನ್ನು ಹಗೆಮಾಡಿದವರನ್ನು ನಾಚಿಕೆ ಪಡಿಸಿದಿ. |
8. | ನಾವು ದಿನವೆಲ್ಲಾ ದೇವರಲ್ಲಿ ಹೆಚ್ಚಳ ಪಡುವೆವು; ನಿನ್ನ ಹೆಸರನ್ನು ಯುಗಯುಗಕ್ಕೂ ಕೊಂಡಾ ಡುವೆವು. ಸೆಲಾ. |
9. | ಆದರೆ ನೀನು ನಮ್ಮನ್ನು ತಳ್ಳಿಬಿಟ್ಟು ನಮ್ಮನ್ನು ಅವಮಾನಪಡಿಸುತ್ತೀ; ನಮ್ಮ ಸೈನ್ಯಗಳ ಸಂಗಡ ನೀನು ಹೊರಟುಹೋಗುವದಿಲ್ಲ. |
10. | ವೈರಿಯ ಮುಂದೆ ನಾವು ಹಿಂದಿರುಗ ಮಾಡುತ್ತೀ; ನಮ್ಮ ಹಗೆಯವರು ತಮಗೋಸ್ಕರ ಕೊಳ್ಳೆ ಇಡುತ್ತಾರೆ. |
11. | ತಿನ್ನತಕ್ಕ ಕುರಿಗಳ ಹಾಗೆ ನಮ್ಮನ್ನು ಅವರಿಗೆ ಒಪ್ಪಿಸಿದ್ದೀ; ಅನ್ಯಜನಾಂಗ ಗಳಲ್ಲಿ ನಮ್ಮನ್ನು ಚದರಿಸಿದ್ದೀ. |
12. | ನಿನ್ನ ಜನರನ್ನು ಕ್ರಯವಿಲ್ಲದೆ ಮಾರಿಬಿಡುತ್ತೀ. ಅವರ ಬೆಲೆಯಿಂದ ನೀನು ನಿನ್ನ ಸಂಪತ್ತನ್ನು ಹೆಚ್ಚು ಮಾಡಲಿಲ್ಲ. |
13. | ನಮ್ಮ ನೆರೆಯವರಿಗೆ ನಮ್ಮನ್ನು ನಿಂದೆಗೂ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವಾಗಿಯೂ ನಮ್ಮನ್ನು ಇಡುತ್ತೀ. |
14. | ಅನ್ಯಜನಾಂಗಗಳಲ್ಲಿ ಗಾದೆಯಾಗಿಯೂ ಪ್ರಜೆಗಳಲ್ಲಿ ತಲೆಯಾಡಿಸುವಂತೆ ನಮ್ಮನ್ನು ಇಡುತ್ತೀ. |
15. | ನಿಂದಕನ ಮತ್ತು ದೂಷಕನ ಸ್ವರಕ್ಕೋಸ್ಕರವೂ ಶತ್ರುವಿನ ಮುಯ್ಯಿಗೆಮುಯ್ಯಿ ಕೊಡುವವನ ನಿಮಿ ತ್ತವೂ |
16. | ದಿನವೆಲ್ಲಾ ನನ್ನ ಗಲಿಬಿಲಿಯು ನನ್ನ ಮುಂದೆ ಇದೆ; ನನ್ನ ಮುಖದ ನಾಚಿಕೆಯು ನನ್ನನ್ನು ಮುಚ್ಚಿಯದೆ. |
17. | ಇದೆಲ್ಲಾ ನಮ್ಮ ಮೇಲೆ ಬಂತು; ಆದರೆ ನಿನ್ನನ್ನು ಮರೆತುಬಿಡಲಿಲ್ಲ; ನಿನ್ನ ಒಡಂಬಡಿಕೆಯಲ್ಲಿ ಸುಳ್ಳಾ ಡಲಿಲ್ಲ. |
18. | ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ಹಾದಿಯಿಂದ ತೊಲಗಲಿಲ್ಲ. |
19. | ಆದಾ ಗ್ಯೂ ಮಹಾಘಟಸರ್ಪಗಳ ಸ್ಥಳದಲ್ಲಿ ನಮ್ಮನ್ನು ಜಜ್ಜಿ ಮರಣದ ನೆರಳಿನಿಂದ ನಮ್ಮನ್ನು ಮುಚ್ಚಿಬಿಟ್ಟಿದ್ದೀ. |
20. | ನಾವು ನಮ್ಮ ದೇವರ ಹೆಸರನ್ನು ಮರೆತು ಅನ್ಯ ದೇವರಿಗೆ ನಮ್ಮ ಕೈಗಳನ್ನು ಚಾಚಿದರೆ |
21. | ದೇವರು ಅದನ್ನು ವಿಚಾರಿಸನೋ? ಆತನು ಹೃದಯದ ಮರ್ಮ ಗಳನ್ನು ತಿಳಿದಿದ್ದಾನೆ. |
22. | ಹೌದು, ನಿನ್ನ ನಿಮಿತ್ತ ದಿನ ವೆಲ್ಲಾ ಕೊಲ್ಲಲ್ಪಡುತ್ತೇವೆ; ಕೊಯ್ಗುರಿಗಳ ಹಾಗೆ ಎಣಿಸಲ್ಪಡುತ್ತೇವೆ. |
23. | ಓ ಕರ್ತನೇ, ಎಚ್ಚರವಾಗು, ಯಾಕೆ ನಿದ್ರೆ ಮಾಡುತ್ತೀ? ಎದ್ದೇಳು; ಸದಾಕಾಲಕ್ಕೂ ನಮ್ಮನ್ನು ತಳ್ಳಿಬಿಡಬೇಡ. |
24. | ಯಾಕೆ ನಿನ್ನ ಮುಖವನ್ನು ಮರೆ ಮಾಡಿ ನಮ್ಮ ಸಂಕಟವನ್ನೂ ಬಾಧೆಯನ್ನೂ ಮರೆತು ಬಿಡುತ್ತೀ. |
25. | ನಮ್ಮ ಪ್ರಾಣವು ಧೂಳಿನ ವರೆಗೂ ಬೊಗ್ಗಿಯದೆ; ನಮ್ಮ ಹೊಟ್ಟೆಯು ಭೂಮಿಗೆ ಅಂಟಿ ಕೊಂಡಿದೆ. |
26. | ನಮಗೆ ಸಹಾಯವಾಗಿ ಏಳು; ನಿನ್ನ ಕೃಪೆಯ ನಿಮಿತ್ತ ನಮ್ಮನ್ನು ವಿಮೋಚಿಸು. |
← Psalms (44/150) → |