← Psalms (48/150) → |
1. | ನಮ್ಮ ದೇವರ ಪಟ್ಟಣದಲ್ಲಿ ಆತನ ಪರಿಶುದ್ಧ ಪರ್ವತದಲ್ಲಿ ಕರ್ತನು ದೊಡ್ಡ ವನೂ ಬಹಳವಾಗಿ ಸ್ತುತಿಸಲ್ಪಡುವಾತನೂ ಆಗಿದ್ದಾನೆ. |
2. | ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ. |
3. | ದೇವರು ಅದರ ಅರಮನೆಗಳಲ್ಲಿ ಆಶ್ರಯ ವೆಂದು ಗೊತ್ತಾಗಿದೆ. |
4. | ಇಗೋ, ಅರಸರುಗಳು ಕೂಡಿಕೊಂಡು ಒಟ್ಟಾಗಿ ಹಾದುಹೋದರು; |
5. | ಅವರು ಅದನ್ನು ನೋಡಿ ಆಶ್ಚ ರ್ಯಪಟ್ಟರು; ಅವರು ಕಳವಳಪಟ್ಟು ಓಡಿ ಹೋದರು. |
6. | ಭೀತಿಯೂ ಹೆರುವವಳ ಹಾಗೆ ನೋವೂ ಅಲ್ಲಿ ಅವರನ್ನು ಹಿಡಿಯಿತು. |
7. | ಮೂಡಣ ಗಾಳಿಯಿಂದ ತಾರ್ಷಿಷ್ ಹಡಗುಗಳನ್ನು ನೀನು ಒಡೆಯುತ್ತೀ. |
8. | ನಾವು ಹೇಗೆ ಕೇಳಿದೆವೋ ಹಾಗೆಯೇ ಸೈನ್ಯಗಳ ಕರ್ತನ ಪಟ್ಟಣದಲ್ಲಿ, ಅಂದರೆ ನಮ್ಮ ದೇವರ ಪಟ್ಟಣದಲ್ಲಿಯೇ ನೋಡಿದೆವು; ದೇವರು ಅದನ್ನು ಎಂದೆಂದಿಗೂ ಸ್ಥಿರಪಡಿಸುವನು. ಸೆಲಾ. |
9. | ಓ ದೇವರೇ, ನಿನ್ನ ಪ್ರೀತಿ ಕರುಣೆಯನ್ನು ನಿನ್ನ ಮಂದಿರದ ಮಧ್ಯದಲ್ಲಿ ನಾವು ಸ್ಮರಿಸಿದ್ದೇವೆ. |
10. | ಓ ದೇವರೇ, ನಿನ್ನ ಹೆಸರಿಗೆ ತಕ್ಕಂತಯೇ ನಿನ್ನ ಸ್ತೋತ್ರವು ಭೂಮಿಯ ಅಂತ್ಯಗಳ ವರೆಗೂ ಅದೆ. ನಿನ್ನ ಬಲಗೈ ನೀತಿಯಿಂದ ತುಂಬಿ ಅದೆ. |
11. | ನಿನ್ನ ನ್ಯಾಯತೀರ್ವಿಕೆಗಳ ನಿಮಿತ್ತ ಚೀಯೋನ್ ಪರ್ವತವು ಸಂತೋಷಪಡಲಿ; ಯೆಹೂದದ ಕುಮಾರ್ತೆಯರು ಉಲ್ಲಾಸಪಡಲಿ. |
12. | ಚೀಯೋನನ್ನು ಸುತ್ತಿ ಅವಳ ಸುತ್ತಲು ತಿರುಗಿ ಅದರ ಬುರುಜುಗಳನ್ನು ಲೆಕ್ಕಿಸಿರಿ. |
13. | ಮುಂದಿನ ತಲಾಂತರಕ್ಕೆ ತಿಳಿಸುವದಕ್ಕೋಸ್ಕರ ಅದರ ಬುರುಜುಗಳ ಮೇಲೆ ಮನಸ್ಸಿಟ್ಟು ಆಕೆಯ ಅರಮನೆಗಳನ್ನು ಲಕ್ಷಿಸಿರಿ. |
14. | ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು. |
← Psalms (48/150) → |