← Psalms (52/150) → |
1. | ಓ ಪರಾಕ್ರಮಿಯೇ, ಕೆಟ್ಟತನದಲ್ಲಿ ನಿನ್ನ ಷ್ಟಕ್ಕೆ ನೀನೇ ಹೆಚ್ಚಳಪಡುವದು ಯಾಕೆ? ದೇವರ ಒಳ್ಳೇತನವು ಯಾವಾಗಲೂ ಇರುವದು. |
2. | ಮೋಸ ಮಾಡುವ ಹದವಾದ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡುಗಳನ್ನು ಕಲ್ಪಿಸುತ್ತದೆ. |
3. | ಒಳ್ಳೇದಕ್ಕಿಂತ ಕೆಟ್ಟದ್ದನ್ನೂ ನೀತಿಯನ್ನು ಮಾತನಾಡುವದಕ್ಕಿಂತ ಸುಳ್ಳನ್ನೂ ಪ್ರೀತಿ ಮಾಡುತ್ತೀ ಸೆಲಾ. |
4. | ಓ ಮೋಸದ ನಾಲಿಗೆಯೇ, ನೀನು ನುಂಗಿಬಿಡುವ ಮಾತುಗಳನ್ನೆಲ್ಲಾ ಪ್ರೀತಿ ಮಾಡುತ್ತೀ. |
5. | ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ. |
6. | ನೀತಿವಂತರು ಸಹ ಭಯಪಟ್ಟು ಅವನನ್ನು ನೋಡಿ ನಗುವರು. |
7. | ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ. |
8. | ಆದರೆ ನಾನು ದೇವರ ಆಲಯದಲ್ಲಿರುವ ಹಸು ರಾದ ಇಪ್ಪೇ ಮರದಹಾಗೆ ಇದ್ದೇನೆ. ದೇವರ ಕರು ಣೆಯಲ್ಲಿ ಯುಗಯುಗಾಂತರಗಳಲ್ಲಿಯೂ ನಾನು ಭರವಸವಿಟ್ಟಿದ್ದೇನೆ. |
9. | ನಾನು ಎಂದೆಂದಿಗೂ ನಿನ್ನನ್ನು ಕೊಂಡಾಡುವೆನು; ನೀನು ಅದನ್ನು ಮಾಡಿದಿ; ನಿನ್ನ ಹೆಸರನ್ನು ನಿರೀಕ್ಷಿಸುವೆನು; ನಿನ್ನ ಪರಿಶುದ್ಧರ ಮುಂದೆ ಅದು ಒಳ್ಳೇದಾಗಿದೆ. |
← Psalms (52/150) → |