← Psalms (67/150) → |
1. | ದೇವರು ನಮಗೆ ಕರುಣೆಯುಳ್ಳವನಾಗಿದ್ದು ನಮ್ಮನ್ನು ಆಶೀರ್ವದಿಸಲಿ; ಆತನು ತನ್ನ ಮುಖವನ್ನು ನಮ್ಮ ಮೇಲೆ ಪ್ರಕಾಶಿಸಮಾಡಲಿ. ಸೆಲಾ. |
2. | ಆಗ ನಿನ್ನ ಮಾರ್ಗವೂ ನಿನ್ನ ರಕ್ಷಣೆಯ ಸ್ವಸ್ಥತೆಯೂ, ಭೂಮಿಯಲ್ಲಿ, ಎಲ್ಲಾ ಜನಾಂಗಗಳಿಗೆ ತಿಳಿಯಲ್ಪಡು ವದು. |
3. | ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ. ಜನರೆಲ್ಲಾ ನಿನ್ನನ್ನು ಕೊಂಡಾಡಲಿ. |
4. | ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ. |
5. | ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ; ಜನರೆಲ್ಲಾ ನಿನ್ನನ್ನು ಕೊಂಡಾಡಲಿ. |
6. | ಆಗ ಭೂಮಿಯು ತನ್ನ ಸಮೃದ್ಧಿಯಾದ ಬೆಳೆಯನ್ನು ಕೊಡುವದು; ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವನು. |
7. | ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು. |
← Psalms (67/150) → |