← Psalms (68/150) → |
1. | ದೇವರು ಎದ್ದೇಳುವಾಗ, ಆತನನ್ನು ಹಗೆ ಮಾಡುವವರು ಚದುರಿಸಲ್ಪಡಲಿ; ಆತ ನನ್ನು ವಿರೋಧಿಸುವವರು ಆತನ ಸಮ್ಮುಖದಿಂದ ಓಡಿ ಹೋಗುತ್ತಾರೆ. |
2. | ಹೊಗೆ ಹಾರಿಹೋಗುವ ಮೇರೆಗೆ ಅವರನ್ನು ಓಡಿಸಿಬಿಡು; ಮೇಣವು ಬೆಂಕಿಯ ಮುಂದೆ ಕರಗುವ ಹಾಗೆ ದುಷ್ಟರು ದೇವರ ಮುಂದೆ ನಾಶ ವಾಗಲಿ. |
3. | ಆದರೆ ನೀತಿವಂತರು ಸಂತೋಷಿಸಲಿ; ದೇವರ ಮುಂದೆ ಉತ್ಸಾಹಪಡಲಿ; ಹೌದು, ಅವರು ಅತಿಸಂತೋಷದಿಂದ ಹರ್ಷಿಸುವವರಾಗಲಿ. |
4. | ದೇವರಿಗೆ ಹಾಡಿರಿ; ಆತನ ನಾಮಕ್ಕೆ ಸ್ತುತಿಗಳನ್ನು ಹಾಡಿರಿ; ಆಕಾಶಗಳ ಮೇಲೆ ಯಾಹು ಎಂಬ ತನ್ನ ಹೆಸರಿನ ಮೇಲೆ ಸವಾರಿಮಾಡುವಾತನನ್ನು ಕೊಂಡಾಡಿ ಆತನ ಮುಂದೆ ಉತ್ಸಾಹಪಡಿರಿ. |
5. | ದೇವರು ತನ್ನ ಪರಿಶುದ್ಧಸ್ಥಾನದಲ್ಲಿ ದಿಕ್ಕಿಲ್ಲದವರಿಗೆ ತಂದೆಯೂ ವಿಧವೆಯರಿಗೆ ನ್ಯಾಯಾಧಿಪತಿಯೂ ಆಗಿದ್ದಾನೆ. |
6. | ದೇವರು ಒಬ್ಬೊಂಟಿಗರನ್ನು ಕುಟುಂಬಸ್ತರನ್ನಾಗಿ ಮಾಡುತ್ತಾನೆ; ಸರಪಣಿಗಳಿಂದ ಬಂಧಿಸಲ್ಪಟ್ಟವರನ್ನು ಹೊರಗೆ ಬರಮಾಡುತ್ತಾನೆ; ಆದರೆ ಎದುರು ಬೀಳು ವವರು ಒಣಭೂಮಿಯಲ್ಲಿ ವಾಸಮಾಡುತ್ತಾರೆ. |
7. | ಓ ದೇವರೇ, ನೀನು ನಿನ್ನ ಜನರ ಮುಂದೆ ಹೊರಟು ಕಾಡಿನಲ್ಲಿ ನಡೆದಾಗ, ಸೆಲಾ. |
8. | ದೇವರು ಪ್ರತ್ಯಕ್ಷನಾಗಿ ದ್ದಾನೆಂದು ಭೂಮಿಯು ಕಂಪಿಸಿತು; ಮೇಘ ಮಂಡ ಲವು ಮಳೆಗರಿಯಿತು. ಇಸ್ರಾಯೇಲ್ಯರ ದೇವನಾದ ದೇವರು ಪ್ರತ್ಯಕ್ಷನಾಗಿದ್ದಾನೆಂದು ಆ ಸೀನಾಯಿ ಬೆಟ್ಟವು ಕದಲಿತು. |
9. | ಓ ದೇವರೇ, ನೀನು ಸಮೃದ್ಧಿಯಾಗಿ ಮಳೆಯನ್ನು ಸುರಿಸಿದಿ; ಇದರಿಂದ ದಣಿದ ನಿನ್ನ ಬಾಧ್ಯ ತೆಯನ್ನು ನೀನು ಸ್ಥಿರಪಡಿಸಿದಿ. |
10. | ನಿನ್ನ ಸಭೆಯು ಅದರಲ್ಲಿ ವಾಸಮಾಡಿತು; ಓ ದೇವರೇ, ನಿನ್ನ ಸಮೃದ್ಧಿ ಯಿಂದ ಬಡವರನ್ನು ತೃಪ್ತಿಪಡಿಸಿದಿ. |
11. | ಕರ್ತನು ವಾಕ್ಯ ವನ್ನು ಕೊಟ್ಟನು; ಅದನ್ನು ಪ್ರಕಟಿಸಿದವರ ಗುಂಪು ದೊಡ್ಡದಾಗಿತ್ತು. |
12. | ಸೈನ್ಯಗಳ ಅರಸರು ತ್ವರೆಯಾಗಿ ಓಡಿಹೋದರು; ಮನೆಯಲ್ಲಿ ವಾಸಿಸುವವಳು ಕೊಳ್ಳೆ ಯನ್ನು ಪಾಲು ಮಾಡಿಕೊಂಡಳು. |
13. | ನೀವು ಮಡಿಕೆ ಗಳ ಮಧ್ಯದಲ್ಲಿ ಮಲಗಿದಾಗ್ಯೂ ಬೆಳ್ಳಿಯಿಂದಲೂ ಅದರ ರೆಕ್ಕೆಗಳು ಹಳದಿ ಚಿನ್ನದಿಂದಲೂ ಮುಚ್ಚಿದ ಪಾರಿವಾಳದ ರೆಕ್ಕೆಗಳ ಹಾಗಿದ್ದೀರಿ. |
14. | ಸರ್ವಶಕ್ತನು ಅರಸುಗಳನ್ನು ಸಲ್ಮೋನಿನಲ್ಲಿ ಚದರಿಸಿದಾಗ ಅದರಲ್ಲಿ ಬಿಳೀ ಹಿಮದ ಹಾಗಿತ್ತು. |
15. | ಬಾಷಾನ್ ಬೆಟ್ಟವು ದೇವರ ಬೆಟ್ಟದಂತೆ ಇದೆ; ಬಾಷಾನ್ ಬೆಟ್ಟವು ಉನ್ನತ ಬೆಟ್ಟವಾಗಿದೆ. |
16. | ಉನ್ನತ ಬೆಟ್ಟಗಳೇ, ಯಾಕೆ ನೆಗೆಯುತ್ತೀರಿ? ದೇವರು ನಿವಾಸ ಕ್ಕಾಗಿ ಅಪೇಕ್ಷಿಸುವ ಬೆಟ್ಟವು ಇದೇ ಹೌದು, ಕರ್ತನು ಅದರಲ್ಲಿ ಸದಾಕಾಲಕ್ಕೆ ವಾಸಿಸುವನು. |
17. | ದೇವರ ರಥಗಳು ಇಪ್ಪತ್ತು ಸಾವಿರವು, ಸಾವಿರಾರು ದೂತರು ಗಳು; ಕರ್ತನು ಸೀನಾಯಿಯಲ್ಲಿ ಇದ್ದ ಹಾಗೆ ಅವರೊಳಗೆ ಪರಿಶುದ್ಧ ಸ್ಥಳದಲ್ಲಿ ಇದ್ದಾನೆ. |
18. | ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ. |
19. | ಪ್ರತಿ ದಿನವೂ ನಮ್ಮನ್ನು ಮೇಲುಗಳಿಂದ ತುಂಬಿಸು,ಕರ್ತನು ಅಂದರೆ ನಮ್ಮ ರಕ್ಷಣೆಯ ದೇವರು ಸ್ತುತಿ ಹೊಂದಲಿ. ಸೆಲಾ. |
20. | ನಮ್ಮ ದೇವರು ರಕ್ಷಣೆಯ ದೇವರಾಗಿದ್ದಾನೆ; ನಮ್ಮ ಕರ್ತನಾದ ದೇವರು ಮರಣದಿಂದ ತಪ್ಪಿಸಲು ಶಕ್ತನಾಗಿದ್ದಾನೆ. |
21. | ದೇವರು ತನ್ನ ಶತ್ರುಗಳ ತಲೆ ಯನ್ನೂ ತನ್ನ ಅಪರಾಧಗಳಲ್ಲಿ ಮುಂದುವರಿಯುವ ತುಂಬು ಗೂದಲಿನ ತಲೆಯನ್ನೂ ಗಾಯಪಡಿಸುತ್ತಾನೆ. |
22. | ಬಾಷಾನಿನಿಂದ ತಿರಿಗಿ ಬರಮಾಡುವೆನು, ಸಮು ದ್ರದ ಅಗಾಧಗಳಿಂದ ನನ್ನ ಜನರನ್ನು ತಿರಿಗಿ ಬರ ಮಾಡುವೆನು ಎಂದು ಕರ್ತನು ಹೇಳಿದ್ದಾನೆ. |
23. | ನಿನ್ನ ಪಾದವೂ ನಿನ್ನ ಶತ್ರುಗಳ ರಕ್ತದಲ್ಲಿ ಕಲಕುವ ಹಾಗೆ ಮಾಡುವೆನು. ನಿನ್ನ ನಾಯಿಗಳ ನಾಲಿಗೆಯೂ ಸಹ ಹಾಗೆಯೇ ಮಾಡುವದು. |
24. | ದೇವರೇ, ನಿನ್ನ ಹೋಗೋಣಗಳನ್ನು ಪರಿಶುದ್ಧ ಸ್ಥಳದಲ್ಲಿ ನನ್ನ ದೇವರ ಮತ್ತು ನನ್ನ ಅರಸನ ಹೋಗೋಣಗಳನ್ನು ಅವರು ನೋಡಿದ್ದಾರೆ. |
25. | ಹಾಡು ವವರು ಮುಂದಾಗಿಯೂ ಬಾರಿಸುವವರು ಹಿಂದಾ ಗಿಯೂ ಹೋದರು, ಅವರಲ್ಲಿ ದಮ್ಮಡಿ ಬಾರಿಸುವ ಕನ್ಯೆಯರು ಇದ್ದರು. |
26. | ಸಭೆಗಳಲ್ಲಿ ದೇವರನ್ನು ಸ್ತುತಿ ಸಿರಿ; ಇಸ್ರಾಯೇಲನ ಬುಗ್ಗೆಯಿಂದ ಕರ್ತನನ್ನು ಸ್ತುತಿ ಸಿರಿ. |
27. | ಅಲ್ಲಿ ಅವರನ್ನಾಳುವವರ ಕೂಡ ಚಿಕ್ಕ ಬೆನ್ಯಾ ವಿಾನನು ಅವರ ನಾಯಕರಾದ ಯೆಹೂದನ ಪ್ರಧಾ ನರೂ ಅವರ ಸಮೂಹವೂ ಜೆಬುಲೂನನ, ನಫ್ತಾ ಲಿಯ ಪ್ರಧಾನರೂ ಇದ್ದಾರೆ. |
28. | ನಿನ್ನ ದೇವರು ನಿನ್ನ ಬಲವನ್ನು ಆಜ್ಞಾಪಿಸಿದ್ದಾನೆ; ಓ ದೇವರೇ, ನಮಗೋಸ್ಕರ ನಡಿಸಿದ ಕಾರ್ಯವನ್ನು ಬಲಪಡಿಸು. |
29. | ಯೆರೂಸಲೇಮಿನಲ್ಲಿರುವ ನಿನ್ನ ಮಂದಿ ರದ ನಿಮಿತ್ತ ಅರಸುಗಳು ನಿನಗೆ ಕಾಣಿಕೆಗಳನ್ನು ತರು ವರು. |
30. | ಪ್ರತಿಯೊಬ್ಬನು ಬೆಳ್ಳಿಯ ತುಂಡುಗಳನ್ನು ಸಮರ್ಪಿಸುವ ವರೆಗೆ ಜನರ ಕರುಗಳ ಸಂಗಡ ಹೋರಿ ಗಳ ಗುಂಪನ್ನು ಭಲ್ಲೆಗಾರರ ಗುಂಪುನ್ನು ಗದರಿಸು. ಕಾಳಗದಲ್ಲಿ ಸಂತೋಷ ಪಡುವ ಜನರನ್ನು ನೀನು ಚದರಿಸು. |
31. | ಐಗುಪ್ತದಿಂದ ಪ್ರಧಾನರು ಬರುವರು; ಕೂಷ್ ತನ್ನ ಕೈಗಳನ್ನು ದೇವರ ಕಡೆಗೆ ಬೇಗ ಚಾಚುವದು. |
32. | ಭೂಮಿಯ ರಾಜ್ಯಗಳೇ, ನೀವು ದೇವರಿಗೆ ಹಾಡಿರಿ; ಕರ್ತನಿಗೆ ಸ್ತುತಿಗಳನ್ನು ಹಾಡಿರಿ. ಸೆಲಾ. |
33. | ಅನಾದಿಯಿಂದಿದ್ದ ಆಕಾಶಗಳಲ್ಲಿ ಸವಾರಿಮಾಡು ವಾತನಿಗೆ ಹಾಡಿರಿ; ಇಗೋ, ಆತನು ತನ್ನ ಮಹಾ ಧ್ವನಿಯಿಂದ ಧ್ವನಿಗೈಯುತ್ತಾನೆ. |
34. | ದೇವರ ಬಲವನ್ನು ವಿವರಿಸಿರಿ; ಇಸ್ರಾಯೇಲಿನ ಮೇಲೆ ಆತನಿಗೆ ಘನ ತೆಯೂ ಮೇಘಗಳಲ್ಲಿ ಆತನಿಗೆ ಬಲವೂ ಇರುತ್ತದೆ. |
35. | ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ. |
← Psalms (68/150) → |