← Psalms (69/150) → |
1. | ಓ ದೇವರೇ ನನ್ನನ್ನು ರಕ್ಷಿಸು; ನೀರು ನನ್ನ ಪ್ರಾಣದ ವರೆಗೂ ಬಂದಿದೆ. |
2. | ನೆಲೆ ಸಿಕ್ಕದ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತೇನೆ; ನನ್ನ ಮೇಲೆ ಹಾದುಹೋಗುವ ನೀರಿನ ಪ್ರವಾಹಗಳ ಅಗಾಧದಲ್ಲಿ ನಾನು ಸಿಕ್ಕಿಕೊಂಡಿದ್ದೇನೆ. |
3. | ನಾನು ಕೂಗಿ ದಣಿದಿದ್ದೇನೆ; ನನ್ನ ಗಂಟಲು ಒಣಗಿದೆ; ನಾನು ದೇವ ರನ್ನು ಎದುರು ನೋಡುವದರಿಂದ ನನ್ನ ಕಣ್ಣುಗಳು ಕ್ಷೀಣಿಸುತ್ತವೆ. |
4. | ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು. |
5. | ಓ ದೇವರೇ, ನೀನು ನನ್ನ ಮೂಢತನವನ್ನು ತಿಳಿದಿದ್ದೀ; ನನ್ನ ಪಾಪಗಳು ನಿನಗೆ ಮರೆಯಾಗಿಲ್ಲ. |
6. | ಸೈನ್ಯಗಳ ಕರ್ತನಾದ ದೇವರೇ, ನಿನ್ನನ್ನು ನಿರೀಕ್ಷಿಸು ವವರು ನನ್ನ ದೆಸೆಯಿಂದ ನಾಚಿಕೆಪಡದಿರಲಿ; ಓ ಇಸ್ರಾಯೇಲಿನ ದೇವರೇ, ನಿನ್ನನ್ನು ಹುಡುಕುವವರು ನನ್ನಿಂದ ಅವಮಾನಪಡದಿರಲಿ. |
7. | ನಿನ್ನ ನಿಮಿತ್ತ ನಿಂದೆ ಯನ್ನು ತಾಳಿದ್ದೇನೆ; ಅವಮಾನವು ನನ್ನ ಮುಖವನ್ನು ಮುಚ್ಚಿಯದೆ. |
8. | ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ; ನನ್ನ ಒಡಹುಟ್ಟಿದವರಿಗೆ ಪರಕೀಯನಾಗಿದ್ದೇನೆ. |
9. | ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ. |
10. | ನನ್ನ ಪ್ರಾಣವು ಉಪವಾಸದಲ್ಲಿ ಶಿಕ್ಷಿಸಲ್ಪಟ್ಟು ಅತ್ತಾಗ ಅದು ನನಗೆ ನಿಂದೆ ಆಯಿತು. |
11. | ಗೋಣಿತಟ್ಟನ್ನು ಸಹ ನನ್ನ ಉಡುಪಾಗಿ ಮಾಡಿಕೊಂಡಿದ್ದೇನೆ; ಹೀಗೆ ನಾನು ಅವರಿಗೆ ಗಾದೆ ಆದೆನು. |
12. | ಬಾಗಲಲ್ಲಿ ಕೂತು ಕೊಳ್ಳುವವರು ನನಗೆ ವಿರೋಧವಾಗಿ ಮಾತನಾಡು ತ್ತಾರೆ; ನಾನು ಮದ್ಯಪಾನಿಗಳಿಗೆ ಸಂಗೀತವಾದೆನು. |
13. | ಓ ಕರ್ತನೇ, ನಾನಾದರೋ ಅಂಗೀಕಾರದ ಸಮ ಯದಲ್ಲಿ ನಿನಗೆ ನನ್ನ ಪ್ರಾರ್ಥನೆಯನ್ನು ಮಾಡುವೆನು. ಓ ದೇವರೇ, ನಿನ್ನ ಅತಿಶಯವಾದ ಕರುಣೆಯಿಂದಲೂ ನಿನ್ನ ರಕ್ಷಣೆಯ ಸತ್ಯದಲ್ಲಿಯೂ ನನಗೆ ಉತ್ತರಕೊಡು. |
14. | ನಾನು ಮುಳುಗದಂತೆ ನನ್ನನ್ನು ಕೆಸರಿನೊಳಗಿಂದ ಬಿಡಿಸು; ಹಗೆಮಾಡುವವರಿಂದ ನನ್ನನ್ನು ತಪ್ಪಿಸು, ನೀರಿನ ಅಗಾಧಗಳೊಳಗಿಂದಲೂ ನನಗೆ ಬಿಡುಗಡೆ ಯಾಗಲಿ |
15. | ನೀರಿನ ಪ್ರವಾಹವು ನನ್ನ ಮೇಲೆ ಹಾದು ಹೋಗದೇ ಇರಲಿ; ಅಗಾಧವು ನನ್ನನ್ನು ನುಂಗದೆ ಇರಲಿ; ಕುಣಿಯು ನನಗಾಗಿ ತನ್ನ ಬಾಯನ್ನು ಮುಟ್ಟ ದಿರಲಿ. |
16. | ಓ ಕರ್ತನೇ, ನನಗೆ ಉತ್ತರಕೊಡು;ನಿನ್ನ ಪ್ರೀತಿ ಕರುಣೆಯು ಒಳ್ಳೇದಾಗಿದೆ; ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ಕಡೆಗೆ ತಿರುಗು. |
17. | ನಿನ್ನ ಮುಖವನ್ನು ನಿನ್ನ ಸೇವಕನಿಗೆ ಮರೆಮಾಡಬೇಡ; ನಾನು ಇಕ್ಕಟ್ಟಿನಲ್ಲಿದ್ದೇನೆ; ಬೇಗ ನನಗೆ ಉತ್ತರಕೊಡು. |
18. | ಸವಿಾಪವಾಗಿದ್ದು ನನ್ನ ಪ್ರಾಣವನ್ನು ರಕ್ಷಿಸು ನನ್ನನ್ನು ನನ್ನ ಶತ್ರುಗಳ ನಿಮಿತ್ತ ವಾಗಿ ವಿಮೋಚಿಸು. |
19. | ನೀನು ನನ್ನ ನಿಂದೆಯನ್ನೂ ನಾಚಿಕೆಯನ್ನೂ ಅವಮಾನವನ್ನೂ ತಿಳಿದಿದ್ದೀ; ನನ್ನ ವೈರಿಗಳೆಲ್ಲರು ನಿನ್ನ ಮುಂದೆ ಇದ್ದಾರೆ. |
20. | ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ. |
21. | ನನ್ನ ಆಹಾರಕ್ಕಾಗಿ ಕಹಿಯಾದದನ್ನು ಕೊಟ್ಟರು; ನನಗೆ ದಾಹವಾದಾಗ ಹುಳಿರಸವನ್ನು ಕುಡಿಯ ಕೊಟ್ಟರು. |
22. | ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ. |
23. | ಅವರ ಕಣ್ಣಗಳು ಕಾಣದ ಹಾಗೆ ಕತ್ತಲಾಗಲಿ; ಅವರ ಸೊಂಟಗಳನ್ನು ಯಾವಾಗಲೂ ಕದಲಿಸು. |
24. | ಅವರ ಮೇಲೆ ನಿನ್ನ ರೋಷವನ್ನು ಹೊಯ್ಯಿ; ನಿನ್ನ ಕೋಪದ ಉರಿಯು ಅವರನ್ನು ಹಿಡಿಯಲಿ. |
25. | ಅವರ ವಾಸಸ್ಥಳವು ನಾಶವಾಗಲಿ; ಅವರ ಗುಡಾರಗಳಲ್ಲಿ ನಿವಾಸಿಯು ಇಲ್ಲದೆ ಹೋಗಲಿ. |
26. | ನೀನು ಹೊಡೆದ ವನನ್ನು ಅವರು ಹಿಂಸಿಸುತ್ತಾರೆ, ನೀನು ಗಾಯಮಾಡಿ ದವರ ವ್ಯಸನವನ್ನು ಮಾತನಾಡಿಕೊಳ್ಳುತ್ತಾರೆ. |
27. | ಅವರ ಅಕ್ರಮಕ್ಕೆ ಅಕ್ರಮವನ್ನು ಸೇರಿಸು; ಅವರು ನಿನ್ನ ನೀತಿಯಲ್ಲಿ ಸೇರದೆ ಇರಲಿ. |
28. | ಜೀವದ ಪುಸ್ತಕದೊಳಗಿಂದ ಅವರು ಅಳಿಸಲ್ಪಡಲಿ; ನೀತಿವಂತರ ಸಂಗಡ ಅವರ ಹೆಸರು ಬರೆಯಲ್ಪಡದೆ ಇರಲಿ. |
29. | ಆದರೆ ನಾನು ದೀನನಾಗಿಯೂ ವ್ಯಸನವುಳ್ಳವನಾಗಿಯೂ ಇದ್ದೇನೆ; ಓ ದೇವರೇ, ನಿನ್ನ ರಕ್ಷಣೆಯು ನನ್ನನ್ನು ಉನ್ನತದಲ್ಲಿರಿಸಲಿ. |
30. | ದೇವರ ಹೆಸರನ್ನು ಹಾಡುತ್ತಾ ಸ್ತುತಿಸುವೆನು; ಸ್ತೋತ್ರದಿಂದ ಆತನನ್ನು ಘನಪಡಿ ಸುವೆನು. |
31. | ಅದು ಕರ್ತನಿಗೆ ಕೊಂಬುಗಳೂ ಗೊರಸೆ ಗಳೂ ಉಳ್ಳ ಎಳೇ ಹೋರಿಗಳಿಗಿಂತ ಮೆಚ್ಚಿಕೆಯಾಗಿರು ವದು. |
32. | ಇದನ್ನು ದೀನರು ನೋಡಿ, ಸಂತೋಷಿಸು ವರು. ದೇವರನ್ನು ಹುಡುಕುವ ನಿಮ್ಮ ಹೃದಯವು ಜೀವಿಸುವದು. |
33. | ಕರ್ತನು ಬಡವರನ್ನು ಲಾಲಿಸಿ ತನ್ನ ಸೆರೆಯವರನ್ನು ತಿರಸ್ಕರಿಸುವದಿಲ್ಲ. |
34. | ಆಕಾಶವೂ ಭೂಮಿಯೂ ಸಮುದ್ರಗಳೂ ಅವುಗಳಲ್ಲಿ ಸಂಚರಿಸುವುದೆಲ್ಲವೂ ಆತನನ್ನು ಸ್ತುತಿಸಲಿ. |
35. | ದೇವರು ಚೀಯೋನನ್ನು ರಕ್ಷಿಸಿ ಯೆಹೂದದ ಪಟ್ಟ ಣಗಳನ್ನು ಕಟ್ಟುವನು; ಹೀಗೆ ಅವರು ಅಲ್ಲಿ ವಾಸ ಮಾಡಿ ಅದನ್ನು ಸ್ವಾಧೀನಪಡಿಸಿಕೊಳ್ಳುವರು. |
36. | ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು. |
← Psalms (69/150) → |