← Psalms (71/150) → |
1. | ಓ ಕರ್ತನೇ, ನಾನು ನಿನ್ನಲ್ಲಿ ಭರವಸವನ್ನಿಟ್ಟಿದ್ದೇನೆ; ನನಗೆ ಎಂದಿಗೂ ಆಶಾ ಭಂಗವಾಗದಿರಲಿ. |
2. | ನಿನ್ನ ನೀತಿಯಲ್ಲಿ ನನ್ನನ್ನು ಬಿಡಿಸಿ ನನ್ನನ್ನು ತಪ್ಪಿಸು; ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸಿ ನನ್ನನ್ನು ರಕ್ಷಿಸು. |
3. | ನೀನು ಯಾವಾಗಲೂ ನಾನು ಆಶ್ರಯಿಸಿಕೊಳ್ಳುವ ಬಲಸ್ಥಾನವಾಗಿರು. ನನ್ನನ್ನು ರಕ್ಷಿಸುವದಕ್ಕೆ ಆಜ್ಞಾಪಿಸಿದ್ದೀ, ನನ್ನ ಬಂಡೆಯೂ ಕೋಟೆಯೂ ನೀನೇ. |
4. | ಓ ನನ್ನ ದೇವರೇ, ದುಷ್ಟನ ಕೈಗೂ ಅನ್ಯಾಯ ಮಾಡುವ ಕ್ರೂರನ ಕೈಗೂ ನನ್ನನ್ನು ತಪ್ಪಿಸು. |
5. | ಓ ಕರ್ತನಾದ ದೇವರೇ, ನೀನು ನನ್ನ ನಿರೀಕ್ಷೆಯೂ ನನ್ನ ಯೌವನದಿಂದ ನನ್ನ ಭರವಸವೂ ಆಗಿದ್ದೀ. |
6. | ಗರ್ಭದಿಂದಲೇ ನಿನ್ನ ಮೇಲೆ ಆತುಕೊಂಡಿದ್ದೇನೆ; ತಾಯಿಯ ಗರ್ಭದಿಂದ ನೀನು ನನ್ನನ್ನು ಹೊರಗೆ ತಂದಿದ್ದಿ. ಯಾವಾಗಲೂ ನಿನ್ನಲ್ಲಿ ನನ್ನ ಸ್ತೋತ್ರವು ಇರುವದು. |
7. | ಅನೇಕರಿಗೆ ನಾನು ಆಶ್ಚರ್ಯದಂತಿದ್ದೇನೆ. ಆದರೆ ನೀನು ನನ್ನ ಬಲವಾದ ಆಶ್ರಯವಾಗಿದ್ದೀ. |
8. | ನನ್ನ ಬಾಯಿ ನಿನ್ನ ಸ್ತೋತ್ರದಿಂದಲೂ ದಿನವೆಲ್ಲಾ ನಿನ್ನ ಗೌರವದಿಂದಲೂ ತುಂಬಿರಲಿ. |
9. | ನನ್ನ ಮುಪ್ಪಿನ ಕಾಲದಲ್ಲಿ ನನ್ನನ್ನು ತಳ್ಳಿಬಿಡಬೇಡ. ನನ್ನ ಶಕ್ತಿಯು ಕುಂದಿಹೋಗುವಾಗ ನನ್ನನ್ನು ಕೈಬಿಡ ಬೇಡ. |
10. | ನನ್ನ ಶತ್ರುಗಳು ನನಗೆ ವಿರೋಧವಾಗಿ ಮಾತನಾಡುತ್ತಾರೆ; ನನ್ನ ಪ್ರಾಣಕ್ಕೆ ಹೊಂಚು ಹಾಕುವ ವರು ಕೂಡಿಕೊಂಡು ಆಲೋಚನೆ ಮಾಡುತ್ತಾ-- |
11. | ದೇವರು ಅವನನ್ನು ಕೈ ಬಿಟ್ಟಿದ್ದಾನೆ; ಅವನನ್ನು ಹಿಂಸಿಸಿ, ಹಿಡಿದುಕೊಳ್ಳಿರಿ; ಅವನನ್ನು ಬಿಡಿಸುವವನು ಯಾರೂ ಇಲ್ಲ ಎಂದು ಅವರು ಅನ್ನುತ್ತಾರೆ. |
12. | ಓ ದೇವರೇ, ನನ್ನಿಂದ ದೂರವಾಗಿರ ಬೇಡ. ಓ ದೇವರೇ, ನನ್ನ ಸಹಾಯಕ್ಕೆ ತ್ವರೆಪಡು. |
13. | ನನ್ನ ಪ್ರಾಣವನ್ನು ಎದುರಿಸುವವರು ನಾಚಿಕೆಪಟ್ಟು ನಾಶವಾಗಲಿ; ನಿಂದೆಯೂ ಅವಮಾನವೂ ನನ್ನ ಕೇಡಿಗಾಗಿ ಹುಡುಕು ವವರನ್ನು ಸುತ್ತಿಕೊಳ್ಳಲಿ. |
14. | ಆದರೆ ನಾನು ಬಿಟ್ಟುಬಿಡದೆ ನಿನ್ನನ್ನು ನಿರೀಕ್ಷಿ ಸುತ್ತಾ ನಿನ್ನನ್ನು ಇನ್ನೂ ಹೆಚ್ಚೆಚ್ಚಾಗಿ ಸುತ್ತಿಸುವೆನು. |
15. | ನನ್ನ ಬಾಯಿ ದಿನವೆಲ್ಲಾ ನಿನ್ನ ನೀತಿಯನ್ನೂ ರಕ್ಷಣೆ ಯನ್ನೂ ಪ್ರಕಟಿಸುವದು. ಅವುಗಳ ಸಂಖ್ಯೆಗಳು ನನಗೆ ತಿಳಿಯದು. |
16. | ಕರ್ತನಾದ ದೇವರ ಶಕ್ತಿಯಲ್ಲಿ ನಾನು ಹೋಗುವೆನು, ನಿನ್ನ ನೀತಿಯನ್ನು ಹೌದು, ನಿನ್ನದನ್ನೇ ತಿಳಿಸುವೆನು. |
17. | ಓ ದೇವರೇ, ನನ್ನ ಯೌವನದಿಂದ ನನಗೆ ನೀನು ಕಲಿಸಿದ್ದೀ; ಈ ವರೆಗೂ ನಿನ್ನ ಅದ್ಭುತ ಕಾರ್ಯಗಳನ್ನು ತಿಳಿಸುವೆನು. |
18. | ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ. |
19. | ಓ ದೇವರೇ, ಮಹತ್ಕಾರ್ಯಗಳನ್ನು ಮಾಡಿದ ನಿನ್ನ ನೀತಿಯು ಬಹಳ ಉನ್ನತವಾಗಿದೆ. ಓ ದೇವರೇ, ನಿನ್ನ ಹಾಗೆ ಯಾರಿದ್ದಾರೆ! |
20. | ಕಠಿಣವಾದ ಇಕ್ಕಟ್ಟುಗಳನ್ನು ನೋಡಮಾಡಿದ ನನ್ನನ್ನು ನೀನು ತಿರಿಗಿ ಬದುಕಿಸಿದಿ; ಭೂಮಿಯ ಆಗಾಧ ಗಳೊಳಗಿಂದ ನನ್ನನ್ನು ಮೇಲಕ್ಕೆ ತರುತ್ತೀ. |
21. | ನೀನು ನನ್ನ ಗೌರವವನ್ನು ಹೆಚ್ಚಿಸಿ ಎಲ್ಲಾ ಕಡೆಯಿಂದಲೂ ನನ್ನನ್ನು ಆದರಿಸುವಿ. |
22. | ಓ ನನ್ನ ದೇವರೇ, ನಾನು ಸಹ ನಿನ್ನನ್ನೂ ನಿನ್ನ ಸತ್ಯವನ್ನೂ ವೀಣೆಯಿಂದ ಕೊಂಡಾಡುವೆನು; ಓ ಇಸ್ರಾಯೇಲಿನ ಪರಿಶುದ್ದನೇ, ಕಿನ್ನರಿಯಿಂದ ನಿನ್ನನ್ನು ಕೀರ್ತಿಸುವೆನು. |
23. | ನಾನು ನಿನ್ನನ್ನು ಕೀರ್ತಿಸುವಾಗ ನನ್ನ ತುಟಿಗಳೂ ನೀನು ವಿಮೋಚಿಸಿದ ನನ್ನ ಪ್ರಾಣವೂ ಉತ್ಸಾಹ ಧ್ವನಿಗೈಯುವವು. |
24. | ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ. |
← Psalms (71/150) → |