← Psalms (72/150) → |
1. | ಓ ದೇವರೇ, ನಿನ್ನ ನ್ಯಾಯತೀರ್ಪುಗಳನ್ನು ಅರಸನಿಗೂ ನೀತಿಯನ್ನು ಅರಸನ ಮಗನಿಗೂ ಕೊಡು. |
2. | ನಿನ್ನ ಜನರಿಗೆ ನೀತಿಯಿಂದಲೂ ದೀನರಿಗೆ ನ್ಯಾಯದಿಂದಲೂ ಆತನು ತೀರ್ಪು ಮಾಡು ವನು. |
3. | ಬೆಟ್ಟಗಳೂ ಚಿಕ್ಕ ಗುಡ್ಡಗಳೂ ನೀತಿಯಿಂದ ಸಮಾಧಾನವನ್ನು ಜನರಿಗೆ ತರುವವು. |
4. | ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು. |
5. | ಸೂರ್ಯನೂ ಚಂದ್ರನೂ ಇರುವ ವರೆಗೆ ತಲ ತಲಾಂತರಗಳು ನಿನಗೆ ಭಯಪಡುವರು. |
6. | ಕೊಯ್ದ ಹುಲ್ಲಿನ ಮೇಲೆ ಬೀಳುವ ಮಳೆಯ ಹಾಗೆಯೂ ಭೂಮಿಯನ್ನು ನೆನಸುವ ಸುರಿಯುವ ಮಳೆಗಳ ಹಾಗೆಯೂ ಆತನು ಇಳಿದು ಬರುವನು. |
7. | ಆತನ ದಿವಸಗಳಲ್ಲಿ ನೀತಿವಂತನು ವೃದ್ಧಿಯಾಗುವನು. ಸಮೃದ್ಧಿ ಯಾದ ಸಮಾಧಾನವು ಚಂದ್ರನು ಇರುವ ವರೆಗೂ ಇರುವದು. |
8. | ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು. |
9. | ಆತನ ಮುಂದೆ ಅರಣ್ಯ ನಿವಾಸಿಗಳು ಎರಗುವರು; ಆತನ ಶತ್ರುಗಳು ಧೂಳನ್ನು ನೆಕ್ಕುವರು. |
10. | ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು. |
11. | ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು. |
12. | ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು. |
13. | ದರಿದ್ರನನ್ನೂ ಬಡವನನ್ನೂ ಕರುಣಿಸುವನು; ಬಡವರ ಪ್ರಾಣಗ ಳನ್ನು ರಕ್ಷಿಸುವನು. |
14. | ಮೋಸದಿಂದಲೂ ಬಲಾತ್ಕಾರ ದಿಂದಲೂ ಅವರ ಪ್ರಾಣವನ್ನು ಬಿಡುಗಡೆ ಮಾಡು ವನು; ಅವರ ರಕ್ತವು ಆತನ ದೃಷ್ಟಿಯಲ್ಲಿ ಅಮೂಲ್ಯ ವಾಗಿರುವದು. |
15. | ಅವನು ಬಾಳುವನು; ಅವನಿಗೆ ಶೆಬಾದ ಚಿನ್ನ ವನ್ನು ಕೊಡುವರು; ಅವನಿಗೋಸ್ಕರ ಯಾವಾಗಲೂ ಪ್ರಾರ್ಥನೆ ಮಾಡುವರು; ಪ್ರತಿದಿನ ಅವನನ್ನು ಕೊಂಡಾಡುವರು. |
16. | ಧಾನ್ಯದ ಸಮೃದ್ಧಿಯು ದೇಶದಲ್ಲಿ ಬೆಟ್ಟಗಳ ತುದಿಯ ಮೇಲೆ ಇರುವದು; ಅದರ ಫಲವು ಲೆಬನೋನಿನ ಹಾಗೆ ಕದಲುವದು. ಪಟ್ಟಣದ ವರು ಭೂಮಿಯ ಸೊಪ್ಪಿನ ಹಾಗೆ ವೃದ್ಧಿಯಾಗುವರು. |
17. | ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು. |
18. | ಒಬ್ಬನೇ ಅದ್ಭುತಗಳನ್ನು ಮಾಡುವ ಇಸ್ರಾಯೇಲಿನ ದೇವರಾಗಿರುವ ಕರ್ತನಾದ ದೇವರಿಗೆ ಸ್ತೋತ್ರವಾಗಲಿ. |
19. | ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್. |
20. | ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ. |
← Psalms (72/150) → |