← Psalms (73/150) → |
1. | ನಿಜವಾಗಿ ದೇವರು ಇಸ್ರಾಯೇಲಿಗೂ ಶುದ್ಧ ಹೃದಯದವರಿಗೂ ಒಳ್ಳೆಯವನು. |
2. | ನನ್ನ ಪಾದಗಳ ಮಟ್ಟಿಗಾದರೋ ಅವು ತಪ್ಪುವ ಹಾಗಿದ್ದವು, ನನ್ನ ಹೆಜ್ಜೆಗಳು ಜಾರುವದಕ್ಕೆ ಬಹು ಸವಿಾಪವಾಗಿದ್ದವು. |
3. | ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು. |
4. | ಅವರ ಮರಣಕ್ಕೆ ಬಂಧನಗಳು ಇಲ್ಲ; ಅವರ ತ್ರಾಣವು ಸ್ಥಿರವಾಗಿದೆ. |
5. | ಬೇರೆ ಮನುಷ್ಯರಂತೆ ಅವರು ಕಷ್ಟದಲ್ಲಿಲ್ಲ. ಇಲ್ಲವೆ ಬೇರೆ ಮನುಷ್ಯರ ಹಾಗೆ ಅವರಿಗೆ ವ್ಯಾಧಿಯೂ ಇಲ್ಲ; |
6. | ಆದದರಿಂದ ಗರ್ವವು ಅವರಿಗೆ ಕಂಠಮಾಲೆಯಂತೆ ಅವರನ್ನು ಸುತ್ತಿದೆ, ಬಲಾತ್ಕಾರವು ಅವರನ್ನು ಬಟ್ಟೆಯ ಹಾಗೆ ಮುಚ್ಚುತ್ತದೆ. |
7. | ಅವರ ಕಣ್ಣುಗಳು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ಹೃದಯವು ಆಶಿಸುವದಕ್ಕಿಂತಲೂ ಹೆಚ್ಚಾಗಿ ಅವರಿಗೆ ಇವೆ. |
8. | ಅವರು ಕೆಟ್ಟುಹೋದವರು. ಸಂಕಟ ಪಡುವವರ ವಿಷಯ ಕೆಟ್ಟದ್ದಾಗಿಯೂ ಗರ್ವದಿಂದಲೂ ಮಾತನಾಡುತ್ತಾರೆ. |
9. | ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ; ಭೂಲೋಕದಲ್ಲೆಲ್ಲಾ ಅವರ ಮಾತೇ ನಡೆಯುವದು. |
10. | ಆದದರಿಂದ ಅವನ ಜನರು ಇಲ್ಲಿಗೆ ತಿರುಗಿ ಕೊಳ್ಳುತ್ತಾರೆ; ಅವರಿಗೆ ಪಾನವು ಯಥೇಚ್ಚವಾಗಿ ದೊರೆಯುತ್ತದೆ. |
11. | ಅವರು-- ದೇವರು ಹೇಗೆ ಬಲ್ಲನು? ಮಹೋನ್ನತನಲ್ಲಿ ತಿಳುವಳಿಕೆ ಉಂಟೋ ಎಂದು ಅಂದುಕೊಳ್ಳುತ್ತಾರೆ. |
12. | ಇಗೋ, ಇಹಲೋಕದಲ್ಲಿ ವೃದ್ಧಿಯಾಗುವ ದುಷ್ಟರು ಇವರೇ, ಐಶ್ವರ್ಯದಲ್ಲಿ ಇವರು ಹೆಚ್ಚುತ್ತಾರೆ. |
13. | ನಿಶ್ಚಯವಾಗಿ ನನ್ನ ಹೃದಯವನ್ನು ವ್ಯರ್ಥವಾಗಿ ನಿರ್ಮಲ ಮಾಡಿಕೊಂಡು ನನ್ನ ಕೈಗಳನ್ನು ನಿರಪರಾಧ ದಲ್ಲಿ ತೊಳೆದಿದ್ದೇನೆ. |
14. | ನಾನು ದಿನವೆಲ್ಲಾ ವ್ಯಾಧಿ ಪೀಡಿತನಾಗಿದ್ದೇನೆ; ಪ್ರತಿ ಉದಯದಲ್ಲಿ ನನಗೆ ಶಿಕ್ಷೆ ಯಾಯಿತು. |
15. | ಹೀಗೆ ನಾನು ಮಾತನಾಡುವೆನೆಂದು ಹೇಳಿದರೆ, ಇಗೋ, ನಿನ್ನ ಮಕ್ಕಳ ವಂಶಕ್ಕೆ ವಿರೋಧ ವಾಗಿ ಆತಂಕ ಮಾಡುವೆನು. |
16. | ಇದನ್ನು ತಿಳಿಯು ವದಕ್ಕೆ ನಾನು ಯೋಚಿಸಿದಾಗ, ನಾನು ದೇವರ ಪರಿಶುದ್ಧ ಸ್ಥಳಗಳಿಗೆ ಬರುವ ವರೆಗೆ |
17. | ಅದು ನನ್ನ ದೃಷ್ಟಿಗೆ ಕಷ್ಟವಾಗಿತ್ತು. ಅವರ ಅಂತ್ಯವನ್ನು ಗ್ರಹಿಸಿ ಕೊಂಡೆನು. |
18. | ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ. |
19. | ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ. |
20. | ಎಚ್ಚತ್ತ ಮೇಲೆ ಕನಸು ಹೇಗೋ ಹಾಗೆಯೇ ಓ ಕರ್ತನೇ, ನೀನು ಎಚ್ಚರವಾದಾಗ ಅವರ ರೂಪವನ್ನು ತಿರಸ್ಕರಿಸುವಿ. |
21. | ಹೀಗೆ ನನ್ನ ಹೃದಯವು ವ್ಯಥೆಗೊಂಡಾಗ ನನ್ನ ಅಂತರಿಂದ್ರಿಯಗಳಿಗೆ ತಿವಿಯಲ್ಪಟ್ಟವು. |
22. | ಆಗ ನಾನು ಮೂರ್ಖನಾಗಿ ಏನೂ ತಿಳಿಯದೆ ನಿನ್ನ ಮುಂದೆ ಪಶು ವಿನಂತೆ ಇದ್ದೆನು. |
23. | ಆದಾಗ್ಯೂ ನಾನು ನಿನ್ನ ಸಂಗಡ ಯಾವಾಗಲೂ ಇದ್ದೇನೆ; ನೀನು ನನ್ನ ಬಲಗೈಯನ್ನು ಹಿಡಿದಿದ್ದೀ. |
24. | ನಿನ್ನ ಆಲೋಚನೆಯಂತೆ ನನ್ನನ್ನು ನಡಿಸಿದ ತರು ವಾಯ ಮಹಿಮೆಗೆ ನನ್ನನ್ನು ಅಂಗೀಕರಿಸುವಿ. |
25. | ಪರ ಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರಿದ್ದಾರೆ? ನಿನ್ನ ಹೊರತಾಗಿ ಭೂಮಿಯಲ್ಲಿ ನಾನು ಅಪೇಕ್ಷಿಸುವವರು ಯಾರೂ ಇಲ್ಲ. |
26. | ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ. |
27. | ಇಗೋ, ನಿನಗೆ ದೂರವಾಗಿರುವವರು ನಾಶವಾಗುವರು, ನಿನ್ನನ್ನು ಬಿಟ್ಟು ಜಾರತ್ವ ಮಾಡುವವರೆಲ್ಲ ರನ್ನು ಸಂಹರಿಸಿದ್ದೀ. |
28. | ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ. |
← Psalms (73/150) → |