← Psalms (74/150) → |
1. | ಓ ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ? |
2. | ಪೂರ್ವದಲ್ಲಿ ನೀನು ಕೊಂಡುಕೊಂಡ ಸಭೆಯನ್ನೂ ವಿಮೋಚಿಸಿದ ಬಾಧ್ಯತೆಯ ಕೋಲನ್ನೂ ನೀನು ವಾಸಮಾಡಿದ ಈ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೋ. |
3. | ನಿನ್ನ ಪಾದಗಳನ್ನು ಸದಾಕಾಲದ ನಾಶನಗಳಿಗೆ, ಅಂದರೆ ಶತ್ರುವು ಪರಿಶುದ್ಧ ಸ್ಥಳದಲ್ಲಿ ಎಲ್ಲವನ್ನು ಕೆಟ್ಟತನದಿಂದ ಮಾಡಿದ್ದಕ್ಕೆ ತಿರುಗಿಸು. |
4. | ನಿನ್ನ ವೈರಿಗಳು ನಿನ್ನ ಸಭೆಗಳ ಮಧ್ಯದಲ್ಲಿ ಗರ್ಜಿಸುತ್ತಾರೆ; ತಮ್ಮ ಧ್ವಜಗಳನ್ನು ಗುರುತುಗಳಾಗಿ ಇಟ್ಟಿದ್ದಾರೆ. |
5. | ದಟ್ಟವಾದ ಮರಗಳಲ್ಲಿ ಕೊಡಲಿ ಎತ್ತುವವನ ಹಾಗೆ ಮನುಷ್ಯನು ಪ್ರಸಿದ್ಧನಾಗಿದ್ದಾನೆ; |
6. | ಆದರೆ ಈಗ ಕೆತ್ತನೆ ಕೆಲಸವನ್ನು ತಕ್ಷಣ ಕೊಡಲಿಯಿಂದಲೂ ಸುತ್ತಿಗೆ ಯಿಂದಲೂ ಅವರು ಹೊಡೆದು ಬಿಡುತ್ತಾರೆ. |
7. | ನಿನ್ನ ಪರಿಶುದ್ಧ ಆಲಯದಲ್ಲಿ ಬೆಂಕಿ ಹಚ್ಚುತ್ತಾರೆ; ನಿನ್ನ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಹೊಲೆ ಮಾಡುತ್ತಾರೆ. |
8. | ಅವುಗಳನ್ನು ಒಟ್ಟಾಗಿ ಕೆಡವಿ ಬಿಡೋಣ ಎಂದು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ; ದೇಶದಲ್ಲಿರುವ ದೇವರ ಸಭಾಸ್ಥಾನಗಳನ್ನೆಲ್ಲಾ ಸುಟ್ಟುಬಿಡು ತ್ತಾರೆ. |
9. | ನಮ್ಮ ಗುರುತುಗಳನ್ನು ನೋಡದೆ ಇದ್ದೇವೆ; ಇನ್ನು ಮೇಲೆ ಯಾವ ಪ್ರವಾದಿಯೂ ಇರುವದಿಲ್ಲ ಇಲ್ಲವೆ ಇದು ಎಷ್ಟರವರೆಗೆ ಎಂದು ತಿಳಿದವನು ನಮ್ಮಲ್ಲಿ ಯಾರೂ ಇಲ್ಲ. |
10. | ಓ ದೇವರೇ, ವೈರಿಯು ನಿಂದಿಸುವದು ಎಷ್ಟರ ವರೆಗೆ? ಶತ್ರುವು ನಿನ್ನ ಹೆಸರನ್ನು ಎಂದೆಂದಿಗೂ ದೂಷಿ ಸುವನೋ? |
11. | ಯಾಕೆ ನಿನ್ನ ಕೈಯನ್ನು, ನಿನ್ನ ಬಲಗೈ ಯನ್ನು ಸಹ ಹಿಂದೆಳಿಯುತ್ತೀ? ನಿನ್ನ ಎದೆಯೊಳಗಿಂದ ಅದನ್ನು ಹೊರತೆಗೆ. |
12. | ದೇವರು ಪೂರ್ವದಿಂದಲೂ ನನ್ನ ಅರಸನೂ ಭೂಮಿಯ ಮಧ್ಯದಲ್ಲಿ ರಕ್ಷಣೆಯನ್ನು ಮಾಡುವಾತನೂ ಆಗಿದ್ದಾನೆ. |
13. | ನೀನು ನಿನ್ನ ಬಲದಿಂದ ಸಮುದ್ರವನ್ನು ಭೇದಿಸಿದಿ; ತಿಮಿಂಗಿಲಗಳ ತಲೆಗಳನ್ನು ನೀರುಗಳಲ್ಲಿ ಜಜ್ಜಿಬಿಟ್ಟಿ. |
14. | ನೀನು ಲಿವ್ಯಾತಾನದ ತಲೆ ಗಳನ್ನು ಒಡೆದು ತುಂಡು ತುಂಡುಮಾಡಿದಿ. ಅದನ್ನು ಅರಣ್ಯದ ಜನರಿಗೆ ಆಹಾರವಾಗಿ ಕೊಟ್ಟಿ. |
15. | ನೀನು ಬುಗ್ಗೆಯನ್ನೂ ಪ್ರವಾಹವನ್ನೂ ವಿಭಾಗಮಾಡಿದಿ; ಮಹಾ ನದಿಗಳನ್ನು ಒಣಗಿಸಿದಿ. |
16. | ಹಗಲು ನಿನ್ನದು; ರಾತ್ರಿಯು ಸಹ ನಿನ್ನದು; ನೀನು ಬೆಳಕನ್ನೂ ಸೂರ್ಯ ನನ್ನೂ ಸಿದ್ಧಮಾಡಿದ್ದೀ. |
17. | ನೀನು ಭೂಮಿಯ ಮೇರೆ ಗಳನ್ನೆಲ್ಲಾ ನಿರ್ಣಯಿಸಿದ್ದೀ; ಬೇಸಿಗೆ ಮತ್ತು ಚಳಿ ಗಾಲವನ್ನು ನಿರ್ಮಿಸಿದ್ದೀ. |
18. | ಓ ಕರ್ತನೇ, ವೈರಿಯು ನಿಂದಿಸಿ ಮೂರ್ಖರು ನಿನ್ನ ನಾಮವನ್ನು ದೂಷಿಸಿದ್ದನ್ನು ಜ್ಞಾಪಿಸಿಕೋ. |
19. | ನಿನ್ನ ಬೆಳವಕ್ಕಿಯ ಪ್ರಾಣವನ್ನು ದುಷ್ಟರ ಸಮೂ ಹಕ್ಕೆ ಒಪ್ಪಿಸ ಬೇಡ; ನಿನ್ನ ದೀನರ ಸಭೆಯನ್ನು ಸದಾ ಕಾಲಕ್ಕೆ ಮರೆತುಬಿಡಬೇಡ. |
20. | ಒಡಂಬಡಿಕೆಗೆ ಗೌರ ವವನ್ನು ಕೊಡು; ಭೂಮಿಯ ಕತ್ತಲಿನ ಸ್ಥಳಗಳು ಕ್ರೂರತನದ ನಿವಾಸಗಳಿಂದ ತುಂಬಿಯವೆ. |
21. | ಕುಗ್ಗಿ ದವನು ಅವಮಾನಕ್ಕೆ ತಿರಿಗಿಕೊಳ್ಳದೆ ಇರಲಿ; ದೀನನೂ ಬಡವನೂ ನಿನ್ನ ಹೆಸರನ್ನು ಸ್ತುತಿಸಲಿ. |
22. | ಓ ದೇವರೇ, ಏಳು; ನಿನ್ನ ಸ್ವಂತ ವ್ಯಾಜ್ಯವನ್ನು ವಿವಾದಿಸು; ದಿನವೆಲ್ಲಾ ಮೂರ್ಖನು ನಿನ್ನನ್ನು ಹೇಗೆ ನಿಂದಿಸುತ್ತಾನೆಂದು ಜ್ಞಾಪ ಕಮಾಡಿಕೋ. |
23. | ನಿನ್ನ ವೈರಿಗಳ ಸ್ವರವನ್ನು ಮರೆತು ಬಿಡಬೇಡ; ನಿನ್ನ ವಿರೋಧಿಗಳ ಘೋಷವು ಯಾವಾ ಗಲೂ ಏಳುತ್ತದೆ. |
← Psalms (74/150) → |