← Psalms (80/150) → |
1. | ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು. |
2. | ಎಫ್ರಾಯಾಮ್ ಬೆನ್ಯಾವಿಾನ್ ಮನಸ್ಸೆ ಯರ ಮುಂದೆ ನಿನ್ನ ಪರಾಕ್ರಮವನ್ನು ತೋರಿಸಿ ನಮ್ಮನ್ನು ರಕ್ಷಿಸು. |
3. | ಓ ದೇವರೇ, ನಮ್ಮನ್ನು ಮತ್ತೆ ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸುವಂತೆ ಮಾಡು; ಆಗ ನಾವು ರಕ್ಷಿಸಲ್ಪಡುವೆವು. |
4. | ಸೈನ್ಯಗಳ ದೇವರಾದ ಓ ಕರ್ತನೇ, ಎಷ್ಟರವರೆಗೆ ನಿನ್ನ ಜನರ ಪ್ರಾರ್ಥನೆಗೆ ವಿರೋಧವಾಗಿ ಕೋಪ ಗೊಳ್ಳುತ್ತೀ? |
5. | ಕಣ್ಣೀರಿನ ರೊಟ್ಟಿಯನ್ನು ಅವರಿಗೆ ತಿನ್ನಿಸಿ, ದೊಡ್ಡ ಅಳತೆಯಿಂದ ಕಣ್ಣೀರನ್ನು ಕುಡಿಯಲು ಕೊಡುತ್ತೀ. |
6. | ನಮ್ಮ ನೆರೆಯವರಿಗೆ ನೀನು ನಮ್ಮನ್ನು ವಿವಾದಕ್ಕೆ ಕಾರಣ ಮಾಡುತ್ತೀ; ನಮ್ಮ ಶತ್ರುಗಳು ತಮ್ಮಲ್ಲಿ ತಾವೇ ನಗುತ್ತಾರೆ. |
7. | ಸೈನ್ಯಗಳ ಓ ದೇವರೇ, ನೀನು ನಮ್ಮನ್ನು ಮತ್ತೆ ತಿರಿಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು. |
8. | ನೀನು ದ್ರಾಕ್ಷೇಗಿಡವನ್ನು ಐಗುಪ್ತದಿಂದ ತಂದಿ; ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿ. |
9. | ಅದರ ಮುಂದೆ ಸ್ಥಳ ಸಿದ್ಧಮಾಡಿದಿ; ಆಗ ಅದು ಬೇರೂರಿ ದೇಶವನ್ನು ತುಂಬಿತು. |
10. | ಅದರ ನೆರಳಿನಿಂದ ಬೆಟ್ಟ ಗಳೂ ಕೊಂಬೆಗಳಿಂದ ದೇವದಾರುಗಳೂ ಮುಚ್ಚಲ್ಪ ಟ್ಟವು. |
11. | ಅದು ತನ್ನ ರೆಂಬೆಗಳನ್ನು ಸಮುದ್ರದ ವರೆಗೂ ತನ್ನ ಬಳ್ಳಿಗಳನ್ನು ನದಿಗೂ ಹರಡಿಸಿತು. |
12. | ಮಾರ್ಗ ದಲ್ಲಿ ಹಾದು ಹೋಗುವವರೆಲ್ಲರು ಅದನ್ನು ಕೀಳುವ ಹಾಗೆ ಯಾಕೆ ಅದರ ಬೇಲಿಗಳನ್ನು ನೀನು ಮುರಿದು ಬಿಟ್ಟಿದ್ದೀ? |
13. | ಅಡವಿಯಿಂದ ಬಂದ ಹಂದಿಯು ಅದನ್ನು ಹಾಳುಮಾಡುತ್ತದೆ ಕಾಡಿನ ಮೃಗವು ಅದನ್ನು ಮೇಯ್ದು ಬಿಡುತ್ತದೆ. |
14. | ಓ ಸೈನ್ಯಗಳ ದೇವರೇ, ತಿರುಗಿಕೋ ಎಂದು ನಾವು ನಿನ್ನನ್ನು ಬೇಡುತ್ತೇವೆ. ಆಕಾಶದಿಂದ ದೃಷ್ಟಿಸಿ ನೋಡು; ಈ ದ್ರಾಕ್ಷೇಗಿಡವನ್ನೂ |
15. | ನಿನ್ನ ಬಲಗೈ ನೆಟ್ಟ ಸಸಿಯನ್ನೂ ನೀನು ನಿನಗೆ ಬಲಪಡಿಸಿ ಕೊಂಡ ಕೊಂಬೆಯನ್ನೂ ಪರಾಮರಿಸು. |
16. | ಅದು ಈಗ ಕೊಯ್ಯಲ್ಪಟ್ಟು ಬೆಂಕಿಯಿಂದ ಸುಡಲ್ಪಟ್ಟಿದೆ; ನಿನ್ನ ಬಾಯಿ ಗದರಿಕೆಯಿಂದ ಅವರು ನಾಶವಾಗುತ್ತಾರೆ. |
17. | ನಿನ್ನ ಬಲಗೈ ಮನುಷ್ಯನ ಮೇಲೆ ಹೌದು, ನೀನು ನಿನಗೆ ಬಲಪಡಿಸಿಕೊಂಡ ಮನುಷ್ಯ ಪುತ್ರನ ಮೇಲೆ ನಿನ್ನ ಕೈ ಇರಲಿ. |
18. | ಆಗ ನಾವು ನಿನ್ನಿಂದ ಹಿಂದಿರು ಗುವದಿಲ್ಲ; ನಮ್ಮನ್ನು ಬದುಕಿಸು, ಆಗ ನಿನ್ನ ಹೆಸರನ್ನು ಕರೆಯುವೆವು. |
19. | ಸೈನ್ಯಗಳ ದೇವರಾದ ಓ ಕರ್ತನೇ, ಮತ್ತೆ ನಮ್ಮನ್ನು ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು. |
← Psalms (80/150) → |