← Psalms (84/150) → |
1. | ಸೈನ್ಯಗಳ ಓ ಕರ್ತನೇ, ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ! |
2. | ಕರ್ತನ ಅಂಗಳ ಗಳಿಗಾಗಿ ನನ್ನ ಪ್ರಾಣವು ಬಯಸಿ, ಹೌದು, ಅದು ಕುಂದುತ್ತದೆ; ನನ್ನ ಹೃದಯವೂ ಶರೀರವೂ ಜೀವ ವುಳ್ಳ ದೇವರಿಗಾಗಿ ಕೂಗಿಕೊಳ್ಳುತ್ತದೆ. |
3. | ಸೈನ್ಯಗಳ ಓ ಕರ್ತನೇ, ನನ್ನ ಅರಸನೇ, ನನ್ನ ದೇವರೇ, ಹೌದು ಗುಬ್ಬಿಯು ಮನೆಯನ್ನೂ ಬಾನಕ್ಕೀಯು ತನ್ನ ಮರಿಗ ಳನ್ನಿಡುವ ಗೂಡನ್ನೂ ನಿನ್ನ ಬಲಿಪೀಠಗಳ ಬಳಿಯಲ್ಲಿ ಕಂಡುಕೊಂಡವೆ. |
4. | ನಿನ್ನ ಆಲಯದಲ್ಲಿ ವಾಸವಾಗಿ ರುವವರು ಭಾಗ್ಯವಂತರು; ಇನ್ನೂ ನಿನ್ನನ್ನು ಅವರು ಸ್ತುತಿಸುವರು ಸೆಲಾ. |
5. | ಯಾರಿಗೆ ನೀನು ಬಲವಾಗಿ ದ್ದೀಯೋ ಆ ಮನುಷ್ಯನು ಭಾಗ್ಯವಂತನು; ಯಾರಲ್ಲಿ ಆತನ ಮಾರ್ಗಗಳು ಇವೆಯೋ ಅವನೇ ಧನ್ಯನು. |
6. | ಬಾಕಾ ತಗ್ಗನ್ನು ದಾಟುವಾಗ ಅದನ್ನು ಬುಗ್ಗೆಯಾಗಿ ಮಾಡುತ್ತಾರೆ; ಮಳೆಯು ಕೊಳಗಳನ್ನು ತುಂಬುತ್ತದೆ. |
7. | ಅವರು ಬಲದಿಂದ ಬಲಕ್ಕೆ ಹೋಗಿ, ಚೀಯೋನಿನಲ್ಲಿ ದೇವರ ಮುಂದೆ ಕಾಣಿಸಿಕೊಳ್ಳುತ್ತಾರೆ. |
8. | ಸೈನ್ಯಗಳ ದೇವರಾದ ಓ ಕರ್ತನೇ, ನನ್ನ ಪ್ರಾರ್ಥನೆ ಯನ್ನು ಕೇಳು; ಯಾಕೋಬನ ಓ ದೇವರೇ, ಕಿವಿ ಗೊಡು ಸೆಲಾ. |
9. | ನಮ್ಮ ಗುರಾಣಿಯಾಗಿರುವ ಓ ದೇವರೇ, ನೋಡು; ನಿನ್ನ ಅಭಿಷಿಕ್ತನ ಮುಖವನ್ನು ದೃಷ್ಟಿಸು. |
10. | ಸಾವಿರ ದಿವಸಗಳಿಗಿಂತ ನಿನ್ನ ಅಂಗಳಗ ಳಲ್ಲಿ ಇರುವ ಒಂದು ದಿನವು ಒಳ್ಳೇದಾಗಿದೆ; ದುಷ್ಟರ ಗುಡಾರಗಳಲ್ಲಿ ವಾಸಮಾಡುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯುವವನಾಗಿರುವದು ನನಗೆ ಒಳ್ಳೆಯದು. |
11. | ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ. |
12. | ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು. |
← Psalms (84/150) → |