← Psalms (88/150) → |
1. | ನನ್ನ ರಕ್ಷಣೆಯ ದೇವರಾದ ಓ ಕರ್ತನೇ, ಹಗಲಿರುಳು ನಿನ್ನ ಮುಂದೆ ಕೂಗುತ್ತೇನೆ. |
2. | ನನ್ನ ಪ್ರಾರ್ಥನೆಯು ನಿನ್ನ ಮುಂದೆ ಬರಲಿ; ನನ್ನ ಮೊರೆಗೆ ನೀನು ಕಿವಿಗೊಡು. |
3. | ನನ್ನ ಜೀವವು ಕಷ್ಟ ಗಳಿಂದ ತುಂಬಿಯದೆ, ನನ್ನ ಪ್ರಾಣವು ಸಮಾಧಿಗೆ ಸವಿಾಪವಾಗಿದೆ. |
4. | ಕುಣಿಗೆ ಇಳಿಯುವವರ ಸಂಗಡ ಎಣಿಸಲ್ಪಟ್ಟಿದ್ದೇನೆ; ಬಲವಿಲ್ಲದ ಮನುಷ್ಯನ ಹಾಗಿದ್ದೇನೆ. |
5. | ಕೊಲ್ಲಲ್ಪಟ್ಟು ಸಮಾಧಿಯಲ್ಲಿ ಮಲಗಿರುವವರನ್ನು ನೀನು ಇನ್ನು ಜ್ಞಾಪಕಮಾಡಿಕೊಳ್ಳದ ಹಾಗೆ ಸತ್ತವ ರಲ್ಲಿ ಬಿಡಲ್ಪಟ್ಟಿದ್ದೇನೆ; ಅವರು ನಿನ್ನ ಕೈಯಿಂದ ಕಡಿ ಯಲ್ಪಟ್ಟಿದ್ದಾರೆ. |
6. | ಕೆಳಗಿನ ಆಳವಾದ ಕುಣಿಯಲ್ಲಿಯೂ ಕತ್ತಲೆಯಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದಿ. |
7. | ನಿನ್ನ ಕೋಪವು ನನ್ನ ಮೇಲೆ ನೆಲೆಯಾಗಿದೆ; ನಿನ್ನ ಅಲೆಗಳಿಂದೆಲ್ಲಾ ನನ್ನನ್ನು ಕುಂದಿ ಸಿದ್ದೀ ಸೆಲಾ. |
8. | ನನ್ನ ಪರಿಚಿತರನ್ನು ನನಗೆ ದೂರಮಾಡಿದ್ದೀ; ನನ್ನನ್ನು ಅವ ರಿಗೆ ಅಸಹ್ಯ ಮಾಡಿದ್ದೀ; ಮುಚ್ಚಲ್ಪಟ್ಟಿದ್ದೇನೆ, ಹೊರಗೆ ಬರಲಾರೆನು. |
9. | ಬಾಧೆಯ ದೆಸೆಯಿಂದ ನನ್ನ ಕಣ್ಣು ದುಃಖಿಸುತ್ತದೆ. ಕರ್ತನೇ, ದಿನವೆಲ್ಲಾ ನಿನ್ನನ್ನು ಕರೆಯು ತ್ತೇನೆ; ನಾನು ನಿನ್ನ ಕಡೆಗೆ ನನ್ನ ಕೈಗಳನ್ನು ಚಾಚುತ್ತೇನೆ. |
10. | ಸತ್ತವರಿಗೆ ಅದ್ಭುತಗಳನ್ನು ತೋರಿಸುವಿಯೋ? ಸತ್ತವರು ಎದ್ದು ನಿನ್ನನ್ನು ಕೊಂಡಾಡುವರೋ? ಸೆಲಾ. |
11. | ಸಮಾಧಿಯಲ್ಲಿ ನಿನ್ನ ಪ್ರೀತಿ ಕರುಣೆಯು ಇಲ್ಲವೆ ನಾಶನ ಸ್ಥಳದಲ್ಲಿ ನಿನ್ನ ನಂಬಿಗಸ್ತಿಕೆಯು ಸಾರಲ್ಪಡುವವೋ? |
12. | ಕತ್ತಲೆಯಲ್ಲಿ ನಿನ್ನ ಅದ್ಭುತಗಳೂ ಮರೆ ಯುವ ದೇಶದಲ್ಲಿ ನಿನ್ನ ನೀತಿಯೂ ತಿಳಿಯಲ್ಪಡು ವದೋ? |
13. | ಆದರೆ ನಾನು ಓ ಕರ್ತನೇ, ನಿನ್ನ ಕಡೆಗೆ ಮೊರೆಯಿಡುತ್ತೇನೆ. ಹೊತ್ತಾರೆ ನನ್ನ ಪ್ರಾರ್ಥ ನೆಯು ನಿನ್ನನ್ನು ಎದುರುಗೊಳ್ಳುವದು. |
14. | ಕರ್ತನೇ,ಯಾಕೆ ನನ್ನ ಪ್ರಾಣವನ್ನು ತೊರೆದು ಬಿಡುತ್ತೀ?ಯಾಕೆ ನಿನ್ನ ಮುಖವನ್ನು ನನಗೆ ಮರೆಮಾಡುತ್ತೀ? |
15. | ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ. |
16. | ನನ್ನ ಮೇಲೆ ನಿನ್ನ ಕೋಪಾಗ್ನಿಯು ದಾಟುವದು. ನಿನ್ನ ಹೆದರಿಕೆಗಳು ನನ್ನನ್ನು ಸಂಹರಿಸುತ್ತವೆ. |
17. | ನೀರಿನ ಹಾಗೆ ಅವು ಬಂದು ನನ್ನನ್ನು ದಿನವೆಲ್ಲಾ ಸುತ್ತಿಕೊಂಡಿವೆ; ಏಕವಾಗಿ ನನ್ನನ್ನು ಮುತ್ತಿಕೊಂಡಿವೆ. |
18. | ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು. |
← Psalms (88/150) → |