← Psalms (89/150) → |
1. | ಕರ್ತನ ಕರುಣೆಗಳನ್ನು ಯುಗಯುಗಕ್ಕೂ ಹಾಡುವೆನು; ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯನ್ನು ನನ್ನ ಬಾಯಿಂದ ತಿಳಿಯಪಡಿ ಸುವೆನು. |
2. | ಎಂದೆಂದಿಗೂ ಕರುಣೆಯು ಸ್ಥಾಪಿಸಲ್ಪಡು ವದು; ಆಕಾಶಗಳಲ್ಲಿಯೂ ನಿನ್ನ ನಂಬಿಗಸ್ತಿಕೆಯನ್ನು ಸ್ಥಿರಪಡಿಸುವಿ ಎಂದು ಹೇಳಿದ್ದೇನೆ. |
3. | ನಾನು ಆದು ಕೊಂಡವನೊಂದಿಗೆ ಒಡಂಬಡಿಕೆ ಮಾಡಿದ್ದೇನೆ; ನನ್ನ ಸೇವಕನಾದ ದಾವೀದನಿಗೆ ಆಣೆ ಇಟ್ಟು ಹೇಳಿದ್ದೇ ನಂದರೆ-- |
4. | ಎಂದೆಂದಿಗೂ ನಿನ್ನ ಸಂತತಿಯನ್ನು ಸ್ಥಿರ ಪಡಿಸುವೆನು; ತಲತಲಾಂತರಕ್ಕೂ ನಿನ್ನ ಸಿಂಹಾಸನವನ್ನು ಕಟ್ಟುವೆನು ಸೆಲಾ. |
5. | ಇದಲ್ಲದೆ, ಆಕಾಶಗಳು ಓ ಕರ್ತನೇ, ನಿನ್ನ ಅದ್ಭುತಗಳನ್ನು ಪರಿಶುದ್ಧರ ಸಭೆಯಲ್ಲಿ ನಿನ್ನ ನಂಬಿಗಸ್ತಿಕೆಯನ್ನು ಸಹ ಕೊಂಡಾಡುವವು. |
6. | ಪರ ಲೋಕದಲ್ಲಿ ಕರ್ತನಿಗೆ ಸಮಾನವಾದವನು ಯಾರು? ಪರಾಕ್ರಮಶಾಲಿಗಳ ಮಕ್ಕಳಲ್ಲಿ ಕರ್ತನಿಗೆ ಸಮಾನನಾದವನು ಯಾರು? |
7. | ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ. |
8. | ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹಾಗೆ ಶಕ್ತನಾದ ಕರ್ತನು ಯಾರು? ಇಲ್ಲವೆ ನಿನ್ನ ನಂಬಿಗಸ್ತಿಕೆಯು ನಿನ್ನ ಸುತ್ತಲೂ ಅದೆ. |
9. | ನೀನು ಸಮುದ್ರದ ಉಬ್ಬರವನ್ನು ಆಳುತ್ತೀ; ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀ. |
10. | ಕೊಲ್ಲ ಲ್ಪಟ್ಟ ಒಬ್ಬನಂತೆ ನೀನು ರಾಹಬನ್ನು ತುಂಡಾಗುವಂತೆ ಒಡೆದಿದ್ದೀ. ನಿನ್ನ ಬಲದ ತೋಳಿನಿಂದ ನಿನ್ನ ಶತ್ರು ಗಳನ್ನು ಚದರಿಸಿ ಬಿಟ್ಟಿದ್ದೀ. |
11. | ಆಕಾಶಗಳು ನಿನ್ನವು; ಭೂಮಿಯು ಸಹ ನಿನ್ನದು; ಲೋಕವನ್ನೂ ಅದರ ಪೂರ್ಣತೆಯನ್ನೂ ನೀನು ಉಂಟುಮಾಡಿದ್ದೀ. |
12. | ಉತ್ತರವನ್ನೂ ದಕ್ಷಿಣವನ್ನೂ ನೀನೇ ನಿರ್ಮಿಸಿದ್ದೀ; ತಾಬೋರೂ ಹೆರ್ಮೋನೂ ನಿನ್ನ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ. |
13. | ನಿನಗೆ ಪರಾಕ್ರಮವುಳ್ಳ ತೋಳು ಉಂಟು; ಕೈ ಬಲವುಳ್ಳದ್ದು. ನಿನ್ನ ಬಲಗೈ ಉನ್ನತವಾ ದದ್ದು. |
14. | ನೀತಿಯೂ ನ್ಯಾಯವೂ ನಿನ್ನ ಸಿಂಹಾಸನದ ಸ್ಥಳವಾಗಿದೆ ಕೃಪೆಯೂ ಸತ್ಯವೂ ನಿನ್ನ ಮುಂದೆ ಹೋಗುತ್ತವೆ; |
15. | ಉತ್ಸಾಹ ಧ್ವನಿಯನ್ನು ತಿಳಿದ ಜನರು ಧನ್ಯರು; ಕರ್ತನೇ, ನಿನ್ನ ಮುಖದ ಬೆಳಕಿನಲ್ಲಿ ಅವರು ನಡೆದುಕೊಳ್ಳುವರು. |
16. | ನಿನ್ನ ಹೆಸರಿನಿಂದ ದಿನವೆಲ್ಲಾ ಉಲ್ಲಾಸಪಟ್ಟು ನಿನ್ನ ನೀತಿಯಲ್ಲಿ ಅವರು ಉನ್ನತಕ್ಕೇರು ವರು. |
17. | ಅವರ ಬಲದ ಮಹಿಮೆಯು ನೀನೇ ಮತ್ತು ನಿನ್ನ ಕಟಾಕ್ಷದಿಂದ ನಮ್ಮ ಕೊಂಬು ಉನ್ನತವಾಗುವದು. |
18. | ನಮ್ಮ ಗುರಾಣಿಯು ಕರ್ತನೇ; ನಮ್ಮ ಅರಸನು ಇಸ್ರಾಯೇಲಿನ ಪರಿಶುದ್ಧನೇ. |
19. | ಆಗ ದರ್ಶನದಲ್ಲಿ ನಿನ್ನ ಪರಿಶುದ್ಧನ ಸಂಗಡ ಮಾತಾಡಿ ಹೇಳಿದ್ದೇನಂದರೆ --ಪರಾಕ್ರಮಶಾಲಿಯ ಮೇಲೆ ಸಹಾಯವನ್ನು ಇಟ್ಟಿ ದ್ದೇನೆ. ಆಯಲ್ಪಟ್ಟವನನ್ನು ಜನರೊಳಗಿಂದ ಉನ್ನತಕ್ಕೇರಿ ಸಿದ್ದೇನೆ. |
20. | ನನ್ನ ಸೇವಕನಾದ ದಾವೀದನನ್ನು ಕಂಡು ಕೊಂಡಿದ್ದೇನೆ; ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ. |
21. | ಅವನ ಸಂಗಡಲೇ ನನ್ನ ಕೈ ಸ್ಥಿರವಾಗಿರುವದು; ನನ್ನ ತೋಳು ಅವನನ್ನು ಬಲಪಡಿಸು ವುದು. |
22. | ಶತ್ರುವು ಅವನನ್ನು ಬಲಾತ್ಕಾರ ಮಾಡನು; ಯಾವ ದುಷ್ಟನೂ ಅವನನ್ನು ಹಿಂಸೆ ಪಡಿಸನು. |
23. | ಇದ ಲ್ಲದೆ ಅವನ ಮುಂದೆ ವೈರಿಗಳನ್ನು ಹೊಡೆದು ಬಿಡು ವೆನು; ಅವನ ಹಗೆಯವರನ್ನು ಸಂಕಟಪಡಿಸುವೆನು. |
24. | ಆದರೆ ನನ್ನ ನಂಬಿಗಸ್ತಿಕೆಯೂ ಕರುಣೆಯೂ ಅವನ ಸಂಗಡ ಇರುವವು. ನನ್ನ ಹೆಸರಿನಲ್ಲಿ ಅವನ ಕೊಂಬು ಉನ್ನತವಾಗುವದು. |
25. | ಸಮುದ್ರದಲ್ಲಿ ಅವನ ಕೈ ಯನ್ನೂ ನದಿಗಳಲ್ಲಿ ಅವನ ಬಲಗೈಯನ್ನೂ ಇರಿಸು ವೆನು. |
26. | ಅವನು--ನೀನು ನನ್ನ ತಂದೆಯೂ ದೇವರೂ ರಕ್ಷಣೆಯ ಬಂಡೆಯೂ ಎಂದು ನನಗೆ ಮೊರೆಯಿಡು ವನು. |
27. | ನಾನು ಅವನನ್ನು ನನ್ನ ಚೊಚ್ಚಲ ಮಗನ ನ್ನಾಗಿಯೂ ಭೂಮಿಯ ಅರಸರಿಗಿಂತ ಉನ್ನತನನ್ನಾ ಗಿಯೂ ಮಾಡುವೆನು. |
28. | ಎಂದೆಂದಿಗೂ ಅವನಿಗೋ ಸ್ಕರ ನನ್ನ ಕರುಣೆಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಅವನೊಂದಿಗೆ ದೃಢವಾಗಿರುವದು. |
29. | ಅವನ ಸಂತತಿ ಯನ್ನು ಸಹ ಎಂದೆಂದಿಗೂ ಅವನ ಸಿಂಹಾಸನವನ್ನು ಆಕಾಶದ ದಿವಸಗಳ ಹಾಗೆಯೂ ಮಾಡುವೆನು. |
30. | ಅವನ ಮಕ್ಕಳು ನನ್ನ ನ್ಯಾಯ ಪ್ರಮಾಣವನ್ನು ಬಿಟ್ಟು, ನನ್ನ ನ್ಯಾಯಗಳಲ್ಲಿ ನಡೆಯದೇ ಹೋದರೆ, |
31. | ಅವರು ನನ್ನ ನೇಮಕಗಳನ್ನು ಮುರಿದು ನನ್ನ ಆಜ್ಞೆಗಳನ್ನು ಕೈಕೊಳ್ಳದೇ ಹೋದರೆ, |
32. | ಕೋಲಿ ನಿಂದ ಅವರ ದ್ರೋಹವನ್ನೂ ಪೆಟ್ಟುಗಳಿಂದ ಅವರ ಅಕ್ರಮವನ್ನೂ ದಂಡಿಸುವೆನು. |
33. | ಆದಾಗ್ಯೂ ನನ್ನ ಪ್ರೀತಿ ಕರುಣೆಯನ್ನು ಅವನಿಂದ ಸಂಪೂರ್ಣವಾಗಿ ತೊಲಗಿಸೆನು; ಇಲ್ಲವೇ ನನ್ನ ನಂಬಿಗಸ್ತಿಕೆಯನ್ನು ವ್ಯರ್ಥ ಮಾಡೆನು. |
34. | ನನ್ನ ಒಡಂಬಡಿಕೆಯನ್ನು ನಾನು ಮುರಿ ಯೆನು; ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು. |
35. | ಒಂದು ಸಾರಿ ನನ್ನ ಪರಿಶುದ್ಧತ್ವ ದಿಂದ ಆಣೆಯಿಟ್ಟು ಹೇಳಿದ್ದೇನೆ; ದಾವೀದನಿಗೆ ಸುಳ್ಳಾ ಡೆನು. |
36. | ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು. |
37. | ಚಂದ್ರನ ಹಾಗೆ ಅದು ಯುಗಯುಗಕ್ಕೂ, ಸ್ಥಿರವಾಗಿರುವದು; ಪರಲೋಕದಲ್ಲಿ ರುವ ಸಾಕ್ಷಿಯ ಹಾಗೆ ನಂಬಿಕೆ ಯುಳ್ಳದ್ದಾಗಿರುವದು ಸೆಲಾ. |
38. | ಆದರೆ ನೀನು ಅಸಹ್ಯಿಸಿಬಿಟ್ಟು ತಿರಸ್ಕರಿಸಿ ನಿನ್ನ ಅಭಿಷಕ್ತನ ಮೇಲೆ ಉಗ್ರನಾದಿ; |
39. | ನಿನ್ನ ಸೇವಕನ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಹೊಲೆ ಮಾಡಿದ್ದೀ. |
40. | ಅವನ ಬೇಲಿಗಳ ನ್ನೆಲ್ಲಾ ಮುರಿದು ಅವನ ಕೋಟೆಗಳನ್ನು ಹಾಳು ಮಾಡಿದ್ದೀ. |
41. | ಮಾರ್ಗಸ್ಥರೆಲ್ಲರು ಅವನನ್ನು ಕೊಳ್ಳೇ ಹೊಡೆಯುತ್ತಾರೆ; ತನ್ನ ನೆರೆಯವರಿಗೆ ಅವನು ನಿಂದೆ ಯಾಗಿದ್ದಾನೆ. |
42. | ಅವನ ವೈರಿಗಳ ಬಲಗೈಯನ್ನು ಉನ್ನತ ಮಾಡಿದ್ದೀ; ಶತ್ರುಗಳೆಲ್ಲರನ್ನು ಸಂತೋಷಪಡಿಸಿದ್ದೀ. |
43. | ಅವನ ಕತ್ತಿಯ ಬಾಯನ್ನು ಹಿಂದಿರುಗಿಸಿ, ಯುದ್ಧ ದಲ್ಲಿ ಅವನನ್ನು ನಿಲ್ಲುವಂತೆ ಮಾಡಲಿಲ್ಲ. |
44. | ಅವನ ಪ್ರಭೆಯನ್ನು ತಡೆದಿ; ಅವನ ಸಿಂಹಾಸನವನ್ನು ನೆಲಕ್ಕೆ ಹಾಕಿದ್ದೀ. |
45. | ಅವನ ಯೌವನದ ದಿವಸಗಳನ್ನು ಕಡಿಮೆಮಾಡಿ, ನಾಚಿಕೆಯಿಂದ ಅವನನ್ನು ಮುಚ್ಚಿದ್ದೀ ಸೆಲಾ. |
46. | ಕರ್ತನೇ, ಎಷ್ಟರ ವರೆಗೆ? ಸದಾಕಾಲಕ್ಕೆ ನೀನು ಮರೆಯಾಗಿರುವಿ? ನಿನ್ನ ಸಿಟ್ಟು ಬೆಂಕಿಯ ಹಾಗೆ ಉರಿಯುವದೋ? |
47. | ನನ್ನ ಆಯುಸ್ಸು ಎಷ್ಟು ಕಡಿಮೆ ಯೆಂದು ಜ್ಞಾಪಕಮಾಡಿಕೋ; ಎಲ್ಲಾ ಮನುಷ್ಯರನ್ನು ಯಾಕೆ ವ್ಯರ್ಥವಾಗಿ ನಿರ್ಮಿಸಿದ್ದೀ? |
48. | ಮರಣವನ್ನು ನೋಡದೆ ಬದುಕುವಂಥ, ಸಮಾಧಿಯ ವಶದಿಂದ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಂಥ, ಪುರುಷನು ಯಾರು ಸೆಲಾ. |
49. | ಕರ್ತನೇ, ನಿನ್ನ ಸತ್ಯದಲ್ಲಿ ನೀನು ದಾವೀದನಿಗೆ ಆಣೆ ಇಟ್ಟ ನಿನ್ನ ಮುಂಚಿನ ಪ್ರೀತಿ ಕರುಣೆಯು ಎಲ್ಲಿ? |
50. | ಕರ್ತನೇ, ನಿನ್ನ ಸೇವಕರ ನಿಂದೆ ಯನ್ನು, ಎಲ್ಲಾ ಪರಾಕ್ರಮಿಗಳ ನಿಂದೆಯನ್ನು ನಾನು ಹೇಗೆ ನನ್ನ ಎದೆಯಲ್ಲಿ ಹೊತ್ತೆನೆಂದೂ ಜ್ಞಾಪಕ ಮಾಡಿಕೋ. |
51. | ಕರ್ತನೇ, ನಿನ್ನ ಶತ್ರುಗಳು ನಿಂದಿಸುತ್ತಾ ರಲ್ಲಾ? ನಿನ್ನ ಅಭಿಷಿಕ್ತನ ಹೆಜ್ಜೆಗಳನ್ನು ನಿಂದಿಸುತ್ತಾ ರಲ್ಲಾ? |
52. | ಕರ್ತನಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಅಮೆನ್. |
← Psalms (89/150) → |