← Psalms (94/150) → |
1. | ಓ ಕರ್ತನೇ, ದೇವರೇ ಮುಯ್ಯಿ ತೀರಿಸುವದು ನಿನ್ನದು; ಓ ದೇವರೇ, ಮುಯ್ಯಿ ತೀರಿಸುವದು ನಿನಗೆ ಸೇರಿದ್ದು. ನಿನ್ನನ್ನು ಪ್ರಕಟಿಸಿಕೋ. |
2. | ಭೂಮಿಯ ನ್ಯಾಯಾಧಿಪತಿಯೇ, ನೀನು ಎದ್ದೇಳು; ಗರ್ವಿಷ್ಠರಿಗೆ ಪ್ರತೀಕಾರವನ್ನು ಕೊಡು. |
3. | ಕರ್ತನೇ, ದುಷ್ಟರು ಎಷ್ಟರ ವರೆಗೆ ದುಷ್ಟರು ಎಷ್ಟರ ವರೆಗೆ ಜಯಿಸುವರು? |
4. | ಎಷ್ಟುಕಾಲ ಕಠಿಣ ವಾದವುಗಳನ್ನು ನುಡಿದು ಮಾತಾಡುತ್ತಾರೆ? ದುಷ್ಟತನ ಮಾಡುವವರೆಲ್ಲರು ಹೆಚ್ಚಿಸಿಕೊಳ್ಳುತ್ತಾರೆ; |
5. | ಓ ಕರ್ತನೇ, ನಿನ್ನ ಜನರನ್ನು ತುಂಡುತುಂಡು ಮಾಡುತ್ತಾರೆ; ನಿನ್ನ ಸ್ವಾಸ್ಥ್ಯವನ್ನು ಬಾಧಿಸುತ್ತಾರೆ. |
6. | ವಿಧವೆಯನ್ನೂ ಪರ ದೇಶಸ್ಥನನ್ನೂ ಅವರು ಕೊಲ್ಲುತ್ತಾರೆ; ದಿಕ್ಕಿಲ್ಲದವರನ್ನು ಹತಮಾಡುತ್ತಾರೆ. |
7. | ಕರ್ತನು ನೋಡುವದಿಲ್ಲ; ಇಲ್ಲವೆ ಯಾಕೋಬನ ದೇವರು ಲಕ್ಷಿಸುವದಿಲ್ಲ ಅನ್ನುತ್ತಾರೆ. |
8. | ಜನರಲ್ಲಿ ಪಶುಪ್ರಾಯದವರೇ, ನೀವು ಗ್ರಹಿಸಿರಿ; ಹುಚ್ಚರೇ, ಯಾವಾಗ ಬುದ್ಧಿವಂತರಾಗುವಿರಿ? |
9. | ಕಿವಿ ಯನ್ನು ಕೊಟ್ಟವನು ಕೇಳನೋ? ಕಣ್ಣನ್ನು ರೂಪಿಸಿದವನು ತಿಳಿಯನೋ? |
10. | ಜನಾಂಗಗಳನ್ನು ಶಿಕ್ಷಿಸುವ ವನೂ ಮನುಷ್ಯನಿಗೆ ತಿಳುವಳಿಕೆಯನ್ನು ಕಲಿಸುವವನೂ ಗದರಿಸನೋ? |
11. | ಕರ್ತನು ಮನುಷ್ಯನ ಯೋಚನೆ ಗಳನ್ನು ವ್ಯರ್ಥವೆಂದು ತಿಳುಕೊಳ್ಳುತ್ತಾನೆ. |
12. | ಓ ಕರ್ತನೇ, ನೀನು ಶಿಕ್ಷಿಸುವವನೂ ನಿನ್ನ ನ್ಯಾಯ ಪ್ರಮಾಣದಿಂದ ಯಾರಿಗೆ ಕಲಿಸುವಿಯೋ ಅವನು ಧನ್ಯನು. |
13. | ದುಷ್ಟನಿಗಾಗಿ ಕುಣಿಯು ಅಗಿಯಲ್ಪಡುವ ವರೆಗೆ ಕಷ್ಟದ ದಿವಸಗಳಲ್ಲಿ ಅಂಥವನಿಗೆ ವಿಶ್ರಾಂತಿ ಯನ್ನು ಕೊಡುವನು. |
14. | ಕರ್ತನು ತನ್ನ ಜನರನ್ನು ತೊರೆಯನು; ಇಲ್ಲವೆ ತನ್ನ ಸ್ವಾಸ್ಥ್ಯವನ್ನು ಬಿಟ್ಟುಬಿಡನು. |
15. | ನ್ಯಾಯವು ನೀತಿಗೆ ತಿರುಗಿಕೊಳ್ಳುವದು; ಯಥಾರ್ಥ ಹೃದಯದವರೆಲ್ಲರು ಅದನ್ನು ಹಿಂಬಾಲಿಸುವರು. |
16. | ನನಗೋಸ್ಕರ ದುರ್ಮಾರ್ಗಿಗಳಿಗೆ ವಿರೋಧ ವಾಗಿ ಏಳುವವನ್ಯಾರು? ಇಲ್ಲವೆ ಅಪರಾಧ ಮಾಡು ವವರಿಗೆ ವಿರೋಧವಾಗಿ ನನಗೋಸ್ಕರ ನಿಂತು ಕೊಳ್ಳುವವನಾರು? |
17. | ಕರ್ತನು ನನಗೆ ಸಹಾಯಕ ನಾಗಿರದಿದ್ದರೆ ನನ್ನ ಪ್ರಾಣವು ಮೌನದಲ್ಲಿ ವಾಸಿಸ ಬೇಕಾಗಿತ್ತು. |
18. | ನನ್ನ ಕಾಲುಜಾರಿತೋ ಎಂದು ನಾನು ಅಂದಾಗಲೇ ಓ ಕರ್ತನೇ, ನಿನ್ನ ಕರುಣೆಯು ನನ್ನನ್ನು ಎತ್ತಿಹಿಡಿಯಿತು. |
19. | ನನ್ನ ಚಿಂತೆಗಳು ಅಂತರಂಗದಲ್ಲಿ ಹೆಚ್ಚುವಾಗ ನಿನ್ನ ಆದರಣೆಗಳು ನನ್ನ ಪ್ರಾಣವನ್ನು ಆನಂದಪಡಿಸುತ್ತವೆ. |
20. | ವಿಧಿಯಿಂದ ಕೇಡನ್ನು ಕಲ್ಪಿಸುವ ಅಪರಾಧದ ಸಿಂಹಾಸನವು ನಿನ್ನ ಸಂಗಡ ಅನ್ಯೋನ್ಯವಾಗಿರು ವದೋ? |
21. | ನೀತಿವಂತನ ಪ್ರಾಣಕ್ಕೆ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ನಿರಪರಾಧಿಯ ರಕ್ತವನ್ನು ಖಂಡಿಸುತ್ತಾರೆ. |
22. | ಆದರೆ ಕರ್ತನು ನನಗೆ ದುರ್ಗವೂ ನನ್ನ ದೇವರು ನನ್ನ ಆಶ್ರಯದ ಬಂಡೆಯೂ ಆಗಿದ್ದಾನೆ. |
23. | ಅವರ ಅಪರಾಧವನ್ನು ಅವರ ಮೇಲೆ ತಿರಿಗಿ ಬರಮಾಡುವನು; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಕರ್ತನು ಅವರನ್ನು ಸಂಹರಿಸುವನು. |
← Psalms (94/150) → |