← Psalms (98/150) → |
1. | ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಆತನು ಅದ್ಭುತಗಳನ್ನು ಮಾಡಿದ್ದಾನೆ; ಆತನ ಬಲಗೈಯೂ ಪರಿಶುದ್ಧತೋಳೂ ಆತನಿಗೆ ಜಯ ವನ್ನು ತಂದಿವೆ. |
2. | ರ್ತನು ತನ್ನ ರಕ್ಷಣೆಯನ್ನು ತಿಳಿಯ ಮಾಡಿದ್ದಾನೆ; ತನ್ನ ನೀತಿಯನ್ನು ಜನಾಂಗಗಳ ದೃಷ್ಟಿಗೆ ಬಹಿರಂಗವಾಗಿ ಪ್ರಕಟಮಾಡಿದ್ದಾನೆ. |
3. | ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ. |
4. | ಸಮಸ್ತ ಭೂಮಿಯೇ; ಕರ್ತನಿಗೆ ಉತ್ಸಾಹಧ್ವನಿ ಮಾಡಿರಿ, ಗಟ್ಟಿಯಾದ ಧ್ವನಿಯಿಂದ ಸಂತೋಷಿಸಿ ಕೀರ್ತಿಸಿರಿ. |
5. | ಕರ್ತನಿಗೆ ಕಿನ್ನರಿಯಿಂದ, ಹೌದು, ಕಿನ್ನರಿ ಯಿಂದಲೂ ಕೀರ್ತನೆಯ ಸ್ವರದಿಂದಲೂ ಹಾಡಿರಿ. |
6. | ತುತೂರಿಗಳಿಂದಲೂ ಹೌದು, ತುತೂರಿಯ ಶಬ್ಧ ದಿಂದಲೂ, ಅರಸನಾದ ಕರ್ತನ ಮುಂದೆ ಜಯಧ್ವನಿ ಮಾಡಿರಿ. |
7. | ಸಮುದ್ರವೂ ಅದರ ಪರಿಪೂರ್ಣತೆಯೂ ಲೋಕ ವೂ ಅದರ ನಿವಾಸಿಗಳೂ ಘೋಷಿಸಲಿ. |
8. | ಪ್ರವಾಹ ಗಳು ಕೈತಟ್ಟಲಿ; ಕರ್ತನ ಮುಂದೆ ಬೆಟ್ಟಗಳು ಕೂಡ ಉತ್ಸಾಹ ಧ್ವನಿಮಾಡಲಿ. |
9. | ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು. |
← Psalms (98/150) → |