Revelation (1/22) → |
1. | ಯೇಸು ಕ್ರಿಸ್ತನ ಪ್ರಕಟನೆಯು ಆತನು ಬೇಗನೆ ಸಂಭವಿಸತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ದೇವರು ಈ ಪ್ರಕಟನೆ ಯನ್ನು ಆತನಿಗೆ ಕೊಟ್ಟನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಅದನ್ನು ತನ್ನ ಸೇವಕನಾದ ಯೋಹಾನನಿಗೆ ಸೂಚಿಸಿದ |
2. | ಯೋಹಾನನು ದೇವರ ವಾಕ್ಯದ ವಿಷಯವಾಗಿಯೂ ಯೇಸು ಕ್ರಿಸ್ತನ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲ ತಿಳಿಸುವವನಾಗಿ ಸಾಕ್ಷಿಕೊಟ್ಟನು. |
3. | ಇದನ್ನು ಓದುವಂಥ ವನೂ ಈ ಪ್ರವಾದನಾ ವಾಕ್ಯಗಳನ್ನು ಕೇಳುವಂಥವರೂ ಅದರಲ್ಲಿ ಬರೆದಿರುವಂಥವುಗಳನ್ನು ಕಾಪಾಡುವಂಥ ವರೂ ಧನ್ಯರು. ಯಾಕಂದರೆ ಕಾಲವು ಸವಿಾಪವಾಗಿದೆ. |
4. | ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ |
5. | ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು |
6. | ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್. |
7. | ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್. |
8. | ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ. |
9. | ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು. |
10. | ನಾನು ಕರ್ತನ ದಿನದಲ್ಲಿ ಆತ್ಮನ ವಶದಲ್ಲಿದ್ದಾಗ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿ ರುವ ಮಹಾಶಬ್ದವನ್ನು ಕೇಳಿದೆನು. |
11. | ಅದು--ನಾನೇ ಅಲ್ಫಾವೂ ಓಮೆಗವೂ ಮೊದಲನೆಯವನೂ ಕಡೆ ಯವನೂ ಆಗಿದ್ದೇನೆ; ನೀನು ನೋಡುವದನ್ನೂ ಪುಸ್ತಕದಲ್ಲಿ ಬರೆದು ಆಸ್ಯದಲ್ಲಿನ ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬ ಈ ಏಳು ಸಭೆಗಳಿಗೆ ಅದನ್ನು ಕಳುಹಿಸಬೇಕೆಂದು ಹೇಳಿತು. |
12. | ನನ್ನ ಸಂಗಡ ಮಾತ ನಾಡುತ್ತಿದ್ದ ಶಬ್ದವನ್ನು ನೋಡುವದಕ್ಕಾಗಿ ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಚಿನ್ನದ ಏಳು ದೀಪಸ್ತಂಭ ಗಳನ್ನು ನಾನು ನೋಡಿದೆನು. |
13. | ಆ ಏಳು ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತಿದ್ದಾತನನ್ನು ಕಂಡೆನು. ಆತನು ಪಾದದವರೆಗೆ ಇರುವ ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು. |
14. | ಆತನ ತಲೆ ಮತ್ತು ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಉರಿಯಂತೆ ಇದ್ದವು. |
15. | ಆತನ ಪಾದಗಳು ಕುಲುಮೆ ಯಲ್ಲಿ ಕಾಯಿಸಿದ ಶುದ್ಧವಾದ ತಾಮ್ರದಂತೆಯೂ ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು. |
16. | ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು. |
17. | ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ. |
18. | ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ. |
19. | ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವು ಗಳನ್ನೂ ಇನ್ನು ಮುಂದೆ ಆಗಬೇಕಾದವುಗಳನ್ನೂ ಬರೆ. |
20. | ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು. |
Revelation (1/22) → |