← Revelation (16/22) → |
1. | ಆಗ ಆಲಯದಿಂದ ಬಂದ ಮಹಾಶಬ್ದ ವನ್ನು ಕೇಳಿದೆನು. ಅದು ಆ ಏಳು ಮಂದಿ ದೂತರಿಗೆ--ನೀವು ಹೋಗಿ ಆ ಪಾತ್ರೆಗಳ ಲ್ಲಿರುವ ದೇವರ ರೌದ್ರವನ್ನು ಭೂಮಿಯ ಮೇಲೆ ಹೊಯ್ಯಿರಿ ಎಂದು ಹೇಳಿತು. |
2. | ಆಗ ಮೊದಲನೆಯವನು ಹೊರಟು ತನ್ನ ಪಾತ್ರೆ ಯಲ್ಲಿದ್ದದ್ದನ್ನು ಭೂಮಿಯ ಮೇಲೆ ಹೊಯಿದನು; ಆಗ ಮೃಗದ ಗುರುತನ್ನು ಹೊಂದಿ ಅದರ ವಿಗ್ರಹಕ್ಕೆ ಆರಾಧನೆ ಮಾಡಿದ ಮನುಷ್ಯರ ಮೇಲೆ ಕೊಳೆಯುವ ಘೋರವಾದ ಹುಣ್ಣು ಎದ್ದಿತು. |
3. | ಎರಡನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸಮುದ್ರದ ಮೇಲೆ ಹೊಯಿದಾಗ ಅದು ಸತ್ತವನ ರಕ್ತದ ಹಾಗಾಯಿತು; ಸಮುದ್ರದಲ್ಲಿ ಬದುಕುವ ಪ್ರತಿಯೊಂದು ಪ್ರಾಣಿಯು ಸತ್ತಿತು. |
4. | ಮೂರನೆಯ ದೂತನು ತನ್ನ ಪಾತ್ರೆಯಲ್ಲಿ ದ್ದದ್ದನ್ನು ನದಿಗಳ ಮೇಲೆಯೂ ನೀರಿನ ಬುಗ್ಗೆಗಳ ಮೇಲೆಯೂ ಹೊಯಿದನು; ಅವುಗಳ ನೀರು ರಕ್ತವಾಯಿತು. |
5. | ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ. |
6. | ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು. |
7. | ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು. |
8. | ನಾಲ್ಕನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸೂರ್ಯನ ಮೇಲೆ ಹೊಯಿದನು. ಆಗ ಸೂರ್ಯ ನಿಗೆ ಬೆಂಕಿಯಿಂದ ಮನುಷ್ಯರನ್ನು ಕಂದಿಸುವ ಶಕ್ತಿಯು ಕೊಡಲ್ಪಟ್ಟಿತು. |
9. | ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು. |
10. | ಐದನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೃಗದ ಆಸನದ ಮೇಲೆ ಹೊಯ್ಯಲು ಅದರ ರಾಜ್ಯವು ತುಂಬಾ ಕತ್ತಲಾಯಿತು; ಜನರು ತಮಗಾದ ನೋವಿನ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು |
11. | ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು. |
12. | ಆರನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಹೊಯ್ಯಲು ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಗುವಂತೆ ಅದರ ನೀರು ಬತ್ತಿ ಹೋಯಿತು. |
13. | ಘಟಸರ್ಪದ ಬಾಯಿಂದಲೂ ಮೃಗದ ಬಾಯಿಂ ದಲೂ ಸುಳ್ಳು ಪ್ರವಾದಿಯ ಬಾಯಿಂದಲೂ ಕಪ್ಪೆಗಳಂ ತಿದ್ದ ಮೂರು ಅಶುದ್ಧಾತ್ಮಗಳು ಹೊರಗೆ ಬರುವದನ್ನು ನಾನು ಕಂಡೆನು. |
14. | ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು. |
15. | ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು. |
16. | ಅವನು ಅವರನ್ನು ಇಬ್ರಿಯ ಭಾಷೆಯಲ್ಲಿ ಹರ್ಮಗೆದೋನ್ ಎಂದು ಕರೆಯಲ್ಪಟ್ಟ ಸ್ಥಳಕ್ಕೆ ಕೂಡಿಸುವನು. |
17. | ಏಳನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದಲ್ಲಿ ಹೊಯ್ಯಲು ಪರಲೋಕದಲ್ಲಿದ್ದ ಆಲಯದೊಳಗಿಂದಲೂ ಸಿಂಹಾಸನದಿಂದಲೂ ಮಹಾಶಬ್ದವು ಬಂದು--ಮುಗಿಯಿತು ಎಂದು ಹೇಳಿತು. |
18. | ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವುಂಟಾಯಿತು; ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ಬಲವಾದ ಮತ್ತು ದೊಡ್ಡ ದಾದ ಭೂಕಂಪವಾಗಿರಲಿಲ್ಲ. |
19. | ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು. |
20. | ಆಗ ದ್ವೀಪಗಳೆಲ್ಲಾ ಓಡಿಹೋದವು; ಬೆಟ್ಟಗಳು ಸಿಕ್ಕದೆ ಹೋದವು. |
21. | ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು. |
← Revelation (16/22) → |