← Revelation (17/22) → |
1. | ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. |
2. | ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು. |
3. | ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು. |
4. | ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು |
5. | ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು. |
6. | ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ |
7. | ಆಗ ಆ ದೂತನು ನನಗೆ--ನೀನೇಕೆ ಆಶ್ಚರ್ಯಪಟ್ಟೆ? ಆ ಸ್ತ್ರೀಯ ವಿಷಯವಾಗಿಯೂ ಅವಳನ್ನು ಹೊತ್ತುಕೊಂಡಿದ್ದ ಏಳು ತಲೆಗಳು ಮತ್ತು ಹತ್ತು ಕೊಂಬುಗಳುಳ್ಳ ಮೃಗದ ವಿಷಯವಾಗಿಯೂ ಇರುವ ಮರ್ಮವನ್ನು ನಾನು ನಿನಗೆ ತಿಳಿಸುತ್ತೇನೆ. |
8. | ನೀನು ಕಂಡ ಈ ಮೃಗವು ಮೊದಲು ಇತ್ತು. ಈಗ ಇಲ್ಲ, ಅದು ತಳವಿಲ್ಲದ ತಗ್ಗಿನಿಂದ ಏರಿ ಬಂದು ನಾಶನಕ್ಕೆ ಹೋಗುವದು. ಭೂಮಿಯಲ್ಲಿ ವಾಸಿಸುವವರೊಳಗೆ ಯಾರಾರ ಹೆಸರು ಗಳು ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಜೀವಗ್ರಂಥ ದಲ್ಲಿ ಬರೆದಿರುವದಿಲ್ಲವೋ ಅವರು ಮೊದಲು ಇದ್ದು ಈಗ ಇಲ್ಲದ ಇನ್ನು |
9. | ಇದರಲ್ಲಿ ಜ್ಞಾನವುಳ್ಳ ಮನಸ್ಸು ಇರುತ್ತದೆ. ಆ ಏಳು ತಲೆಗಳು ಆ ಸ್ತ್ರೀ ಕೂತು ಕೊಂಡಿರುವ ಏಳು ಬೆಟ್ಟಗಳೇ. |
10. | ಇದಲ್ಲದೆ ಅವು ಏಳು ಮಂದಿ ರಾಜರು; ಐದು ಮಂದಿ ಬಿದ್ದು ಹೋಗಿದ್ದಾರೆ. ಒಬ್ಬನು ಇದ್ದಾನೆ, ಮತ್ತೊಬ್ಬನು ಇನ್ನೂ ಬಂದಿಲ್ಲ. ಬಂದ ಮೇಲೆ ಅವನು ಸ್ವಲ್ಪಕಾಲ ಇರಲೇ ಬೇಕು. |
11. | ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯವನು; ಅವನು ಆ ಏಳು ಮಂದಿಗೆ ಸೇರಿದವನಾಗಿದ್ದು ನಾಶನಕ್ಕೆ ಹೋಗುತ್ತಾನೆ. |
12. | ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ. |
13. | ಅವರು ಒಂದೇ ಮನಸ್ಸುಳ್ಳವರಾಗಿದ್ದು ತಮ್ಮ ಅಧಿಕಾರವನ್ನೂ ಶಕ್ತಿಯನ್ನೂ ಮೃಗಕ್ಕೆ ಕೊಡುತ್ತಾರೆ. |
14. | ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ. |
15. | ಅವನು ನನಗೆ--ನೀನು ಕಂಡ ಆ ಜಾರಸ್ತ್ರೀಯು ಕೂತುಕೊಂಡಿರುವ ನೀರುಗಳು ಅಂದರೆ ಪ್ರಜೆಗಳೂ ಸಮೂಹಗಳೂ ಜನಾಂಗಗಳೂ ಭಾಷೆಗಳೂ ಆಗಿವೆ. |
16. | ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು. |
17. | ಯಾಕಂದರೆ ಅವರು ದೇವರ ಚಿತ್ತವನ್ನು ನೆರವೇರಿಸುವದಕ್ಕೆ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವಂತೆ ದೇವರು ತನ್ನ ವಾಕ್ಯಗಳು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರೇಪಿಸಿದನು. |
18. | ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು. |
← Revelation (17/22) → |