← Revelation (18/22) → |
1. | ಇವುಗಳಾದ ಮೇಲೆ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೂತನು ಪರಲೋಕದಿಂದ ಇಳಿಯುವದನ್ನು ಕಂಡೆನು; ಅವನ ಪ್ರಭಾವದಿಂದ ಭೂಮಿಗೆ ಪ್ರಕಾಶವುಂಟಾಯಿತು. |
2. | ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು. |
3. | ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು. |
4. | ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು. |
5. | ಅವಳ ಪಾಪಗಳು ಆಕಾಶದ ವರೆಗೂ ಮುಟ್ಟಿವೆ. ದೇವರು ಅವಳ ದ್ರೋಹಗಳನ್ನು ಜ್ಞಾಪಿಸಿಕೊಂಡಿದ್ದಾನೆ. |
6. | ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ. |
7. | ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು |
8. | ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ. |
9. | ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು. |
10. | ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು. |
11. | ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ |
12. | ಚಿನ್ನ, ಬೆಳ್ಳಿ, ಅಮೂಲ್ಯವಾದ ಕಲ್ಲುಗಳು, ಮುತ್ತುಗಳು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ದಂತದ ಪಾತ್ರೆಗಳು, ಬಹು ಅಮೂಲ್ಯವಾದ ಮರ, ಹಿತ್ತಾಳೆ, ಸಕಲ ವಿಧವಾದ ಪಾತ್ರೆಗಳು, ಕಬ್ಬಿಣ, ಚಂದ್ರಕಾಂತ, |
13. | ಲವಂಗ, ಚೆಕ್ಕೆ, ಧೂಪ, ಸುಗಂಧ ತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದಹಿಟ್ಟು, ಗೋಧಿ, ದನಗಳು, ಕುರಿ ಗಳು, ಕುದುರೆಗಳು, ರಥಗಳು, ಗುಲಾಮರು, ಮನುಷ್ಯರ ಪ್ರಾಣಗಳು ಇವೇ ಮೊದಲಾದವುಗಳನ್ನು ಯಾರೂ ಎಂದೂ ಕೊಂಡುಕೊಳ್ಳುವರಿಲ್ಲ ಎಂದು ದುಃಖಿಸುವರು. |
14. | ನಿನ್ನ ಜೀವವು ಅಪೇಕ್ಷಿಸಿದ ಹಣ್ಣು ಗಳು ನಿನ್ನನ್ನು ಬಿಟ್ಟು ಹೋದವು; ಸೊಗಸಾಗಿಯೂ ಶೋಭಾಯಮಾನವಾಗಿಯೂ ಇರುವವುಗಳೆಲ್ಲವೂ ನಿನ್ನನ್ನು ಬಿಟ್ಟು ಹೋದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವದೇ ಇಲ್ಲ. |
15. | ಅವಳಿಂದ ಐಶ್ವರ್ಯವಂತ ರಾದ ಈ ಸರಕುಗಳ ವರ್ತಕರು ಅವಳ ಯಾತನೆಗೆ ಭಯಪಟ್ಟು ದೂರದಲ್ಲಿ ನಿಂತು ಅಳುತ್ತಾ ಗೋಳಾ ಡುತ್ತಾ-- |
16. | ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ, |
17. | ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು |
18. | ಅವಳ ದಹನದ ಹೊಗೆಯನ್ನು ನೋಡುತ್ತಾ--ಈ ಮಹಾ ಪಟ್ಟಣಕ್ಕೆ ಸಮಾನವಾದ ಪಟ್ಟಣವು ಯಾವದು ಎಂದು ಕೂಗಿ ಹೇಳಿದರು. |
19. | ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು |
20. | ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು. |
21. | ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ. |
22. | ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ. |
23. | ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು. |
24. | ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು. |
← Revelation (18/22) → |