← Romans (10/16) → |
1. | ಸಹೊದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬದೇ ನನ್ನ ಮನೋಭಿ ಲಾಷೆಯೂ ದೇವರಿಗೆ ನಾನು ಮಾಡುವ ಪ್ರಾರ್ಥನೆ ಯೂ ಆಗಿದೆ; |
2. | ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ. |
3. | ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ. |
4. | ನಂಬುವ ಪ್ರತಿಯೊಬ್ಬನು ನೀತಿವಂತನಾಗುವಂತೆ ಕ್ರಿಸ್ತನು ನ್ಯಾಯಪ್ರಮಾಣದ ಅಂತ್ಯವಾಗಿದ್ದಾನೆ. |
5. | ಇದಲ್ಲದೆ-- ನ್ಯಾಯಪ್ರಮಾಣವು ಹೇಳುವವುಗಳನ್ನು ಮಾಡುವವನು ಅವುಗಳಿಂದಲೇ ಜೀವಿಸುವನು ಎಂದು ಮೋಶೆಯು ಅದರ ನೀತಿಯ ವಿಷಯವಾಗಿ ವಿವರಿಸುತ್ತಾನೆ. |
6. | ಆದರೆ ನಂಬಿಕೆ ಯಿಂದುಂಟಾಗುವ ನೀತಿಯು ಹೇಳುವದೇನಂದರೆ, (ಮೇಲಿನಿಂದ ಕ್ರಿಸ್ತನನ್ನು ತರುವಂತೆ) ಪರಲೋಕಕ್ಕೆ ಏರಿ ಹೋಗುವವನು ಯಾರು? |
7. | ಇಲ್ಲವೆ (ಸತ್ತವರೊ ಳಗಿಂದ ಕ್ರಿಸ್ತನನ್ನು ಮೇಲಕ್ಕೆ ತರುವದಕ್ಕಾಗಿ) ಅಗಾಧಕ್ಕೆ ಇಳಿದು ಹೋಗುವವನು ಯಾರು ಎಂದು ನಿನ್ನ ಹೃದಯ ದಲ್ಲಿ ಅಂದುಕೊಳ್ಳಬೇಡ. |
8. | ಆದರೆ ಅದು ಏನು ಹೇಳುತ್ತದೆ? ವಾಕ್ಯವು ನಿನ್ನ ಸವಿಾಪದಲ್ಲಿಯೂ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಇದೆ ಎಂದು ಅನ್ನುತ್ತದೆ; ಅದೇನಂದರೆ--ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ. |
9. | ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ. |
10. | ಹೃದಯದಿಂದ ನಂಬುವದರ ಮೂಲಕ ನೀತಿಯು ದೊರೆಯುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ. |
11. | ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ. |
12. | ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ. |
13. | ಕರ್ತನ ನಾಮದಲ್ಲಿ ಬೇಡಿಕೊಳ್ಳುವ ಯಾರಿಗಾದರೂ ರಕ್ಷಣೆ ಯಾಗುವದು. |
14. | ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ? |
15. | ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ. |
16. | ಆದರೆ ಅವರೆಲ್ಲರೂ ಸುವಾರ್ತೆಗೆ ವಿಧೇಯರಾಗಲಿಲ್ಲ. ಆದದರಿಂದ ಯೆಶಾಯನು--ಕರ್ತನೇ, ನಮ್ಮ ವಾರ್ತೆಯನ್ನು ಯಾರು ನಂಬಿದರು ಅನ್ನುತ್ತಾನೆ. |
17. | ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ. |
18. | ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು. |
19. | ಆದರೆ--ಇಸ್ರಾಯೇಲ್ಯರು ತಿಳುಕೊಳ್ಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಈ ವಿಷಯದಲ್ಲಿ--ನನ್ನ ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಹುರುಡು ಹುಟ್ಟಿಸುವೆನು; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು ಎಂದು ಮೊದಲು ಮೋಶೆಯು ಹೇಳುತ್ತಾನೆ. |
20. | ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ--ನನ್ನನ್ನು ಹುಡುಕದವರಿಗೆ ಸಿಕ್ಕಿದೆನು, ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು ಎಂದು ಹೇಳುತ್ತಾನೆ. |
21. | ಆದರೆ ಅವನು ಇಸ್ರಾಯೇಲ್ಯರ ವಿಷಯವಾಗಿ--ನನಗೆ ಅವಿಧೇಯ ರಾಗಿ ಎದುರು ಮಾತನಾಡುವ ಜನರ ಕಡೆಗೆ ನಾನು ದಿನವೆಲ್ಲಾ ಕೈ ಚಾಚಿದೆನು ಎಂದು ಹೇಳುತ್ತಾನೆ. |
← Romans (10/16) → |