← Romans (12/16) → |
1. | ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ. |
2. | ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ. |
3. | ನಿಮ್ಮೊಳಗೆ ಪ್ರತಿಯೊಬ್ಬನು ತನ್ನ ಯೋಗ್ಯತೆಗೆ ವಿಾರಿ ಭಾವಿಸಿಕೊಳ್ಳದೆ ದೇವರು ಪ್ರತಿಯೊಬ್ಬನಿಗೆ ಅವನವನ ವಿಶ್ವಾಸದ ಪ್ರಮಾಣಕ್ಕನುಸಾರವಾಗಿ ಕೊಟ್ಟಂತೆ ತನ್ನನ್ನು ಮಿತವಾಗಿ ತಿಳಿದುಕೊಳ್ಳಬೇಕೆಂದು ನನಗೆ ಕೊಡಲ್ಪಟ್ಟ ಕೃಪೆಗನುಸಾರವಾಗಿ ನಾನು ಹೇಳುತ್ತೇನೆ. |
4. | ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸವಿರುವದಿಲ್ಲವೋ |
5. | ಹಾಗೆಯೇ ಅನೇಕರಾದ ನಾವು ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬರಿ ಗೊಬ್ಬರು ಪರಸ್ಪರ ಅಂಗಗಳಾಗಿದ್ದೇವೆ. |
6. | ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ. |
7. | ಇಲ್ಲವೆ ಸೇವೆಯಾಗಿದ್ದರೆ ನಮ್ಮ ಸೇವೆಯಲ್ಲಿ ನಿರತರಾಗಿರೋಣ. ಬೋಧಿಸುವವನು ಬೋಧಿಸುವದರಲ್ಲಿ ನಿರತನಾಗಿರಲಿ. |
8. | ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ. |
9. | ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ. |
10. | ಸಹೋದರ ಪ್ರೀತಿಯಿಂದ ಒಬ್ಬರಿಗೊಬ್ಬರು ಕರುಣಾ ವಾತ್ಸಲ್ಯವುಳ್ಳ ವರಾಗಿರ್ರಿ; ಸನ್ಮಾನಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರ್ರಿ. |
11. | ಸೇವೆಯಲ್ಲಿ ಅಲಸ್ಯವಾಗಿರಬೇಡಿರಿ, ಆತ್ಮದಲ್ಲಿ ಆಸಕ್ತರಾಗಿದ್ದು ಕರ್ತನನ್ನು ಸೇವಿಸುವವ ರಾಗಿರ್ರಿ. |
12. | ನಿರೀಕ್ಷೆಯಲ್ಲಿ ಸಂತೋಷಿಸುತ್ತಾ ಸಂಕಟದಲ್ಲಿ ತಾಳ್ಮೆಯುಳ್ಳವರಾಗಿದ್ದು ಆಸಕ್ತಿಯುಳ್ಳವರಾಗಿ ಪ್ರಾರ್ಥನೆ ಯಲ್ಲಿ ನಿರತರಾಗಿರ್ರಿ. |
13. | ಪರಿಶುದ್ಧರ ಕೊರತೆಯ ಪ್ರಕಾರ ಹಂಚಿರಿ; ಅತಿಥಿಸತ್ಕಾರವನ್ನು ಮಾಡಿರಿ. |
14. | ನಿಮ್ಮನ್ನು ಹಿಂಸಿಸುವವರನ್ನು ಆಶೀರ್ವದಿಸಿರಿ; ಶಪಿಸದೆ ಆಶೀ ರ್ವದಿಸಿರಿ. |
15. | ಸಂತೋಷಪಡುವವರ ಸಂಗಡ ಸಂತೋಷಪಡಿರಿ; ಅಳುವವರ ಸಂಗಡ ಅಳಿರಿ. |
16. | ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ. |
17. | ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ. |
18. | ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ. |
19. | ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ. |
20. | ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು. |
21. | ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು. |
← Romans (12/16) → |