← Romans (16/16) |
1. | ನಾನು ನಿಮಗೆ ಒಪ್ಪಿಸುವ ನಮ್ಮ ಸಹೋದರಿಯಾದ ಫೊಯಿಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು ಕೆಂಕ್ರೆಯ ಲ್ಲಿರುವ ಸಭೆಯ ಸೇವಕಳಾಗಿದ್ದಾಳೆ. |
2. | ನೀವು ಆಕೆಯನ್ನು ಪರಿಶುದ್ಧರಿಗೆ ತಕ್ಕಂತೆ ಕರ್ತನಲ್ಲಿ ಅಂಗೀಕರಿಸಿ ಆಕೆಯ ಕೆಲಸದಲ್ಲಿ ಆಕೆಗೆ ಅವಶ್ಯವಾದ ಸಹಾಯವನ್ನು ಮಾಡಿರಿ; ಆಕೆಯು ನನಗೂ ಅನೇಕರಿಗೂ ಸಹಾಯ ಮಾಡಿದವಳಾಗಿದ್ದಾಳೆ. |
3. | ಕ್ರಿಸ್ತ ಯೇಸುವಿನಲ್ಲಿ ನನ್ನ ಸಹಾಯಕರಾದ ಪ್ರಿಸ್ಕಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ. |
4. | ಅವರು ನನ್ನ ಪ್ರಾಣಕ್ಕಾಗಿ ತಮ್ಮ ಕುತ್ತಿಗೆಗಳನ್ನೇ ಒಡ್ಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರನ್ನು ವಂದಿಸುತ್ತಾರೆ. |
5. | ಅದರಂತೆಯೇ ಅವರ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ; ಅಖಾಯದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾದ ಎಪೈನೆತನಿಗೂ ವಂದನೆ. |
6. | ನಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ. |
7. | ನನಗಿಂತ ಮೊದಲು ಕ್ರಿಸ್ತ ನಲ್ಲಿದ್ದು ಅಪೊಸ್ತಲರಲ್ಲಿ ಪ್ರಖ್ಯಾತಿಗೊಂಡ ನನ್ನ ಬಂಧುಗಳೂ ನನ್ನ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ ಯೂನ್ಯನಿಗೂ ವಂದನೆಗಳು. |
8. | ಕರ್ತನಲ್ಲಿ ನನ್ನ ಪ್ರಿಯನಾಗಿರುವ ಅಂಪ್ಲಿಯಾತನಿಗೆ ವಂದನೆ. |
9. | ಕ್ರಿಸ್ತನಲ್ಲಿ ನಮ್ಮ ಸಹಾಯಕನಾದ ಉರ್ಬಾನನಿಗೂ ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು. |
10. | ಕ್ರಿಸ್ತನಲ್ಲಿ ಮೆಚ್ಚಿಕೆ ಹೊಂದಿದ ಅಪೆಲ್ಲ ನಿಗೆ ವಂದನೆ; ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು. |
11. | ನನ್ನ ಬಂಧುವಾದ ಹೆರೊಡಿಯೋ ನನಿಗೆ ವಂದನೆ. ಕರ್ತನಲ್ಲಿರುವ ನಾರ್ಕಿಸ್ಸನ ಮನೆ ಯವರಿಗೆ ವಂದನೆಗಳು. |
12. | ಕರ್ತನಲ್ಲಿ ಪ್ರಯಾಸಪ ಡುವ ತ್ರುಫೈನಳಿಗೂ ತ್ರುಫೋಸಳಿಗೂ ವಂದನೆಗಳು. ಕರ್ತನಲ್ಲಿ ಹೆಚ್ಚಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀ ಸಳಿಗೆ ವಂದನೆ. |
13. | ಕರ್ತನಲ್ಲಿ ಆರಿಸಲ್ಪಟ್ಟ ರೂಫನಿಗೂ ನನಗೆ ತಾಯಿಯಂತಿರುವ ಅವನ ತಾಯಿಗೂ ವಂದನೆ ಗಳು. |
14. | ಅಸುಂಕ್ರಿತನಿಗೂ ಪ್ಲೆಗೋನನಿಗೂ ಹೆರ್ಮೇ ಯನಿಗೂ ಪತ್ರೋಬನಿಗೂ ಹೆರ್ಮಾನನಿಗೂ ಅವ ರೊಂದಿಗಿರುವ ಸಹೋದರರಿಗೂ ವಂದನೆಗಳು. |
15. | ಫಿಲೊಲೊಗನಿಗೂ ಯೂಲ್ಯಳಿಗೂ ನೇರ್ಯನಿಗೂ ಅವನ ಸಹೋದರರಿಗೂ ಒಲುಂಪನಿಗೂ ಅವರೊಂದಿ ಗಿರುವ ಪರಿಶುದ್ಧರೆಲ್ಲರಿಗೂ ವಂದನೆಗಳು. |
16. | ಪವಿತ್ರ ವಾದ ಮುದ್ದಿನಿಂದ ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳು ನಿಮ್ಮನ್ನು ವಂದಿಸುತ್ತವೆ. |
17. | ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ. |
18. | ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ. |
19. | ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾಗಿದ್ದದರಿಂದ ನಿಮ್ಮ ವಿಷಯದಲ್ಲಿ ನಾನು ಆನಂದಪಡುತ್ತೇನೆ. ಆದಾಗ್ಯೂ ನೀವು ಒಳ್ಳೇತನದ ವಿಷಯದಲ್ಲಿ ಜಾಣರೂ ಕೆಟ್ಟತನದ ವಿಷಯದಲ್ಲಿ ಕಳಂಕವಿಲ್ಲದವರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ. |
20. | ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್. |
21. | ನನ್ನ ಜೊತೆ ಕೆಲಸದವನಾದ ತಿಮೊಥೆಯನೂ ನನ್ನ ಬಂಧುಗಳಾದ ಲೂಕ್ಯನೂ ಯಾಸೋನನೂ ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ. |
22. | ಈ ಪತ್ರಿಕೆಯನ್ನು ಬರೆದ ತೆರ್ತ್ಯನೆಂಬ ನಾನು ನಿಮ್ಮನ್ನು ಕರ್ತನಲ್ಲಿ ವಂದಿಸುತ್ತೇನೆ. |
23. | ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ. |
24. | ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್. |
25. | ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ |
26. | ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ. |
27. | ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್. |
← Romans (16/16) |