Ruth (1/4) → |
1. | ನ್ಯಾಯಾಧಿಪತಿಗಳು ಆಳುತ್ತಿದ್ದ ಆ ದಿನಗಳಲ್ಲಿ ದೇಶದೊಳಗೆ ಬರ ಉಂಟಾ ಗಿದ್ದಾಗ ಆದದ್ದೇನಂದರೆ, ಯೆಹೂದದ ಬೇತ್ಲೆ ಹೇಮಿನವನಾದ ಒಬ್ಬ ಮನುಷ್ಯನು ತನ್ನ ಹೆಂಡ ತಿಯ ಮತ್ತು ತನ್ನ ಇಬ್ಬರು ಕುಮಾರರೊಂದಿಗೆ ಮೋವಾಬ್ ದೇಶದಲ್ಲಿ ವಾಸಮಾಡಬೇಕೆಂದು ಹೋದನು. |
2. | ಆ ಮನುಷ್ಯನ ಹೆಸರು ಎಲೀಮೆಲೆ ಕನು; ಅವನ ಹೆಂಡತಿಯ ಹೆಸರು ನೊವೊಮಿ; ಅವನ ಕುಮಾರ ರಲ್ಲಿ ಒಬ್ಬನ ಹೆಸರು ಮಹ್ಲೋ ನನು, ಮತ್ತೊಬ್ಬನ ಹೆಸರು ಕಿಲ್ಯೋನನು. ಇವರು ಎಫ್ರಾತ್ಯರಾದ ಯೆಹೂದದ ಬೇತ್ಲೆಹೇಮಿನವ ರಾಗಿದ್ದರು. ಇವರು ಮೋವಾಬ್ ದೇಶಕ್ಕೆ ಬಂದು, ಅಲ್ಲಿ ವಾಸವಾಗಿದ್ದರು. |
3. | ಆದರೆ ನೊವೊಮಿಯ ಗಂಡನಾದ ಎಲೀಮೆಲೆಕನು ಸತ್ತು ಹೋದನು; ಆಕೆಯೂ ಆಕೆಯ ಇಬ್ಬರು ಕುಮಾರರೂ ಉಳಿದರು. |
4. | ಇವರು ಒರ್ಫಾ ರೂತ್ ಎಂಬ ಹೆಸರುಗಳುಳ್ಳ ಮೋವಾಬ್ ದೇಶದ ಸ್ತ್ರೀಯರನ್ನು ತಮಗೆ ಹೆಂಡತಿ ಯರನ್ನಾಗಿ ತಕ್ಕೊಂಡು ಸುಮಾರು ಹತ್ತು ವರುಷ ಅಲ್ಲಿ ವಾಸವಾಗಿದ್ದರು. |
5. | ಮಹ್ಲೋನ ಕಿಲ್ಯೋನ ಇಬ್ಬರೂ ಸತ್ತುಹೋದರು. ಆ ಸ್ತ್ರೀಯು ತನ್ನ ಇಬ್ಬರು ಕುಮಾರರನ್ನೂ ತನ್ನ ಗಂಡನನ್ನೂ ಕಳೆದುಕೊಂಡು ಒಬ್ಬಳೇ ಉಳಿದಳು. |
6. | ಆದರೆ ಕರ್ತನು ತನ್ನ ಜನರಿಗೆ ರೊಟ್ಟಿಯನ್ನು ಕೊಡುವ ಹಾಗೆ ಅವರನ್ನು ದರ್ಶಿಸಿದನೆಂದು ಅವಳು ಮೋವಾಬ್ ದೇಶದಲ್ಲಿ ಕೇಳಿದ್ದರಿಂದ ಅವಳು ತನ್ನ ಸೊಸೆಯರ ಸಂಗಡ ಮೋವಾಬ್ ದೇಶದಿಂದ ಯೆಹೂದ ದೇಶಕ್ಕೆ ತಿರಿಗಿ ಹೋಗುವದಕ್ಕೋಸ್ಕರ ಪ್ರಯಾಣವಾಗಿ ತಾನು ಇದ್ದ ಸ್ಥಳವನ್ನು ಬಿಟ್ಟು ಹೊರ ಟಳು. |
7. | ಅವಳ ಇಬ್ಬರು ಸೊಸೆಯರು ಅವಳ ಸಂಗಡ ಹೊರಟು ಯೆಹೂದ ದೇಶಕ್ಕೆ ತಿರಿಗಿ ಹೋಗಬೇಕೆಂದು ಅವರು ಮಾರ್ಗದಲ್ಲಿ ನಡೆಯುವಾಗ |
8. | ನೊವೊಮಿಯು ತನ್ನ ಇಬ್ಬರು ಸೊಸೆಯರಿಗೆ ನೀವು ಇಬ್ಬರೂ ನಿಮ್ಮ ನಿಮ್ಮ ತಾಯಿಯ ಮನೆಗೆ ತಿರಿಗಿಹೋಗಿರಿ; ನೀವು ಸತ್ತವರಿಗೂ ನನಗೂ ಮಾಡಿದ ಹಾಗೆಯೇ ಕರ್ತನು ನಿಮಗೆ ಕೃಪೆಯಿಂದ ಮಾಡಲಿ. |
9. | ನೀವಿಬ್ಬರೂ ಮದುವೆ ಯಾಗಿ ನಿಮ್ಮ ಗಂಡನ ಮನೆಯಲ್ಲಿ ವಿಶ್ರಾಂತಿ ಹೊಂದು ವಂತೆ ಕರ್ತನು ನಿಮಗೆ ಮಾಡಲಿ ಎಂದು ಹೇಳಿ ಅವರಿಗೆ ಮುದ್ದಿಟ್ಟಳು. |
10. | ಆಗ ಅವರು ಗಟ್ಟಿಯಾಗಿ ಅತ್ತು ಆಕೆಗೆ ನಿಶ್ಚಯವಾಗಿಯೂ ನಿನ್ನ ಜನರ ಬಳಿಗೆ ನಿನ್ನ ಸಂಗಡ ತಿರಿಗಿ ಬರುತ್ತೇವೆ ಅಂದರು. |
11. | ಅದಕ್ಕೆ ನೊವೊಮಿಯು ನನ್ನ ಕುಮಾರ್ತೆಯರೇ, ನೀವು ಹಿಂತಿ ರುಗಿ ಹೋಗಿರಿ; ನನ್ನ ಸಂಗಡ ಯಾಕೆ ಬರುತ್ತೀರಿ? ನಿಮಗೆ ಗಂಡಂದಿರಾಗುವ ಹಾಗೆ ಇನ್ನು ನನ್ನ ಗರ್ಭದಲ್ಲಿ ನನಗೆ ಕುಮಾರರು ಇಲ್ಲವಲ್ಲಾ! |
12. | ನನ್ನ ಕುಮಾರ್ತೆ ಯರೇ, ನೀವು ಹಿಂದಕ್ಕೆ ಹೋಗಿರಿ; ನಾನು ಒಬ್ಬ ಗಂಡನಿಗೆ ಹೆಂಡತಿಯಾಗುವದಕ್ಕೆ ಪ್ರಾಯಹೋದ ವಳು. ಒಂದು ವೇಳೆ ನಿರೀಕ್ಷೆ ನನಗೆ ಉಂಟೆಂದು ಹೇಳಿ ನಾನು ಈ ಹೊತ್ತಿನ ರಾತ್ರಿಯಲ್ಲಿ ಒಬ್ಬ ಗಂಡನಿಗೆ ಸೇರಿ ನಾನು ಮಕ್ಕಳನ್ನು ಹೆತ್ತರೂ |
13. | ಅವರು ದೊಡ್ಡವ ರಾಗುವ ವರೆಗೂ ಕಾದುಕೊಳ್ಳುವಿರೋ? ಗಂಡನಿಲ್ಲದೆ ನೀವು ತಾಳಿಕೊಂಡಿರುವಿರೋ? ಬೇಡ, ನನ್ನ ಕುಮಾ ರ್ತೆಯರೇ; ಕರ್ತನ ಹಸ್ತವು ನನಗೆ ವಿರೋಧವಾಗಿ ರುವದರಿಂದ ನಿಮಗಿಂತ ನನಗೆ ಬಹು ದುಃಖವಾಗಿದೆ ಅಂದಳು. |
14. | ಆಗ ಅವರು ತಿರಿಗಿ ಗಟ್ಟಿಯಾದ ಸ್ವರದಿಂದ ಅತ್ತರು. ಒರ್ಫಳು ತನ್ನ ಅತ್ತೆಯನ್ನು ಮುದ್ದಿಟ್ಟಳು: ಆದರೆ ರೂತಳು ಆಕೆಯನ್ನು ಅಂಟಿಕೊಂಡಳು. |
15. | ಆಗ ಆಕೆಯು ಇಗೋ, ನಿನ್ನ ಓರಗಿತ್ತಿಯು ತನ್ನ ಜನರ ಬಳಿಗೂ ತನ್ನ ದೇವರುಗಳ ಬಳಿಗೂ ತಿರಿಗಿ ಹೋದಳು; ನೀನೂ ನಿನ್ನ ಓರಗಿತ್ತಿಯ ಹಿಂದೆ ಹೋಗು ಅಂದಳು. |
16. | ಅದಕ್ಕೆ ರೂತಳು ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ನೀನು ಎಲ್ಲಿ ಹೋಗುವಿಯೋ ನಾನು ಅಲ್ಲಿಗೆ ಬರುವೆನು; ನೀನು ಎಲ್ಲಿ ಇಳುಕೊಳ್ಳುವಿಯೋ ನಾನು ಅಲ್ಲಿ ಇಳು ಕೊಳ್ಳುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು. |
17. | ನೀನು ಎಲ್ಲಿ ಸಾಯುತ್ತೀಯೋ ಅಲ್ಲಿಯೇ ನಾನು ಸತ್ತುಹೂಣಲ್ಪಡುವೆನು. ಮರಣವು ಮಾತ್ರ ನಮ್ಮನ್ನು ಅಗಲಿಸದ ಹೊರತು ನಾನು ಅಗಲಿದರೆ ಕರ್ತನು ನನಗೆ ಬೇಕಾದದ್ದನ್ನು ಮಾಡಲಿ ಅಂದಳು. |
18. | ಆಕೆಯು ತನ್ನ ಸಂಗಡ ಬರಲು ದೃಢವಾದ ಮನಸ್ಸು ಮಾಡಿಕೊಂಡಿದ್ದಾಳೆಂದು ಕಂಡಾಗ ಅವಳ ಸಂಗಡ ಮಾತನಾಡದೆ ಇದ್ದಳು. |
19. | ಹಾಗೆಯೇ ಇಬ್ಬರೂ ಬೇತ್ಲೆಹೇಮಿನವರೆಗೂ ಹೋದರು. ಅವರು ಬೇತ್ಲೆಹೇಮಿನಲ್ಲಿ ಪ್ರವೇಶಿಸುವಾಗ ಆ ಪಟ್ಟಣವೆಲ್ಲಾ ಇವರಿಗೋಸ್ಕರ ಗದ್ದಲವಾಗಿ ಅವರು ಇವಳು ನೊವೊ ಮಿಯೋ? ಅಂದರು. |
20. | ಆಗ ಆಕೆಯು ಅವರಿಗೆ ನನ್ನನ್ನು ನೊವೊಮಿ ಎಂದು ಕರೆಯಬೇಡಿರಿ; ಮಾರಾ ಎಂದು ಕರೆಯಿರಿ; ಯಾಕಂದರೆ ಸರ್ವಶಕ್ತನು ನನ್ನನ್ನು ಬಹು ದುಃಖದಲ್ಲಿ ನಡಿಸಿದನು. |
21. | ನಾನು ಸಮೃದ್ಧಿ ಯಾಗಿ ಹೊರಟು ಹೋದೆನು; ಕರ್ತನು ನನ್ನನ್ನು ಏನೂ ಇಲ್ಲದೆ ತಿರಿಗಿ ಮನೆಗೆ ಬರಮಾಡಿದ್ದಾನೆ. ಕರ್ತನು ನನಗೆ ವಿರೋಧವಾಗಿ ಸಾಕ್ಷಿಕೊಟ್ಟು, ಸರ್ವಶಕ್ತನು ನನ್ನನ್ನು ಬಾಧಿಸಿದ್ದಾನೆ. ಆದದರಿಂದ ನೀವು ನನ್ನನ್ನು ನೊವೊಮಿ ಎಂದು ಕರೆಯುವದೇನು ಅಂದಳು. |
22. | ಹೀಗೆ ನೊವೊಮಿ ಮೋವಾಬ್ ದೇಶಸ್ಥಳಾದ ರೂತೆಂಬ ತನ್ನ ಸೊಸೆಯ ಸಂಗಡ ಮೋವಾಬ್ ದೇಶ ದಿಂದ ತಿರಿಗಿ ಬಂದಳು. ಇದಲ್ಲದೆ ಅವರು ಜವೆ ಗೋಧಿಯ ಸುಗ್ಗಿಯ ಕಾಲ ಪ್ರಾರಂಭಿಸಿದಾಗ ಬೇತ್ಲೆಹೇಮಿಗೆ ಬಂದರು. |
Ruth (1/4) → |