← Ruth (3/4) → |
1. | ಅವಳ ಅತ್ತೆಯಾದ ನೊವೊಮಿಯು ಅವಳಿಗೆ ನನ್ನ ಮಗಳೇ, ನಿನಗೆ ಒಳ್ಳೇದಾಗುವದಕ್ಕೋಸ್ಕರ ನಾನು ನಿನಗೆ ವಿಶ್ರಾಂತಿ ಯನ್ನು ಹುಡುಕಬೇಕಲ್ಲವೋ? |
2. | ಈಗ ನೀನು ಯಾರ ದಾಸಿಗಳ ಸಂಗಡ ಇದ್ದಿಯೋ ಆ ಬೋವಜನು ನಮ್ಮ ಸಂಬಂಧಿಕನಾಗಿದ್ದಾನಲ್ಲಾ? ಇಗೋ, ಅವನು ರಾತ್ರಿ ಯಲ್ಲಿ ಕಣದೊಳಗೆ ಜವೆಗೋಧಿಯನ್ನು ತೂರುವನು. |
3. | ನೀನು ಸ್ನಾನಮಾಡಿ ಎಣ್ಣೆ ಹಚ್ಚಿಕೊಂಡು ನಿನ್ನ ವಸ್ತ್ರಗಳನ್ನು ಧರಿಸಿಕೊಂಡು ಆ ಕಣಕ್ಕೆ ಹೋಗು. ಆದರೆ ಆ ಮನುಷ್ಯನು ಅನ್ನಪಾನಗಳನ್ನು ತೆಗೆದು ಕೊಳ್ಳುವ ವರೆಗೂ ಅವನಿಗೆ ನೀನು ತಿಳಿಯದಂತೆ ಮರೆಯಾಗಿರು. |
4. | ಅವನು ಮಲಗಿಕೊಂಡಾಗ ಅವನು ಮಲಗಿರುವ ಸ್ಥಳವನ್ನು ನೀನು ತಿಳುಕೊಂಡಿದ್ದು ಹೋಗಿ ಅವನ ಕಾಲುಗಳ ಮೇಲೆ ಹೊದ್ದಿದ್ದನ್ನು ತೆಗೆದು ಮಲಗಿಕೋ. ಆಗ ನೀನು ಮಾಡಬೇಕಾದದ್ದೇನೆಂದು ಅವನು ನಿನಗೆ ತಿಳಿಸುವನು ಅಂದಳು. |
5. | ಅದಕ್ಕೆ ಇವಳು ನೀನು ನನಗೆ ಹೇಳಿದ್ದೆಲ್ಲಾ ಮಾಡುವೆನು ಅಂದಳು. |
6. | ಅವಳು ಆ ಕಣಕ್ಕೆ ಹೋಗಿ ತನ್ನ ಅತ್ತೆ ತನಗೆ ಆಜ್ಞಾಪಿಸಿದ ಪ್ರಕಾರವೆಲ್ಲಾ ಮಾಡಿದಳು. |
7. | ಏನಂದರೆ, ಬೋವಜನು ತಿಂದು ಕುಡಿದು ಹೃದಯ ಸಂತೋಷ ವಾಗಿದ್ದು ಕಾಳಿನ ರಾಶಿಯ ಕೊನೆಯಲ್ಲಿ ಬಂದು ಮಲಗಿದನು. ಆಗ ಅವಳು ಮೆಲ್ಲಗೆ ಬಂದು ಅವನ ಕಾಲುಗಳ ಮೇಲೆ ಹೊದ್ದಿದ್ದನ್ನು ತೆಗೆದು ಮಲಗಿದಳು. |
8. | ಆದರೆ ಅರ್ಧ ರಾತ್ರಿಯಲ್ಲಿ ಆ ಮನುಷ್ಯನು ಹೆದರಿ ತಿರುಗಿಕೊಂಡಾಗ ಇಗೋ, ಒಬ್ಬ ಸ್ತ್ರೀ ತನ್ನ ಕಾಲುಗಳ ಬಳಿಯಲ್ಲಿ ಮಲಗಿದ್ದಳು. |
9. | ಆಗ ಅವನು ನೀನು ಯಾರು ಅಂದನು. ಅದಕ್ಕವಳು ನಾನು ನಿನ್ನ ದಾಸಿಯಾದ ರೂತಳು; ನೀನು ನಿನ್ನ ದಾಸಿಯ ಮೇಲೆ ನಿನ್ನ ಅಂಚನ್ನು ಹರಡು; ಯಾಕಂದರೆ ನೀನು ಹತ್ತಿರ ಸಂಬಂಧಿಕನು ಅಂದಳು. |
10. | ಅದಕ್ಕೆ ಅವನು ಹೇಳಿದ್ದೇನಂದರೆ ನನ್ನ ಮಗಳೇ, ಕರ್ತನಿಂದ ನಿನಗೆ ಆಶೀರ್ವಾದವಾಗಲಿ; ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ನೀನು ಹೋಗದೆ ಇದ್ದದರಿಂದ ಮೊದಲು ತೋರಿಸಿದ್ದಕ್ಕಿಂತ ಕಡೆಯಲ್ಲಿ ನೀನು ತೋರಿಸಿದದಯೆಯು ಹೆಚ್ಚಾಗಿದೆ. |
11. | ಈಗ ನನ್ನ ಮಗಳೇ, ನೀನು ಭಯಪಡಬೇಡ; ನಿನಗೆ ಬೇಕಾಗಿರುವದನ್ನು ನಿನಗೆ ಮಾಡುವೆನು; ಯಾಕಂದರೆ ನೀನು ಗುಣವತಿ ಯಾದ ಸ್ತ್ರೀ ಎಂದು ಪಟ್ಟಣದಲ್ಲಿರುವ ನನ್ನ ಜನರೆಲ್ಲರು ಬಲ್ಲರು. |
12. | ಈಗ ನಾನು ನಿನ್ನ ಸವಿಾಪ ಬಂಧು ವಾಗಿದ್ದೇನೆ ಎಂಬದು ನಿಜವೇ; ಆದರೆ ನನಗಿಂತಲೂ ಸವಿಾಪಸ್ಥನಾದ ಬಂಧುವು ಒಬ್ಬನಿದ್ದಾನೆ. |
13. | ಈ ರಾತ್ರಿಯಲ್ಲಿ ಇಲ್ಲಿರು; ನಾಳೆ ಬೆಳಿಗ್ಗೆ ಅವನು ನಿನಗೆ ಸಂಬಂಧಿಕನ ಕಾರ್ಯ ಮಾಡಿದರೆ ಒಳ್ಳೇದಾಯಿತು; ಅವನು ನಿನಗೆ ಸಂಬಂಧಿಕನ ಕಾರ್ಯಮಾಡಲು ಮನಸ್ಸಿಲ್ಲದೆ ಇದ್ದರೆ ಕರ್ತನ ಜೀವದಾಣೆ--ನಾನೇ ನಿನಗೆ ಸಂಬಂಧಿಕನ ಕಾರ್ಯ ಮಾಡುತ್ತೇನೆ. ಉದಯ ಕಾಲದ ವರೆಗೂ ಮಲಗಿರು ಅಂದನು. |
14. | ಅವಳು ಹಾಗೆಯೇ ಉದಯ ಕಾಲದ ವರೆಗೂ ಅವನ ಪಾದ ಗಳ ಬಳಿಯಲ್ಲಿ ಮಲಗಿದ್ದು ಒಬ್ಬನಿಗೂ ಗೊತ್ತಾಗ ಬಾರದೆಂದು ಇನ್ನೂ ಕತ್ತಲಿರುವಾಗಲೇ ಎದ್ದಳು. ಅವನು ಒಬ್ಬ ಹೆಂಗಸು ಕಣದಲ್ಲಿ ಬಂದಳೆಂದು ಯಾರಿಗೂ ತಿಳಿಯಲ್ಪಡದಿರಲಿ ಅಂದನು. |
15. | ಇದಲ್ಲದೆ ಅವನು ನೀನು ಹೊದ್ದುಕೊಂಡಿರುವ ವಸ್ತ್ರವನ್ನು ತಂದು ಹಿಡಿ ಅಂದನು. ಅವಳು ಅದನ್ನು ಹಿಡಿದಾಗ ಅವನು ಅದ ರಲ್ಲಿ ಆರು ಸೊಲಿಗೆ ಜವೆಗೋಧಿಯನ್ನು ಅಳೆದು ಹಾಕಿ ಆಕೆಯ ಮೇಲೆ ಹೊರಿಸಿದನು. ಆಗ ಅವಳು ಪಟ್ಟಣಕ್ಕೆ ಬಂದಳು. |
16. | ಅವಳು ತನ್ನ ಅತ್ತೆಯ ಬಳಿಗೆ ಬಂದಾಗ ಅವಳ ಅತ್ತೆಯು ನನ್ನ ಮಗಳೇ, ನಿನ್ನ ಕಾರ್ಯ ಏನಾಯಿತು? ಅಂದಳು. ಆಗ ಅವಳು ಆ ಮನುಷ್ಯನು ತನಗೆ ಮಾಡಿದ್ದನ್ನೆಲ್ಲಾ ಅವಳಿಗೆ ತಿಳಿಸಿದಳು; |
17. | ನೀನು ನಿನ್ನ ಅತ್ತೆಯ ಬಳಿಗೆ ಬರಿ ಕೈಯಾಗಿ ಹೋಗಬಾರದೆಂದು ಅವನು ಈ ಆರು ಸೊಲಿಗೆ ಜವೆಗೋಧಿಯನ್ನು ನನಗೆ ಕೊಟ್ಟನು ಅಂದಳು. |
18. | ಅದಕ್ಕೆ ಅವಳು ನನ್ನ ಮಗಳೇ, ಈ ಕಾರ್ಯ ಏನಾಗುವದೋ ಎಂದು ನೀನು ತಿಳಿಯುವ ವರೆಗೂ ಸುಮ್ಮನೆ ಇರು; ಯಾಕಂದರೆ ಆ ಮನುಷ್ಯನು ಈ ಹೊತ್ತು ಈ ಕಾರ್ಯವನ್ನು ತೀರಿಸುವ ವರೆಗೂ ವಿಶ್ರಾಂತಿಯಲ್ಲಿ ಇರನು ಅಂದಳು. |
← Ruth (3/4) → |