← SongOfSongs (4/8) → |
1. | ಇಗೋ, ನನ್ನ ಪ್ರಿಯಳೇ, ನೀನು ಸುಂದರಿಯು! ಇಗೋ, ನೀನು ಸುಂದರಿಯು! ನಿನ್ನ ಮುಸುಕಿನೊಳಗೆ ನಿನಗೆ ಪಾರಿವಾಳದ ಕಣ್ಣುಗ ಳಿವೆ. ನಿನ್ನ ಕೂದಲು ಗಿಲ್ಯಾದಿನ ಪರ್ವತದಲ್ಲಿ ಕಾಣ ಲ್ಪಡುವ ಮೇಕೆ ಮಂದೆಯ ಹಾಗೆ ಇದೆ. |
2. | ನಿನ್ನ ಹಲ್ಲುಗಳು ತೊಳೆಯಲ್ಪಟ್ಟು ಮೇಲಕ್ಕೆ ಬರುವ ಉಣ್ಣೆ ಕತ್ತರಿಸಿದ ಕುರಿಮಂದೆಗೆ ಸಮಾನವಾಗಿವೆ; ಅವೆಲ್ಲಾ ಅವಳಿ ಜವಳಿ ಈಯುತ್ತವೆ; ಅವುಗಳಲ್ಲಿ ಒಂದೂ ಬಂಜೆಯಾಗಿರದು. |
3. | ನಿನ್ನ ತುಟಿಗಳು ಕೆಂಪು ದಾರದ ಹಾಗೆ ಅವೆ; ನಿನ್ನ ಮಾತು ರಮ್ಯವಾದದ್ದು; ನಿನ್ನ ಕೆನ್ನೆಯು ಮುಸುಕಿನೊಳಗೆ ವಿಭಾಗಿಸಿದ ದಾಳಿಂಬರ ಹಣ್ಣಿನ ಹಾಗೆ ಇದೆ. |
4. | ನಿನ್ನ ಕುತ್ತಿಗೆ ದಾವೀದನ ಆಯುಧ ಶಾಲೆಗೋಸ್ಕರ ಕಟ್ಟಿಸಲ್ಪಟ್ಟ ಬುರುಜಿನ ಹಾಗೆ ಇದೆ; ಅದರಲ್ಲಿ ಸಾವಿರ ಗುರಾಣಿಗಳು ತೂಗ ಹಾಕಿವೆ; ಅವುಗಳೆಲ್ಲಾ ಪರಾಕ್ರಮಶಾಲಿಗಳ ಡಾಲುಗಳು. |
5. | ನಿನ್ನ ಎರಡು ಸ್ತನಗಳು ತಾವರೆ ಹೂವುಗಳಲ್ಲಿ ಮೇಯುವ ಅವಳಿ ಜವಳಿಯಾದ ಎರಡು ಜಿಂಕೆಯ ಮರಿಗಳ ಹಾಗೆ ಅವೆ. |
6. | ಉದಯವಾಗುವ ವರೆಗೂ ನೆರಳುಗಳು ಓಡಿಹೋಗುವ ವರೆಗೂ ನಾನು ರಕ್ತಬೋಳದ ಪರ್ವತಕ್ಕೂ ಸಾಂಬ್ರಾಣಿಯ ಗುಡ್ಡಕ್ಕೂ ಹೋಗುವೆನು. |
7. | ನನ್ನ ಪ್ರಿಯಳೇ, ನೀನು ಪೂರ್ಣ ಸುಂದರಿಯು, ನಿನ್ನಲ್ಲಿ ಕಳಂಕವೇನೂ ಇಲ್ಲ. |
8. | ನನ್ನ ಸಂಗಡ ಲೆಬನೋನಿನಿಂದ ಬಾ, ಪತ್ನಿಯೇ; ಲೆಬನೋನಿನಿಂದ ನನ್ನ ಸಂಗಡ ಬಾ. ಅಮಾನದ ಶಿಖರದಿಂದ, ಶೆನೀರ್, ಹೆರ್ಮೋನ್ ಶಿಖರದಿಂದ, ಸಿಂಹದ ಗವಿಗಳಿಂದ, ಚಿರತೆಗಳ ಪರ್ವತಗಳಿಂದ ದೃಷ್ಟಿಸು. |
9. | ನನ್ನ ಹೃದಯವನ್ನು ನೀನು ಸೆಳಕೊಂಡಿದ್ದೀ. ನನ್ನ ಸಹೋದರಿಯೇ, ವಧುವೇ, ನಿನ್ನ ಕಣ್ಣುಗಳ ಏಕದೃಷ್ಟಿಯಿಂದಲೂ ನಿನ್ನ ಕೊರಳಲ್ಲಿರುವ ಒಂದು ಕಂಠಮಾಲೆಯಿಂದಲೂ ನನ್ನ ಹೃದಯವನ್ನು ನೀನು ಸೆಳಕೊಂಡಿದ್ದೀ. |
10. | ನಿನ್ನ ಪ್ರೀತಿಯು ಎಷ್ಟೋ ಚಂದ! ನನ್ನ ಸಹೋದರಿಯೇ, ವಧುವೇ, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ಎಲ್ಲಾ ಸುಗಂಧ ಗಳಿಗಿಂತ ನಿನ್ನ ತೈಲಗಳ ವಾಸನೆಯು ಎಷ್ಟೋ ಉತ್ತಮ! |
11. | ನಿನ್ನ ತುಟಿಗಳು, ಓ ನನ್ನ ವಧುವೇ, ಜೇನುಗೂಡಿನ ಹಾಗೆ ಸುರಿಯುತ್ತವೆ; ಹಾಲೂ ಜೇನೂ ನಿನ್ನ ನಾಲಿಗೆಯ ಕೆಳಗೆ ಅವೆ; ನಿನ್ನ ವಸ್ತ್ರಗಳ ವಾಸನೆಯು ಲೆಬನೋನಿನ ವಾಸನೆಯ ಹಾಗೆ ಅವೆ. |
12. | ನನ್ನ ಸಹೋದರಿಯು, ಪತ್ನಿಯು, ಮುಚ್ಚಲ್ಪಟ್ಟ ತೋಟವೂ ಮುಚ್ಚಲ್ಪಟ್ಟ ಒರತೆಯೂ ಮುದ್ರೆ ಹಾಕಲ್ಪಟ್ಟ ಬುಗ್ಗೆಯೂ ಆಗಿದ್ದಾಳೆ. |
13. | ನಿನ್ನ ಗಿಡಗಳಲ್ಲಿ ದಾಳಿಂಬರದ ವನವೂ ರಮ್ಯವಾದ ಫಲಕೊಡುವ ಗಿಡಗಳೂ ಕರ್ಪೂರವೂ ಜಟಾಮಾಂಸಿಯೂ ಕೂಡ ಇವೆ. |
14. | ಜಟಾಮಾಂಸಿಯೂ-- ಕೇಸರಿಯೂ ಬಜೆಯೂ ಲವಂಗವೂ ಎಲ್ಲಾ ಸಾಂಬ್ರಾಣಿ ಗಿಡಗಳೂ ರಕ್ತಬೋಳವೂ ಅಗರೂ |
15. | ಸಮಸ್ತ ಮುಖ್ಯವಾದ ಸುಗಂಧದ್ರವ್ಯ ಗಳೂ ತೋಟಗಳ ಬುಗ್ಗೆಯೂ ಜೀವಜಲಗಳ ಬಾವಿಯೂ ಲೆಬನೋನಿನಿಂದ ಹರಿಯುವ ಕಾಲುವೆ ಗಳೂ ನಿನ್ನಲ್ಲಿ ಇವೆ. |
16. | ಓ ಉತ್ತರ ಗಾಳಿಯೇ, ಎಚ್ಚರವಾಗು! ದಕ್ಷಿಣ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು; ಅದರ ಸುಗಂಧಗಳು ಹರಿಯಲಿ. ನನ್ನ ಪ್ರಿಯನು ತನ್ನ ತೋಟದಲ್ಲಿ ಬಂದು ತನ್ನ ರಮ್ಯವಾದ ಫಲಗ ಳನ್ನು ತಿನ್ನಲಿ. |
← SongOfSongs (4/8) → |