← SongOfSongs (6/8) → |
1. | ನಿನ್ನ ಪ್ರಿಯನು ಎಲ್ಲಿಗೆ ಹೋದನು? ಸ್ತ್ರೀಯರಲ್ಲಿ ಅತಿ ಸುಂದರಿಯೇ, ನಾವು ಅವನನ್ನು ನಿನ್ನ ಸಂಗಡ ಹುಡುಕುವ ಹಾಗೆ ನಿನ್ನ ಪ್ರಿಯನು ಯಾವ ಕಡೆಗೆ ತಿರುಗಿದ್ದಾನೆ? |
2. | ನನ್ನ ಪ್ರಿಯನು ತೋಟಗಳಲ್ಲಿ ಮೇಯಿಸುವದಕ್ಕೂ ತಾವರೆಗಳನ್ನು ಕೂಡಿಸುವದಕ್ಕೂ ತನ್ನ ತೋಟಕ್ಕೆ ಸುಗಂಧಗಳ ಮಡಿಗೆ ಹೋಗಿದ್ದಾನೆ. |
3. | ನಾನು ನನ್ನ ಪ್ರಿಯನವಳು, ನನ್ನ ಪ್ರಿಯನು ನನ್ನವನು; ಅವನು ತಾವರೆ ಹೂವುಗಳಲ್ಲಿ ಮೇಯಿಸುತ್ತಾನೆ. |
4. | ಓ ನನ್ನ ಪ್ರಿಯಳೇ, ನೀನು ತಿರ್ಚದಂತೆ ಸುಂದ ರಿಯೂ ಯೆರೂಸಲೇಮಿನ ಹಾಗೆ ರಮ್ಯಳೂ ಧ್ವಜ ಗಳಿರುವ ದಂಡಿನ ಹಾಗೆ ಭಯಂಕರಳೂ ಆಗಿದ್ದೀ. |
5. | ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ತಿರುಗಿಸು; ಅವು ನನ್ನನ್ನು ಜೈಸಿದವು. ನಿನ್ನ ಕೂದಲು ಗಿಲ್ಯಾದಿನಿಂದ ಕಾಣಿಸಲ್ಪಡುವ ಮೇಕೆ ಮಂದೆಯ ಹಾಗೆ ಅದೆ. |
6. | ನಿನ್ನ ಹಲ್ಲುಗಳು ತೊಳೆದ ಮೇಲೆ ಏರಿ ಬರುವ ಕುರಿ ಮಂದೆಗೆ ಸಮಾನವಾಗಿವೆ; ಅವೆಲ್ಲಾ ಅವಳಿ ಜವಳಿ ಈಯುತ್ತವೆ; ಅವುಗಳಲ್ಲಿ ಒಂದೂ ಬಂಜೆ ಯಾಗಿರದು. |
7. | ನಿನ್ನ ಕೆನ್ನೆಗಳು ನಿನ್ನ ಮುಸುಕಿನ ಕೆಳಗೆ ವಿಭಾಗಿಸಿದ ದಾಳಿಂಬರ ಹಣ್ಣಿನ ಹಾಗೆ ಅವೆ. |
8. | ಅರು ವತ್ತು ಮಂದಿ ರಾಣಿಯರೂ ಎಂಭತ್ತು ಮಂದಿ ಉಪಪತ್ನಿಯರೂ ಲೆಕ್ಕವಿಲ್ಲದ ಕನ್ಯೆಯರೂ ಇದ್ದಾರೆ. |
9. | ನನ್ನ ಪಾರಿವಾಳವು, ನನ್ನ ನಿರ್ಮಲೆಯು, ಒಬ್ಬಳೇ; ಅವಳು ತನ್ನ ತಾಯಿಗೆ ಒಬ್ಬಳೇ. ತನ್ನ ಹೆತ್ತವಳಿಗೆ ಆಯಲ್ಪಟ್ಟವಳಾಗಿದ್ದಾಳೆ, ಕುಮಾರ್ತೆಯರು ಅವ ಳನ್ನು ನೋಡಿ ಆಶೀರ್ವದಿಸಿದರು; ಹೌದು, ರಾಣಿ ಯರೂ ಉಪಪತ್ನಿಯರೂ ಅವಳನ್ನು ಹೊಗಳಿದರು. |
10. | ಚಂದ್ರನ ಹಾಗೆ ಸುಂದರಿಯೂ ಸೂರ್ಯನ ಹಾಗೆ ನಿರ್ಮಲವಾದವಳೂ ಧ್ವಜಗಳಿರುವ ದಂಡಿನ ಹಾಗೆ ಭಯಂಕರವಾದವಳೂ ಉದಯದ ಹಾಗೆ ದೃಷ್ಟಿಸಿ ನೋಡುವವಳೂ ಆಗಿರುವ ಇವಳು ಯಾರು? |
11. | ತಗ್ಗಿನ ಫಲಗಳನ್ನು ನೋಡುವದಕ್ಕೂ ದ್ರಾಕ್ಷೇ ಬಳ್ಳಿಯು ಬೆಳೆದು? ದಾಳಿಂಬರ ಗಿಡಗಳು ಚಿಗುರಿ ವೆಯೋ ಎಂದು ನೋಡುವದಕ್ಕೂ ನಾನು ಬಾದಾ ಮಿಯ ತೋಟಕ್ಕೆ ಹೋದೆನು. |
12. | ನಾನು ತಿಳಿದಿದ್ದಾಗ ನನ್ನ ಪ್ರಾಣವು ನನ್ನನ್ನು ಅಮ್ಮಿನಾದಿಬ್‌ನ ರಥಗಳ ಹಾಗೆ ಮಾಡಿತು. |
13. | ತಿರಿಗಿ ಬಾ, ತಿರಿಗಿ ಬಾ, ಓ ಶೂಲಮ್‌ನವಳೇ; ನಾವು ನಿನ್ನನ್ನು ದೃಷ್ಟಿಸುವ ಹಾಗೆ ತಿರಿಗಿ ಬಾ, ತಿರಿಗಿ ಬಾ. ಎರಡು ಸೈನ್ಯದ ಗುಂಪಿನವರ ಹಾಗೆಯೇಶೂಲಮ್ಯಳಲ್ಲಿ ನೀವು ದೃಷ್ಟಿಸಬೇಕಾದದ್ದೇನು? |
← SongOfSongs (6/8) → |