← SongOfSongs (7/8) → |
1. | ಓ ರಾಜಪುತ್ರನ ಮಗಳೇ! ಕೆರಗಳು ಮೆಟ್ಟಿರುವ ನಿನ್ನ ಪಾದಗಳು ಎಷ್ಟು ಸುಂದ ರವಾಗಿವೆ; ನಿನ್ನ ಸೊಂಟದ ಕೀಲುಗಳು ಪ್ರವೀಣನ ಕೈಕೆಲಸವಾದ ವಿಚಿತ್ರ ಆಭರಣಗಳಂತಿವೆ |
2. | ನಿನ್ನ ಹೊಕ್ಕಳು ಮದ್ಯ ಕಡಿಮೆ ಇಲ್ಲದೆ ದುಂಡಾಗಿರುವ ಬಟ್ಟಲಿನ ಹಾಗಿದೆ. ನಿನ್ನ ಉದರವು ತಾವರೆಯ ಹೂವು ಗಳು ಸುತ್ತಿಕೊಂಡಿರುವ ಗೋಧಿಯ ರಾಶಿಯಾಗಿದೆ. |
3. | ನಿನ್ನ ಎರಡು ಸ್ತನಗಳು ಅವಳಿ ಜವಳಿಯಾದ ಎರಡು ಜಿಂಕೆಮರಿಗಳ ಹಾಗಿವೆ. |
4. | ನಿನ್ನ ಕುತ್ತಿಗೆ ದಂತ ಗೋಪುರದ ಹಾಗಿದೆ; ನಿನ್ನ ಕಣ್ಣುಗಳು ಬತ್‌ರಬ್ಬಿ ಮ್‌ನ ಬಾಗಲ ಬಳಿಯಲ್ಲಿರುವ ಹೆಷ್ಬೋನಿನ ಕೊಳ ಗಳಾಗಿವೆ; ನಿನ್ನ ಮೂಗು ದಮಸ್ಕದ ಕಡೆಗೆ ನೋಡುವ ಲೆಬನೋನಿನ ಗೋಪುರದ ಹಾಗಿದೆ. |
5. | ನಿನ್ನ ತಲೆಯು ಕರ್ಮೆಲಿನ ಹಾಗೆಯೂ ನಿನ್ನ ತಲೆಯ ಕೂದಲು ಧೂಮ್ರದ ಹಾಗೆಯೂ ಇವೆ. ಅರಸನು ವೇದಿಕೆಗಳಲ್ಲಿ ಹಿಡಿಯಲ್ಪಟ್ಟಿದ್ದಾನೆ. |
6. | ಓ ಪ್ರಿಯಳೇ, ನೀನು ಆನಂದಗಳಿಗಾಗಿ ಎಷ್ಟೋ ಸುಂದರಿಯು, ಎಷ್ಟೋ ಮನೋಹರಳು ಆಗಿದ್ದೀ. |
7. | ನಿನ್ನ ನೀಳವು ಖರ್ಜೂರ ಮರದ ಹಾಗೆ ಇದೆ; ನಿನ್ನ ಸ್ತನಗಳು ದ್ರಾಕ್ಷೇ ಗೊಂಚಲುಗಳ ಹಾಗೆ ಇವೆ. |
8. | ನಾನು ಖರ್ಜೂರದ ಮರದ ಬಳಿಗೆ ಹೋಗಿ ಅದರ ಗರಿಗಳನ್ನು ಹಿಡುಕೊಳ್ಳುವೆ ಅಂದುಕೊಂಡೆನು. ಇದಲ್ಲದೆ ಈಗ ನಿನ್ನ ಸ್ತನಗಳು ದ್ರಾಕ್ಷೇ ಗೊಂಚಲು ಗಳ ಹಾಗೆಯೂ ನಿನ್ನ ಮೂಗಿನ ವಾಸನೆಯು ಸೇಬುಹಣ್ಣಿನ ಹಾಗೆಯೂ ಇರುವವು. |
9. | ನಿನ್ನ ಬಾಯಿಯ ಅಂಗಳವು ನನ್ನ ಪ್ರಿಯನ ಉತ್ತಮವಾದ ದ್ರಾಕ್ಷಾರಸದ ಹಾಗಿರುವದು. ಅದು ಸಿಹಿಯಾಗಿ ಹೋಗುವಂಥದ್ದು, ನಿದ್ರೆಮಾಡುವವರ ತುಟಿಗಳನ್ನು ಮಾತಾಡಿಸುವಂಥದ್ದು. |
10. | ನಾನು ನನ್ನ ಪ್ರಿಯನವಳು; ಅವನ ಇಚ್ಛೆಯು ನನ್ನ ಕಡೆಗಿರುವದು. |
11. | ನನ್ನ ಪ್ರಿಯನೇ, ನಾವು ಹೊಲಕ್ಕೆ ಹೋಗಿ ಗ್ರಾಮಗಳಲ್ಲಿ ವಸತಿಯಾಗಿರುವ ಬಾ. |
12. | ನಾವು ಉದಯದಲ್ಲಿ ಎದ್ದು,ದ್ರಾಕ್ಷೇ ತೋಟಗಳಿಗೆ ಹೋಗಿ, ದ್ರಾಕ್ಷೇ ಬಳ್ಳಿಯು ಬೆಳೆಯುವದೋ? ಅದರ ಎಳೆಗಾಯಿಗಳು ಕಾಣಿ ಸುತ್ತವೋ? ದಾಳಿಂಬರ ಗಿಡಗಳು ಚಿಗುರುತ್ತವೋ ನೋಡುವ. ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ತೋರಿಸುವೆನು. |
13. | ಓ ನನ್ನ ಪ್ರಿಯನೇ, ದುದಾಯಗಳು ವಾಸನೆಕೊಡುತ್ತವೆ; ನಮ್ಮ ಬಾಗಲುಗಳ ಬಳಿಯಲ್ಲಿ ನಿನಗೋಸ್ಕರ ನಾನು ಇಟ್ಟುಕೊಂಡ ವಿವಿಧ ಹೊಸ ಹಳೇ ರಮ್ಯವಾದ ಫಲಗಳು ಅವೆ. |
← SongOfSongs (7/8) → |