← SongOfSongs (8/8) |
1. | ನೀನು ನನ್ನ ತಾಯಿಯ ಸ್ತನಗಳನ್ನು ಕುಡಿದ ನನ್ನ ಸಹೋದರನ ಹಾಗೆ ಇದ್ದರೆ ಎಷ್ಟೋ ಉತ್ತಮ! ನಾನು ನಿನ್ನನ್ನು ಹೊರಗೆ ಕಂಡರೆ ನಿನಗೆ ಮುದ್ದಿಡುವೆನು; ಹೌದು, (ಜನರು) ನನ್ನನ್ನು ತಿರಸ್ಕರಿಸರು. |
2. | ನೀನು ನನ್ನನ್ನು ಉಪದೇಶಿಸುವ ಹಾಗೆ ನಾನು ನಿನ್ನನ್ನು ನಡಿಸಿ ನನ್ನ ತಾಯಿಯ ಮನೆಯೊಳಗೆ ನಿನ್ನನ್ನು ಬರಮಾಡಿ, ದಾಳಿಂಬರ ಹಣ್ಣಿನ ರಸವಾದ ಊರಿಟ್ಟ ಪಾನವನ್ನು ನಿನಗೆ ಕುಡಿಸುತ್ತಿದ್ದೆನು. |
3. | ಅವನ ಎಡಗೈ ನನ್ನ ತಲೆಯ ಕೆಳಗಿರುವದು; ಅವನ ಬಲಗೈ ನನ್ನನ್ನು ಅಪ್ಪಿಕೊಳ್ಳುವದು. |
4. | ಓ ಯೆರೂಸಲೇಮಿನ ಕುಮಾರ್ತೆಯರೇ, ನಿಮಗೆ ಆಜ್ಞಾಪಿಸುತ್ತೇನೆ--ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ಎಬ್ಬಿಸದೆಯೂ ನನ್ನ ಪ್ರೀತಿಯನ್ನು ಎಚ್ಚರಿ ಸದೆಯೂ ಇರ್ರಿ. |
5. | ತನ್ನ ಪ್ರಿಯನ ಮೇಲೆ ಆತುಕೊಂಡು ಅರಣ್ಯದಿಂದ ಬರುವ ಇವಳು ಯಾರು? ಸೇಬು ಗಿಡದ ಕೆಳಗೆ ನಿನ್ನನ್ನು ಎಚ್ಚರಿಸಿದೆನು; ಅಲ್ಲಿ ನಿನ್ನ ತಾಯಿ ನಿನ್ನನ್ನು ಪಡೆದಳು; ಅಲ್ಲಿ ನಿನ್ನನ್ನು ಹೆತ್ತವಳು ನಿನ್ನನ್ನು ಪಡೆದಳು. |
6. | ನಿನ್ನ ಹೃದಯದ ಮೇಲೆ ಒಂದು ಮುದ್ರೆಯ ಹಾಗೆಯೂ ನಿನ್ನ ಕೈಮೇಲೆ ಒಂದು ಮುದ್ರೆಯ ಹಾಗೆಯೂ ನನ್ನನ್ನು ಹಾಕು; ಪ್ರೀತಿಯು ಮರಣದ ಹಾಗೆ ಬಲವಾಗಿರುವದು; ರೋಷವು ಸಮಾಧಿಯ ಹಾಗೆ ಕ್ರೂರವಾಗಿರುವದು; ಅದರ ಕಲ್ಲಿದ್ದಲುಗಳ ಬೆಂಕಿಯು ಪ್ರಜ್ವಲಿಸುವ ಜ್ವಾಲೆಯ ಕಿಡಿಗಳಾಗಿ ಇರುವವು. |
7. | ಅನೇಕ ಜಲಗಳು ಪ್ರೀತಿಯನ್ನು ಆರಿ ಸಲಾರವು; ಪ್ರವಾಹಗಳು ಅದನ್ನು ಮುಣುಗಿಸ ಲಾರವು; ಮನುಷ್ಯನು ತನ್ನ ಮನೆಯ ಆಸ್ತಿಯನ್ನೆಲ್ಲಾ ಪ್ರೀತಿಗೋಸ್ಕರ ಕೊಟ್ಟರೆ ಅದು ಸಂಪೂರ್ಣವಾಗಿ ತಿರಸ್ಕರಿಸಲ್ಪಡುವದು. |
8. | ನಮಗೆ ಚಿಕ್ಕವಳಾದ ಒಬ್ಬ ಸಹೋದರಿ ಇದ್ದಾಳೆ; ಅವಳಿಗೆ ಸ್ತನಗಳಿಲ್ಲ. ಅವಳು ಕೇಳಲ್ಪಡುವ ದಿವಸದಲ್ಲಿ ನಾವು ನಮ್ಮ ಸಹೋದರಿಗೋಸ್ಕರ ಏನು ಮಾಡುವ? |
9. | ಅವಳು ಗೋಡೆಯಾಗಿದ್ದರೆ ನಾವು ಅವಳ ಮೇಲೆ ಬೆಳ್ಳಿಯ ಅರಮನೆಯನ್ನು ಕಟ್ಟುವೆವು. ಅವಳು ಬಾಗಲಾಗಿದ್ದರೆ ದೇವದಾರು ಹಲಿಗೆಗಳಿಂದ ಅವಳನ್ನು ಮುಚ್ಚುವೆವು. |
10. | ನಾನು ಗೋಡೆಯೇ; ನನ್ನ ಸ್ತನಗಳು ಬುರುಜುಗಳ ಹಾಗೆ ಅವೆ. |
11. | ಆಗ, ನಾನು ಅವನ ದೃಷ್ಟಿಯಲ್ಲಿ ದಯ ಹೊಂದಿದವಳ ಹಾಗಿದ್ದೆನು. ಬಾಲ್ಹಾಮೋನಿನಲ್ಲಿ ಸೊಲೊಮೋನನಿಗೆ ಒಂದು ದ್ರಾಕ್ಷೇ ತೋಟ ಇತ್ತು. ಅವನು ಆ ದ್ರಾಕ್ಷೇ ತೋಟವನ್ನು ಒಕ್ಕಲಿಗರಿಗೆ ಗುತ್ತಿ ಗೆಗೆ ಕೊಟ್ಟನು. ಒಬ್ಬೊಬ್ಬನು ಅದರ ಫಲಕ್ಕೋಸ್ಕರ ಸಾವಿರ ಬೆಳ್ಳಿಯ ನಾಣ್ಯಗಳನ್ನು ತರಬೇಕಾಗಿತ್ತು. |
12. | ನನ್ನದಾದ ನನ್ನ ದ್ರಾಕ್ಷೇ ತೋಟವು ನನ್ನ ಮುಂದೆ ಅದೆ. ಓ ಸೊಲೊಮೋನನೇ, ನಿನಗೆ ಒಂದು ಸಾವಿರ ಇರತಕ್ಕದ್ದು. ಅದರ ಫಲವನ್ನು ಕಾಪಾಡುವವರಿಗೆ ಇನ್ನೂರು ಆಗಲಿ. |
13. | ತೋಟಗಳಲ್ಲಿ ವಾಸವಾಗಿರುವವನೇ, ಜತೆ ಗಾರರು ನಿನ್ನ ಶಬ್ದವನ್ನು ಆಲೈಸುತ್ತಾರೆ. ನಾನು ಕೇಳುವಂತೆ ಮಾಡು. |
14. | ನನ್ನ ಪ್ರಿಯನೇ, ತ್ವರೆಮಾಡು, ಜಿಂಕೆಯ ಹಾಗೆ ಇಲ್ಲವೆ ಸುಗಂಧವುಳ್ಳ ಪರ್ವತಗಳ ಮೇಲಿರುವ ದುಪ್ಪಿ ಮರಿಯ ಹಾಗೆಯೆ ಇರು. |
← SongOfSongs (8/8) |